ಶಾಶ್ವತ ನೀರಾವರಿ ಹೋರಾಟಕ್ಕೆ ಮತ್ತೆ ಚಾಲನೆ
ಕ.ಪ್ರ.ವಾರ್ತೆ , ಚಿಕ್ಕಬಳ್ಳಾಪುರ , ಸೆ. 29
ಜಿಲ್ಲೆ ಸೇರಿದಂತೆ ಬಯಲು ಸೀಮೆಯ ಜಿಲ್ಲೆಗಳಿಗೆ ಪರಮಶಿವಯ್ಯನವರ ವರದಿಯಾಧಾರಿತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರದಲ್ಲಿ ಅನಿರ್ದಿಷ್ಠಾವದಿ ಧರಣಿ ನಡೆಸಿದಕ್ಕೆ ವರ್ಷ ತುಂಬಿದ ಹಿನ್ನೆಲೆಯಲ್ಲಿ ನೀರಾವರಿ ಹೋರಾಟಗಾರರು, ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮತ್ತೊಮ್ಮೆ ಹೋರಾಟ ನಡೆಸುತ್ತಿದ್ದಾರೆ.
ಕಳೆದ ವರ್ಷ (2012) ರಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ದಿನದಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಉಪ ವಿಭಾಗಾಧಿಕಾರಿಗಳ ಕಚೇರಿಯ ಮುಂಭಾಗ ಅನಿರ್ದಿಷ್ಠಾವಧಿ ಧರಣಿ ನಡೆಸಿತ್ತು. ಪಕ್ಷಾತೀತ, ಜಾತ್ಯತೀತವಾಗಿ ಅನೇಕ ಸಂಘ ಸಂಸ್ಥೆಗಳು ಪ್ರತಿದಿನ ಧರಣಿ ಕುಳಿತು ಶಾಶ್ವತ ನೀರಾವರಿ ಸೌಲಭ್ಯಕ್ಕೆ ಒತ್ತಾಯಿಸಿತ್ತು. ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ, ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ, ಶ್ರೀನಿರ್ಮಲಾನಂದನಾಥ ಸ್ವಾಮೀಜಿ, ಮುಖ್ಯಮಂತ್ರಿ ಚಂದ್ರು, ಸಿನಿಮಾ ನಿರ್ದೇಶಕ ಸೀತರಾಮ್, ಆರ್. ಚಂದ್ರು ಸೇರಿದಂತೆ ಅನೇಕರು ಹೋರಾಟದಲ್ಲಿ ಭಾಗವಹಿಸಿದ್ದರು. ಇದೀಗ ಈ ಹೋರಾಟಕ್ಕೆ ಅ.2 ರಂದು ಒಂದು ವರ್ಷ ತುಂಬುತ್ತಿದೆ. ಈ ಹಿನ್ನೆಲೆಯಲ್ಲಿ ಮತ್ತೆ ಎಚ್ಚೆತ್ತುಕೊಂಡಿರುವ ನೀರಾವರಿ ಹೋರಾಟ ಸಮಿತಿಯು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟವನ್ನು ನಡೆಸುತ್ತಿದೆ.
ಅ.2 ಪ್ರತಿಭಟನೆ: ಶಾಶ್ವತ ನೀರಾವರಿ ಸೌಲಭ್ಯಕ್ಕೆ ಒತ್ತಾಯಿಸಿ ಅ.2 ರಂದು ನಗರದ ಉಪ ವಿಭಾಗಾಧಿಕಾರಿಗಳ ಕಚೇರಿಯ ಆವರಣದಲ್ಲಿ ಒಂದು ದಿನ ಸಾಂಕೇತಿಕ ಪ್ರತಿಭಟನೆ ನಡೆಸಲಾಗುವುದು ಎಂದು ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ ಆಂಜನೇಯರೆಡ್ಡಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅ.2 ರಂದು ಉಪ ವಿಭಾಗಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ, ಶಾಲಾ ಕಾಲೇಜುಗಳು ಬಂದ್, ಸಂಸದರ ಕಚೇರಿಗೆ ಮುತ್ತಿಗೆ ಸೇರಿದಂತೆ ನಾನಾ ರೀತಿಯ ಹೋರಾಟಗಳನ್ನು ನಡೆಸಲಾಗುವುದು ಎಂದು ತಿಳಿಸಿದರು. ಗೋಷ್ಠಿಯಲ್ಲಿ ನೀರಾವರಿ ಹೋರಾಟಗಾರರಾದ ಕೆ.ಸಿ. ರಾಜಾಕಾಂತ್, ಸು.ಧಾ. ವೆಂಕಟೇಶ್, ಯಲುವಹಳ್ಳಿ ಸೊಣ್ಣೇಗೌಡ, ಸುಷ್ಮಾ ಶ್ರೀನಿವಾಸ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

