ಅನಂತಮೂರ್ತಿ ಹೇಳಿಕೆ ಖಂಡಿಸಿ ಬ್ರಾಹ್ಮಣ ಸಂಘದ ಪ್ರತಿಭಟನೆ
ಕೋಲಾರ: ಸಾಹಿತಿ ಡಾ.ಯು.ಆರ್. ಅನಂತಮೂರ್ತಿ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಬ್ರಾಹ್ಮಣರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ ಸೋಮವಾರ ನಗರದಲ್ಲಿ ತಾಲೂಕು ಬ್ರಾಹ್ಮಣ ಸಂಘದಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಬ್ರಾಹ್ಮಣರು ಗೋಮಾಂಸ ಭಕ್ಷಕರು ಎಂದು ಹೇಳುವ ಮೂಲಕ ಧಾರ್ಮಿಕ ಭಾವನೆಗಳಿಗೆ ಹಾಗೂ ಸಮುದಾಯಕ್ಕೆ ಅವಮಾನ ಮಾಡುವ ರೀತಿಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಹೇಳಿಕೆ ನೀಡಿರುವುದು ತೀವ್ರ ಖಂಡನೀಯ ಎಂದು ಸಮಾಜದ ಮುಖಂಡರು ತಿಳಿಸಿದರು.
ಅನಂತಮೂರ್ತಿ, ಮೋದಿಯವರು ಪ್ರಧಾನಿ ಆಗುವ ಬಗ್ಗೆ ಹೇಳಿಕೆ ನೀಡಿ ರಾದ್ಧಾಂತ ಮಾಡಿಕೊಂಡು ಅವರ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕರ ಗಮನವನ್ನು ಬೇರೆಡೆ ತಿರುಗಿಸಲು ಅನವಶ್ಯಕವಾಗಿ ಬ್ರಾಹ್ಮಣ ಸಮುದಾಯದ ಬಗ್ಗೆ ಅತ್ಯಂತ ಹೀನವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿದರು.
ರಾಜಕೀಯ ಸ್ಥಾನಮಾನಕ್ಕಾಗಿ ಹಾತೊರೆಯುತ್ತಿರುವ ಅನಂತಮೂರ್ತಿ ಯಾವುದೋ ಪಕ್ಷದ ವಕ್ತಾರರಂತೆ ಮಾತನಾಡತೊಡಗಿದ್ದಾರೆ, ತಮ್ಮ ಮಾತಿನಿಂದ ಇತರರಿಗೆ ನೋವಾಗುತ್ತದೆಂಬ ಸಂಗತಿಯನ್ನು ಮರೆತು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊರಟಿದ್ದಾರೆ ಎಂದು ಖಂಡಿಸಿದರು.
ರಾಜ್ಯ ಸರ್ಕಾರ ಕೂಡಲೇ ಯು.ಆರ್. ಅನಂತಮೂರ್ತಿ ಮೇಲೆ ಕಾನೂನು ರೀತ್ಯಾ ಕ್ರಮ ಕೈಗೊಂಡು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಬ್ರಾಹ್ಮಣರ ಸಂಘದ ಮುಖಂಡರಾದ ಕೆ. ಪ್ರಹ್ಲಾದರಾವ್, ಪಿ. ಚಂದ್ರಪ್ರಕಾಶ್, ಮು.ಕೃ. ಪದ್ಮನಾಭರಾವ್, ಎಂ.ಕೆ. ಶ್ರೀನಿವಾಸ್, ಜಯಸಿಂಹ, ಜಯತೀರ್ಥ, ಟಿ.ಪಿ. ರಾಮಪ್ಪ, ಕಾರ್ತಿಕ್ ಕೃಷ್ಣಮೂರ್ತಿ, ಸೀಸಂದ್ರ ಕಿಟ್ಟಪ್ಪ, ಅಶ್ವತ್ಥನಾರಾಯಣ, ನಂದೀಶ್, ಎನ್.ಕೆ. ಅಚ್ಯುತ್ ರಾವ್, ಹಾಬಿ ರಮೇಶ್, ಜೆ.ಎನ್.ರಾಮಕೃಷ್ಣ, ಜೆ.ಎಸ್. ಪಾರ್ಥಸಾರಥಿ, ಸುಬ್ಬುಕೃಷ್ಣ ಇನ್ನಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

