ಮೊಯ್ಲಿ ನನಗೆ ಸ್ಪರ್ಧಿಯೇ ಅಲ್ಲ ಬಿಜೆಪಿ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡ ಹೇಳಿಕೆ
ಬಾಗೇಪಲ್ಲಿ: ಕಾಂಗ್ರೆಸ್ ಅಭ್ಯರ್ಥಿ, ಕೇಂದ್ರ ಸಚಿವ ಎಂ. ವೀರಪ್ಪ ಮೊಯ್ಲಿ ನನಗೆ ಸ್ಪರ್ಧಿಯೇ ಅಲ್ಲ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಚ್ಚೇಗೌಡ ಅಭಿಪ್ರಾಯಪಟ್ಟರು.
ಅವರು ಪಟ್ಟಣ ಮುಖ್ಯ ರಸ್ತೆಯಲ್ಲಿ ರೋಡ್ ಷೋ ನಡೆಸಿ, ಸಾರ್ವಜನಿಕರಲ್ಲಿ ಮತಯಾಚನೆ ಮಾಡಿದರು. ಕುಮಾರಸ್ವಾಮಿ ರಾಮನಗರದಿಂದ ವಲಸೆ ಬಂದವರು. ಕೇಂದ್ರ ಸಚಿವ ಎಂ. ವೀರಪ್ಪ ಮೊಯ್ಲಿ ಈ ಕ್ಷೇತ್ರದಿಂದ ಆಯ್ಕೆಯಾಗಿ ಕೇಂದ್ರ ಸರ್ಕಾರದ ಮಂತ್ರಿಯಾಗಿದ್ದವರು. ಆದರೆ, ಇವರು ಕಳೆದ 5 ವರ್ಷಗಳಿಂದ ಯಾವುದೇ ರೀತಿಯಲ್ಲಿ ಕ್ಷೇತ್ರದ ಅಭಿವೃದ್ಧಿ ಪಡಿಸಿಲ್ಲ. ಇದರಿಂದ ಈ ಇಬ್ಬರೂ ಈ ಕ್ಷೇತ್ರದಲ್ಲಿ ಸೋಲು ಖಚಿತ ಎಂದರು.
ಕೇಂದ್ರ ಸರ್ಕಾರ ಬಡವರ ಸರ್ಕಾರ ಎಂದು ಹೊಗಳಿಸಿಕೊಳ್ಳುವ ಇವರು ಅದೇ ಬಡವರ ರಕ್ತ ಹೀರುತ್ತಿದೆ. ಬಂಡವಾಳಶಾಹಿಗಳನ್ನು ಬೆಳೆಸಲು ದಿನದಿಂದ ದಿನಕ್ಕೆ ದಿನನಿತ್ಯ ವಸ್ತುಗಳ ಬೆಲೆ ಏರಿಕೆ, ಗ್ಯಾಸ್ ಅಭಾವ ಸೃಷ್ಟಿ, ವಿದ್ಯುತ್ ಕೊರತೆ, ಬಸ್ ಪ್ರಯಾಣ ಶುಲ್ಕ ಜಾಸ್ತಿ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿ ಜನ ಸಾಮಾನ್ಯರ ಬದುಕುಗಳೊಂದಿಗೆ ಚೆಲ್ಲಾಟವಾಡುತ್ತಿದ್ದಾರೆಂದು ಆರೋಪಿಸಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಆಯ್ಕೆಗೊಂಡಿರುವ ಎಂ. ವೀರಪ್ಪ ಮೊಯ್ಲಿರವರು ತಮ್ಮ ಅಧಿಕಾರದ ಅವಧಿಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸದೇ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಹಲವು ಬಾರಿ ತಮ್ಮ ಸ್ವಂತ ಕೇತ್ರದಲ್ಲಿ ಹೀನಾಯ ಸೋಲನ್ನು ಅನುಭವಿಸಿರುವ ಇವರಿಗೆ ಈ ಕ್ಷೇತ್ರದ ಜನತೆ ರಾಜಕೀಯವಾಗಿ ಪುನರ್ ಜನ್ಮ ನೀಡಿದ್ದಾರೆ. ಆದರೆ, ಇವರು ಅಧಿಕಾರದ ಅವಧಿಯಲ್ಲಿ ಇವರು ಈ ಕ್ಷೇತ್ರಕ್ಕೆ ನೀಡಿರುವ ಕೊಡೆಗೆಯಾದರೂ ಏನು ಎಂದು ಪ್ರಶ್ನಿಸಿದರು. ಬಿಜೆಪಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಸ್. ಚೌಡರೆಡ್ಡಿ, ಡಿ.ಜೆ. ನಾಗರಾಜರೆಡ್ಡಿ, ಮಂಡಲ ಅಧ್ಯಕ್ಷ ಲಕ್ಮಿನಾರಾಯಣ, ಈ.ವಿ. ಕೃಷ್ಣಯ್ಯ ಮತ್ತಿತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

