ಕೋಲಾರ

ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

Published On :

ಚಿಕ್ಕಬಳ್ಳಾಪುರ: ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡಿಕೊಡಲು ಸತಾಯಿಸುವ, ಕಾನೂನು ಉಲ್ಲಂಘನೆಗೆ ಸಂಬಂಧಪಟ್ಟಂತೆ ಸಾರ್ವಜನಿಕರ ಅಹವಾಲು ಸಭೆಯನ್ನು ಕೈಗೊಂಡು ಲೋಕಾಯುಕ್ತ ಪೊಲೀಸರು ಜನರ ಸಮಸ್ಯೆಗಳನ್ನು ಆಲಿಸಿದರು.
ತಾಪಂ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಲೋಕಾಯುಕ್ತ ಪೊಲೀಸರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆಯಲ್ಲಿ ಪ್ರಮುಖವಾಗಿ ಅಕ್ರಮ ಜಮೀನು ಒತ್ತುವರಿ, ರಸ್ತೆಗಳು ಹಾಳಾಗಿರುವುದು, ಕಂದಾಯ ಸಮಸ್ಯೆ, ಪಡಿತರ ಸಮಸ್ಯೆ, ಮನವಿಗಳಿಗೆ ಅಧಿಕಾರಿಗಳ ನಕಾರತ್ಮಾಕ ಸ್ಪಂದನೆ ಸೇರಿದಂತೆ ಪ್ರಮುಖ ಸಮಸ್ಯೆಗಳು ಕುರಿತು ಬೆಳಕು ಚೆಲ್ಲಲಾಯಿತು.
ಲೋಕಾಯುಕ್ತ ಇನ್ಸ್‌ಪೆಕ್ಟರ್ ಮಂಜೇಗೌಡ ಮಾತನಾಡಿ, ಸಾರ್ವಜನಿಕರು ನಿರ್ಭಯವಾಗಿ ಕಾನೂನಿಗೆ ವಿರುದ್ಧವಾಗಿ ಕೆಲಸ ಮಾಡಿ ಭ್ರಷ್ಟಾಚಾರದಲ್ಲಿ ತೊಡಗಿರುವ ಬಗ್ಗೆ ಲಿಖಿತವಾಗಿ ದೂರನ್ನು ಕೊಡಬೇಕು. ಆಗ ಅರ್ಜಿಯನ್ನು ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲೆಯಲ್ಲಿ ಪ್ರತಿ ತಿಂಗಳು ಅಹವಾಲು ಸಭೆಯನ್ನು ಹಮ್ಮಿಕೊಂಡು ಜನರ ಸಮಸ್ಯೆಗಳನ್ನು ಆಲಿಸಲಾಗುತ್ತಿದೆ.
 ಅದೇ ರೀತಿ ಸಭೆಯಲ್ಲಿ ಸಲ್ಲಿಕೆಯಾದ ಅರ್ಜಿಯನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡುತ್ತಿದ್ದು ಸಕಾಲದಲ್ಲಿ ಕೆಲಸ ಮಾಡಿಕೊಡದೇ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ತಹಸೀಲ್ದಾರ್ ನಟೇಶ್ ಮಾತನಾಡಿ, ಎಲ್ಲಾ ಇಲಾಖೆಗಳು ಅರ್ಜಿಗಳನ್ನು ಸಕಾಲ ಸೇವೆಗಳಡಿ ಸ್ವೀಕರಿಸಬೇಕು. ಇತ್ತೀಚೆಗೆ ಸಕಾಲದ ಅರ್ಜಿಗಳ ಪ್ರಮಾಣ ಇಳಿಮುಖವಾಗುತ್ತಿದೆ. ಆದ್ದರಿಂದ ಸಕಾಲದಡಿ ಅರ್ಜಿ ತೆಗೆದುಕೊಂಡು ನಿಗಧಿತ ಕಾಲಮಿತಿಯಲ್ಲಿ ಸೇವೆ ಒದಗಿಸಬೇಕೆಂದು ಅವರು ತಿಳಿಸಿದರು. ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.