ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವ ರಕ್ಷಣೆಗೆ ಆಗ್ರಹಿಸಿ ರೈತರ ಪ್ರತಿಭಟನೆ
ಕೋಲಾರ: ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವ ಉಳಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಬಂಗಾಳದ ಆಡಳಿತ ತೃಣಮೂಲ ಕಾಂಗ್ರೆಸ್ ಬೆಂಬಲಿತ ಗೂಂಡಾಗಳು ಮುಗ್ಧ ಜನತೆ ಮೇಲೆ ದೌರ್ಜನ್ಯಸ ದಬ್ಬಾಳಿಕೆ ನಡೆಸುತ್ತಿರುವುದರಿಂದ ಅಲ್ಲಿನ ಪ್ರಜಾತಂತ್ರ ವ್ಯವಸ್ಥೆಗೆ ಧಕ್ಕೆಯಾಗುತ್ತಿದೆ ಎಂದು ಪ್ರತಿಭಟನೆಯಲ್ಲಿ ರಾಜ್ಯ ಉಪಾಧ್ಯಕ್ಷ ಬಯ್ಯಾರೆಡ್ಡಿ ಆರೋಪಿಸಿದರು.
ತೃಣಮೂಲ ಕಾಂಗ್ರೆಸ್ ಸರ್ಕಾರ ತನ್ನ ಅಲ್ಪಾವಧಿಯ ಅಧಿಕಾರದಲ್ಲಿ 10 ಸಾವಿರ ಎಕರೆಯಲ್ಲಿ ಕೃಷಿ ಮಾಡುತ್ತಿದ್ದ ಸುಮಾರು 28 ಸಾವಿರ ಗೇಣಿದಾರರು ಹಾಗೂ ಪಟ್ಟಾದಾರರನ್ನು ಒಕ್ಕೆಬ್ಬಿಸಿದೆ ಎಂದು ದೂರಿದರು.
ಪ್ರಜಾಪ್ರಭುತ್ವದ ಚಳುವಳಿ ಮತ್ತು ಪ್ರಜಾಸತ್ತೆಗಾಗಿ ದುಡಿಯುತ್ತಿರುವ ಶಕ್ತಿಗಳನ್ನು ದುರ್ಬಲಗೊಳಿಸುವ ಕೆಲಸದಲ್ಲಿ ಸಾಮ್ರಾಜ್ಯಶಾಹಿ ಶಕ್ತಿಗಳು, ದೇಶದ ದೊಡ್ಡ ಬಂಡವಾಳದಾರರು, ಪ್ರತಿಗಾಮಿ ಶಕ್ತಿಗಳು ಒಟ್ಟುಗೂಡಿ ತೃಣಮೂಲ ಕಾಂಗ್ರೆಸ್ಗೆ ಬೆಂಬಲ ನೀಡುತ್ತಿದ್ದು, ಇಂತಹ ಪರಿಸ್ಥಿತಿಯ ದುರ್ಲಾಭವನ್ನು ಪಡೆದು ತೃಣಮೂಲ ಗೂಂಡಾಗಳು ಹಲವೆಡೆ ಅಮಾಯಕರ ಆಸ್ತಿಪಾಸ್ತಿಗಳ ಲೂಟಿಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.
ಕೆಪಿಆರ್ಎಸ್ಸಿ ಜಿಲ್ಲಾಧ್ಯಕ್ಷ ಪಿ.ಆರ್. ಸೂರ್ಯನಾರಾಯಣ, ಪ್ರಧಾನ ಕಾರ್ಯದರ್ಶಿ ಟಿ.ಎಂ. ವೆಂಕಟೇಶ್, ತಾಲೂಕು ಉಪಾಧ್ಯಕ್ಷ ಟಿ. ಕೃಷ್ಣೇಗೌಡ, ಸಹಕಾರ್ಯದರ್ಶಿ ವಿ. ನಾರಾಯಣರೆಡ್ಡಿ, ಎನ್.ಎನ್. ಶ್ರೀರಾಮ್, ಎಸ್. ರಮೇಶ್, ಮುನಿಸ್ವಾಮಿ, ಮುನಿರಾಜ್ ರಾಮಾಂಜಿನಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

