ಕೋಲಾರ

ಅರ್ಧಕ್ಕೆ ನಿಂತ ರೇಲ್ವೆ ಮೇಲ್ಸೇತುವೆ ಕಾಮಗಾರಿ

Published On :

ಬಂಗಾರಪೇಟೆ: ಪಟ್ಟಣದ ಹೊರವಲಯದಲ್ಲಿರುವ ಹುಣಸನಹಳ್ಳಿ ರೇಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಿಂದ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿ ವಿಳಂಬವಾಗುತ್ತಿದ್ದ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸಹಭಾಗಿತ್ವದಲ್ಲಿ ರು. 13.65ಕೋಟಿ ವೆಚ್ಚದಲ್ಲಿ ತಲೆ ಎತ್ತಿದ ಮೇಲು ಸೇತುವೆ ಕಾಮಗಾರಿ ರಾಜ್ಯ ಸರ್ಕಾದ ನಿರ್ಲಕ್ಷ್ಯದಿಂದಾಗಿ ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ.
ಪಟ್ಟಣದಿಂದ ಬೂದಿಕೋಟೆ, ಆಂಧ್ರ ಮತ್ತು ತಮಿಳುನಾಡಿನ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಮಧ್ಯ ಹುಣಸನಹಳ್ಳಿ ಬಳಿ ರೇಲ್ವೆ ಗೇಟ್ ಇದ್ದು ಈ ಮಾರ್ಗದಲ್ಲಿ  ಪ್ರತಿ ಅರ್ಧ ಗಂಟೆಗೊಮ್ಮೆ ರೈಲುಗಲು ಓಡಾಡುವುದರಿಂದ ವಾಹನಗಳ ವಾಸರರಿಗೆ ಹಾಗೂ ಶಾಲಾ ವಾಹನಗಳಿಗೆ ತುಂಬಾ ಅನಾನುಕೂಲವಾಗಿತ್ತು.
ಈ ನಿಟ್ಟಿನಲ್ಲಿ ಸಾರ್ವಜನಿಕ ಒತ್ತಾಯಕ್ಕೆ ಮಣಿದ ಅಂದಿನ ಕೇಂದ್ರ ರೇಲ್ವೆ ರಾಜ್ಯ ಸಚಿವ ಕೆ.ಎಚ್.ಮುನಿಯಪ್ಪ 13.65ಕೋಟಿ ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಶುಂಕುಸ್ಥಾಪನೆ ನೆರವೇರಿಸಿದ್ದರು.
50-50 ಅನುಪಾತ: ಒಟ್ಟು ಮೊತ್ತದಲ್ಲಿ ಅರ್ಧ ಕೇಂದ್ರ ಸರ್ಕಾರದ್ದು ಉಳಿದ ಅರ್ಧ ರಾಜ್ಯ ಸರ್ಕಾರ ಬರಿಸಬೇಕೆಂದು ಒಪ್ಪಂದ ಮಾಡಿಕೊಳ್ಳಲಾಗಿತ್ತು, ಕೇಂದ್ರ ಸರ್ಕಾರ ಪಾಲಿನ ಕಾಮಗಾರಿ ಮುಗಿದು ಮೂರು ವರ್ಷಗಳೇ ಕಳೆದಿದೆ.
ಆದರೆ ರಾಜ್ಯ ಸರ್ಕಾರಕ್ಕೆ ಇಚ್ಛಾಶಕ್ತಿ ಕೊರತೆಯಿಂದ ಯೋಜನೆ ಹಳ್ಳ ಹಿಡಿಯುವಂತಾಗಿದೆ. ಅಲ್ಲದೆ ಅರ್ಧ ಕೆಲಸ ಮುಗಿದಿರುವ ಕಾಮಗಾರಿ ಸಹ ಮಳೆ ಬಿಸಳಿಗೆ ಸೊರಗುವಂತಾಗಿದೆ.ನೆನೆಗುದಿಗೆ ಬಿದ್ದಿರುವ ಸೇತುವೆ ಮುಂದುವರೆಸಲು ಭೂಮಿಯನ್ನು ಮಾಲೀಕರಿಂದ ಸ್ವಾಧೀನಪಡಿಸಿಕೊಳ್ಳಬೇಕು. ಈ ಕಾರ್ಯ ಸಹ ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಮಾಡಿಲ್ಲ, ಬಿಜೆಪಿ ಸರ್ಕಾರದಲ್ಲಿ ಅಭಿವೃದ್ಧಿ ಕಾರ್ಯಗಳಿಂಗಿತಲೂ ಒಳ ಜಗಳ ಮತ್ತು ಭ್ರಷ್ಟಾಚಾರದಿಂದಲೇ ಅವಧಿ ಪೂರೈಸಿದರು.
ಪ್ರಸ್ತುತ ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷದ ಸರ್ಕಾರವಿದ್ದು, ರಾಜ್ಯದ ಪಾಲಿನ ಹಣವನ್ನು ಕೂಡಲೇ  ಮಂಜೂರು ಮಾಡಿಸಿ ಮೇಲ್ಸೇತುವ ನಿರ್ಮಾಣಕ್ಕೆ ಬೇಕಾಗಿರುವ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಹಾಗೂ ವಾಹನ ಮಾಲೀಕರಿಗೆ ಆಗುತ್ತಿರುವ ತೊಂದರೆಯನ್ನು ನೀಗಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.