ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ: ನಾರಾಯಣಸ್ವಾಮಿ ವಿಶ್ವಾಸ
ಬಂಗಾರಪೇಟೆ: ಕೇಂದ್ರ ಮತ್ತು ರಾಜ್ಯದ ಕಾಂಗ್ರೆಸ್ ಸರ್ಕಾರಗಳು ನೀಡಿರುವ ಜನಪರ ಆಡಳಿತ ಮೆಚ್ಚಿ ನೂರಾರು ಕಾರ್ಯಕರ್ತರು ಬೇರೆ ಪಕ್ಷಗಳಿಂದ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದ ಕಾಂಗ್ರೆಸ್ ಭವನದಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ಮತ್ತು ಜೆಡಿಎಸ್ನಿಂದ ಸುಮಾರು 50ಕ್ಕೂ ಹೆಚ್ಚು ಮಂದಿ ಶಾಸಕರ ನೇತೃತ್ವದಲ್ಲಿ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿ, ಅಭ್ಯರ್ಥಿ ಕೆ.ಎಚ್. ಮುನಿಯಪ್ಪ ಜಿಲ್ಲೆಯ ಪ್ರಗತಿಗೆ ನೀಡಿರುವ ಕೊಡುಗೆಗಳಿಂದಲೇ ಮತ್ತೆ ಅವರು 7ಬಾರಿ ಸಂಸತ್ ಪ್ರವೇಶಕ್ಕೆ ಕಾರಣವಾಗಿದೆ ಎಂದರು. ಇದೇ ವೇಳೆ ಬಿಜೆಪಿ ಮಾಜಿ ಶಾಸಕ ಬಿ.ಪಿ. ವೆಂಕಟಮುನಿಯಪ್ಪ ಅವರ ಬೆಂಬಲಿಗರಾದ ದೇಶಿಹಳ್ಳಿ ವೆಂಕಟರಾಮ್, ಸುಭ್ರಮಣಿರಾವ್, ಕೃಷ್ಣೆಗೌಡ, ಸುಬಾನ್ ಸೇರಿದಂತೆ 50ಮಂದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಾರ್ಥಸಾರಥಿ, ಮಂಜುನಾಥ್, ಪುರಸಭೆ ಮಾಜಿ ಅಧ್ಯಕ್ಷ ಕೆ. ಚಂದ್ರಾರೆಡ್ಡಿ, ಶಂಷುದ್ದೀನ್ ಬಾಬು, ನಂಜಪ್ಪ, ಶ್ರೀನಿವಾಸನಾಯ್ಡು ಇದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

