ಕೋಲಾರ

ಡಿಸಿ ಕಚೇರಿ ಸ್ಥಳಾಂತರಕ್ಕೆ ವಿರೋಧ

Published On :

ಕೋಲಾರ: ಹಾಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲೇ ಸುಸಜ್ಜಿತವಾದ ಜಿಲ್ಲಾ ಆಡಳಿತ ಭವನ ನಿರ್ಮಿಸಲು ಅವಕಾಶವಿರುವುದರಿಂದ ಸರ್ಕಾರ ಟಮಕದಲ್ಲಿ ಜಿಲ್ಲಾ ಆಡಳಿತ ಭವನ ನಿರ್ಮಿಸಲು ಕೈಗೊಂಡಿರುವ ನಿರ್ಧಾರ ಕೈಬಿಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಮಿತಿಯ ಜಿಲ್ಲಾ ಮುಖಂಡರಾದ ಸೂಲಿಕುಂಟೆ ರಮೇಶ್, ನಾಗನಾಳ ಮುನಿಯಪ್ಪ, ಬಿ.ವಿ. ಚಲಪತಿ, ಹೆಚ್. ಮುನಿಚೌಡಪ್ಪ, ಮದನಹಳ್ಳಿ ವೆಂಕಟೇಶ್, ಚವೇನಹಳ್ಳಿ ವಿಜಿ, ಗನ್ ವೆಂಕಟರವಣಪ್ಪ, ಮುದುವತ್ತಿ ಕೇಶವ, ಹುಣಸನಹಳ್ಳಿ ವೆಂಕಟೇಶ್ ಮತ್ತು ಕೋಲಾರ ಜಿಲ್ಲೆಯ ಎಲ್ಲಾ ಪದಾಧಿಕಾರಿಗಳು, ಹಾಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಅನೇಕ ಇಲಾಖೆಗಳಿಗೆ ಸ್ವಂತ ಕಟ್ಟಡಗಳು ಇವೆ. 12 ಎಕರೆಗೂ ಹೆಚ್ಚು ಜಾಗ ಹೊಂದಿರುವ ಈ ಜಾಗದಲ್ಲಿ ಸುಸಜ್ಜಿತವಾದ ಜಿಲ್ಲಾ ಆಡಳಿತ ಭವನ ನಿರ್ಮಿಸಿದಲ್ಲಿ ಪ್ರತಿಯೊಬ್ಬರಿಗೂ ಅನುಕೂಲವಾಗುತ್ತದೆ ಎಂದು ತಿಳಿಸಿದ್ದಾರೆ.
ಕೋಲಾರದಿಂದ ಸುಮಾರು 6-7 ಕಿ.ಮೀ ದೂರವಿರುವ ಜಾಗಕ್ಕೆ ಜಿಲ್ಲಾಧಿಕಾರಿಗಳ ಕಟ್ಟಡ ಕಟ್ಟಲು ಶಿಫಾರಸ್ಸು ಮಾಡಿರುವುದು ಅವೈಜ್ಞಾನಿಕವಾಗಿದ್ದು, ಜೊತೆಗೆ ರಾಷ್ಟ್ರೀಯ ಹೆದ್ದಾರಿ ಇರುವುದರಿಂದ ಹೆಚ್ಚಿನ ಅಪಘಾತಗಳಿಗೆ ಕಾರಣವಾಗುವುದರಿಂದ ಪ್ರಸ್ತಾವನೆ ಕೈಬಿಟ್ಟು ಹಾಲಿ ಜಾಗದಲ್ಲೇ ನೂತನ ಕಟ್ಟಡ ನಿರ್ಮಿಸಬೇಕೆಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.