ವೇತನ ಶ್ರೇಣಿ ನಿಗದಿಗೆ ಒತ್ತಾಯ
ಕೋಲಾರ: ತರಬೇತಿ ಹೊಂದಿದ ಶಿಕ್ಷಕರಿಗೆ ವೇತನ ಶ್ರೇಣಿ ನಿಗಧಿಗೊಳಿಸಬೇಕೆಂದು ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಒತ್ತಾಯಿಸಿ ಮನವಿ ಸಲ್ಲಿಸಿದರು.
ಶಿಕ್ಷಕರ ನಿಯೋಗದ ನೇತೃತ್ವ ವಹಿಸಿದ್ದ ರಾಜ್ಯ ಪರಿಷತ್ ಸದಸ್ಯ ಎಂ. ನಾಗರಾಜ್ ಮಾತನಾಡಿ, ಸಿಸಿವಿಸಿಯಿಂದ ನೇಮಕವಾಗಿರುವ ಶಿಕ್ಷಕರು ಜಿಲ್ಲೆಯಲ್ಲಿ ಆಗ ಸುಮಾರು 450 ಜನರಿದ್ದು ಈಗಾಗಲೇ ಕೆಲವು ಶಿಕ್ಷಕರು ನಿವೃತ್ತಿಯಾಗಿದ್ದಾರೆ. ಇನ್ನೂ ಕೆಲವರು ನಿವೃತ್ತಿ ಅಂಚಿನಲ್ಲಿದ್ದು, ಈ ಶಿಕ್ಷಕರ ನಿರಂತರ ಹೋರಾಟದಿಂದ ಸರ್ಕಾರ ಇವರ ಬೇಡಿಕೆಗಳನ್ನು ಆಲಿಸಿ ಸ್ಪಷ್ಟವಾಗಿ ಆದೇಶಿಸಿದ್ದರೂ 2011ರಿಂದ ಸಿಸಿವಿಸಿ ಶಿಕ್ಷಕರಿಗೆ ನ್ಯಾಯ ಸಿಕ್ಕಿಲ್ಲವೆಂದು ದೂರಿದರು. ಶೀಘ್ರವಾಗಿ ಸದರಿ ಶಿಕ್ಷಕರ ವೇತನ ಶ್ರೇಣಿ ಇಡೀ ಜಿಲ್ಲೆಯ ಸಿಸಿವಿಸಿ ಶಿಕ್ಷಕರಿಗೆ ಅನ್ವಯವಾಗುವಂತೆ ಏಕರೂಪದ ಆದೇಶ ಮಾಡಬೇಕೆಂದು ಮನವಿ ಮಾಡಿದರು. ಮನವಿ ಸ್ವೀಕರಿಸಿ ಮಾತನಾಡಿದ ಡಿಡಿಪಿಐ ಕಚೇರಿಯ ಪತ್ರಾಂಕಿತ ಸಹಾಯಕ ಸಿದ್ದಗಂಗಯ್ಯ, ಸಿಸಿವಿಸಿ ಶಿಕ್ಷಕರ ಬೇಡಿಕೆಗಳನ್ನು ಉಪನಿರ್ದೇಶಕರ ಗಮನಕ್ಕೆ ತಂದು ಕೂಡಲೇ ಪರಿಹರಿಸಿ ಸಿಗಬೇಕಾಗಿರುವ ಸವಲತ್ತುಗಳನ್ನು ಕೊಡಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನಕಾರ್ಯದರ್ಶಿ ಪಿ. ವೆಂಕಟಶಿವಪ್ಪ, ಎಂ.ಎನ್. ಶ್ರೀನಿವಾಸಮೂರ್ತಿ, ಕೆ.ಟಿ. ನಾಗರಾಜ್, ಬಿ.ಎಂ. ಖಾದರ್ ಇಲಾಹಿ, ವಿ. ಸೋಮಶೇಖರ್, ವಿ. ನಾಗರಾಜ್, ಡಿ.ಎಂ. ರಾಮಪ್ಪ, ಡಿ.ಆರ್. ವೆಂಕಟರಾಮೇಗೌಡ, ಕೆ.ವಿ. ವೆಂಕಟನಾರಾಯಣ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

