ಕೋಲಾರ

ಉತ್ತಮ ಆಡಳಿತಕ್ಕೆ ಆಪ್ ಬೆಂಬಲಿಸಿ

Published On :

ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ಕೆ.ಅರ್ಕೇಶ್ ಮನವಿ


ಬಾಗೇಪಲ್ಲಿ: ಸುಭದ್ರ ಸರ್ಕಾರ, ಭ್ರಷ್ಟಚಾರ ನಿರ್ಮೂಲನೆ, ನಿರುದ್ಯೋಗ ಸಮಸ್ಯೆ ನಿವಾರಣೆ, ಉತ್ತಮ ಆಡಳಿತ, ಮೂಲಭೂತ ಸೌಲಭ್ಯಗಳನ್ನು ದೇಶದ ಜನತೆಗೆ ಕಲ್ಪಿಸಲು ಕೇವಲ ಆಪ್‌ನಿಂದ ಸಾಧ್ಯ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಕೆ.ಅರ್ಕೇಶ್ ತಿಳಿಸಿದರು.
ಪಟ್ಟಣದ ಪತ್ರಕರ್ತರ ಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಭ್ರಷ್ಟಾಚಾರ ಮುಕ್ತ ಹಾಗೂ ಸ್ವಚ್ಛ ಆಡಳಿತ ಸೇರಿದಂತೆ ದೇಶದ ಜನತೆಗೆ ಕನಿಷ್ಠ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ' ಎಂದು ದೇಶದ ಬಹುತೇಕ  ರಾಜಕೀಯ ಪಕ್ಷಗಳಲ್ಲಿನ ಜನಪ್ರತಿನಿಧಿಗಳು ಇಂದು ಭ್ರಷ್ಟರಾಗಿದ್ದಾರೆ. ಚುನಾವಣೆಯ ಸಮಯದಲ್ಲಿ ಇಲ್ಲಸಲ್ಲದ ಭರವಸೆಗಳನ್ನು ಹಾಗೂ ಹಣ ಮತ್ತು ಹೆಂಡದ ಆಮಿಷಗಳನ್ನು ಒಡ್‌ಡಿ  ಮತದಾರರನ್ನು ಮರುಳು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು. ಧ್ರುವ ಕುಮಾರ್, ಶಿವಕುಮಾರ್, ಗಂಗಾಧರಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.