5ನೇ ವೇತನ ಆಯೋಗ ಜಾರಿಗೆ ಆಗ್ರಹ
ಚಿಂತಾಮಣಿ: ಸರ್ಕಾರಿ ನೌಕರರಿಗೆ 5ನೇ ವೇತನ ಜಾರಿಗೆಯಾಗದಿರುವುದರ ಬಗ್ಗೆ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ತಿನ ತಾಲೂಕು ಘಟಕದ ಅಧ್ಯಕ್ಷ ಶಿವಾರೆಡ್ಡಿ ಅಸಮದಾನ ವ್ಯಕ್ತಪಡಿಸಿದ್ದಾರೆ.
ಸರ್ಕಾರಿ, ಖಾಸಗಿ ತಾರತಮ್ಯ ನೀತಿ ಸರಿಪಡಿಸುವ ದೃಷ್ಟಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿ ಹಾಗೂ ಶಿಕ್ಷಣ ಹಕ್ಕು ಕಾಯಿದೆಯ ಎಲ್ಲಾ ಅಧಿನಿಯಮಗಳು ಎಲ್ಲಾ ಸರ್ಕಾರಗಳಿಗೂ ಒಂದೇ ರೀತಿ ಜಾರಿಗೆ ತಂದಿರುತ್ತದೆ. ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತರಲಾಗುತ್ತಿದೆ. ಆದ್ದರಿಂದ ಶಿಕ್ಷಕರು,ಪೋಷಕರು, ವಿದ್ಯಾರ್ಥಿಗಳು ಆರ್ಟಿಇ ಸದುಪಯೋಗ ಅರಿತು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಗುಣಮಟ್ಟದ ಶಿಕ್ಷಣ ದೊರೆಯುವಂತಾಗಲು ಸಹಕರಿಸುವಂತೆ ಕೋರಿದ್ದಾರೆ. ಕೇಂದ್ರ ಸರ್ಕಾರ ಈಗಾಗಲೇ ತನ್ನ ನೌಕರರಿಗೆ ಭತ್ಯೆ, ಸಂಬಳ ಹೆದಚ್ಚಿಸಲು 7ನೇ ವೇತನ ಆಯೋಗ ರಚನೆಗೆ ಆದೇಶಿಸಿದ್ದು, ನಮ್ಮ ರಾಜ್ಯ ಸರ್ಕಾರ 5ನೇ ವೇತನ ಆಯೋಗದ ವೇತನ ತಾರತಮ್ಯ ಇನ್ನೂ ಸರಿಪಡಿಸಿಲ್ಲ, 6ನೇ ವೇತನ ಆಯೋಗದ ರಚನೆಗೆ ಆಯೋಗ ರಚಿಸಿರುವುದಿಲ್ಲ, ದೇಶದಲ್ಲಿ ಏಕರೂಪ ಶಿಕ್ಷಣ ವ್ಯವಸ್ಥೆಯಿದ್ದು ಕೇಂದ್ರ ಸರ್ಕಾರದಂತೆ ರಾಜ್ಯ ಸರ್ಕಾರಿ ನೌಕರರಿಗೂ ಸಮಾನ ವೇತನ ಸಿಗುವಂತೆ ಸರ್ಕಾರ, ಇಲಾಖೆಗಳು ಕಾರ್ಯೋನ್ಮುಖರಾಗಲು ನೌಕರರು, ಶಿಕ್ಷಕರು ರಾಜ್ಯದ ಎಲ್ಲಾ ಸಂಘಗಳು ರಾಜ್ಯ ಸರ್ಕಾರದ ವಿರುದ್ಧ ಧ್ವನಿಯೆತ್ತಬೇಕೆಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

