ಟೊಯೋಟ: ಮತ್ತೊಂದು ಬಿಕ್ಕಟ್ಟು
ರಾಮನಗರ: ಬಿಡದಿಯ ಟೊಯೋಟ ಕಿರ್ಲೋಸ್ಕರ್ ಮೋಟಾರ್ ಕಂಪನಿಯಲ್ಲಿ ವೇತನ ಹೆಚ್ಚಳ ಮತ್ತು ಬೇಡಿಕೆಗಳ ಈಡೇರಿಕೆ ಸಂಬಂಧ ತ್ರಿಪಕ್ಷೀಯ ಮಾತುಕತೆ ಫಲಪ್ರದಗೊಂಡು, ಆಡಳಿತ ಮಂಡಳಿಯು ಬೀಗಮುದ್ರೆ ನಿರ್ಧಾರದಿಂದ ಹಿಂದೆ ಸರಿದ ಬಳಿಕ ಮತ್ತೊಂದು ಬಿಕ್ಕಟ್ಟು ತಲೆದೋರಿದೆ.
ಹೋರಾಟಕ್ಕೆ ಧುಮುಕಿ, ಅಸಹಕಾರ ಮತ್ತು ಅಶಿಸ್ತು ಪ್ರದರ್ಶಿಸಿದ ಆರೋಪದ ಮೇಲೆ ಕಾರ್ಖಾನೆಯ 30ಕ್ಕೂ ಹೆಚ್ಚು ನೌಕರರನ್ನು ಆಡಳಿತ ಮಂಡಳಿ ಸೇವೆಯಿಂದ ಅಮಾನತುಪಡಿಸಿದೆ. ಇದನ್ನು ವಿರೋಧಿಸಿ ಕಾರ್ಮಿಕ ಸಂಘಟನೆಯ ಪ್ರಮುಖರು ಕಾರ್ಖಾನೆ ಎದುರು ಬುಧವಾರದಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ್ದಾರೆ. ತ್ರಿಪಕ್ಷೀಯ ಮಾತುಕತೆಯಲ್ಲಿ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಒಪ್ಪಿಗೆ ಸೂಚಿಸಿದ್ದ ಕಾರ್ಖಾನೆ ಆಡಳಿತ ಮಂಡಳಿಯು ಇದೀಗ ಕಾರ್ಮಿಕ ವಿರೋಧಿ ಧೋರಣೆ ಅನುಸರಿಸುತ್ತಿದೆ. ಈ ಅಮಾನತು ಶಿಕ್ಷೆಯು ಪ್ರತೀಕಾರ ಕ್ರಮ ಮತ್ತು ಕಾರ್ಮಿಕರ ಹೋರಾಟವನ್ನು ಹತ್ತಿಕ್ಕುವ ಷಡ್ಯಂತ್ರ ಎಂದು ಹೋರಾಟನಿರತ ಕಾರ್ಮಿಕ ಮುಖಂಡರು ಆರೋಪಿಸಿದ್ದಾರೆ. ಕಾರ್ಖಾನೆಯಲ್ಲಿ ಕಾರ್ಮಿಕರನ್ನ ನಿರಂತರವಾಗಿ ಶೋಷಣೆ ಮಾಡಲಾಗುತ್ತಿದೆ. ಕಾರ್ಮಿಕರ ಹಿತವನ್ನು ಎರಡನೇ ಹಂತದ ಈ ಹೋರಾಟ ಪ್ರಾರಂಭಿಸಲಾಗಿದೆ. ಕಾರ್ಮಿಕ ಇಲಾಖೆ ಮತ್ತು ಸರ್ಕಾರ ಶೀಘ್ರ ಮಧ್ಯೆ ಪ್ರವೇಶಿಸಿ ನಮಗೆ ನ್ಯಾಯ ಕೊಡಿಸದಿದ್ದಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಕಾರ್ಮಿಕ ಮುಖಂಡರು ಎಚ್ಚರಿಸಿದ್ದಾರೆ.
ವ್ಯಾಪಾರಿ ಕತ್ತು ಸೀಳಿ ಬರ್ಬರ ಕೊಲೆ
ಸೂಲಿಬೆಲೆ: ಹೊಸಕೋಟೆ ತಾಲೂಕಿನ ನಂದಗುಡಿಯಲ್ಲಿ ವ್ಯಾಪಾರಿಯೊಬ್ಬರನ್ನು ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬುಧವಾರ ರಾತ್ರಿ ನಡೆದಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ.
ಕೊಲೆಯಾದ ವ್ಯಾಪಾರಿ ನಾಗರಾಜಪ್ಪ (48) ಎಂದು ಪೊಲೀಸರು ತಿಳಿಸಿದ್ದಾರೆ.
ನಂದಗುಡಿ ಬಸ್ ನಿಲ್ದಾಣದಲ್ಲಿ ಚಿಲ್ಲರೆ ಅಂಗಡಿಯಿಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದ ನಾಗರಾಜಪ್ಪ,ಬುಧವಾರ ಸಂಜೆ ಮನೆಯಿಂದ ಹೊರ ಹೋದವನು ಗುರುವಾರ ಬೆಳಿಗ್ಗೆ ನಂದಗುಡಿಯ ಗ್ರೀನ್ ವ್ಯಾಲಿ ಶಾಲೆ ಹಿಂಭಾಗದಲ್ಲಿರುವ ಮುಳ್ಳಿನ ಪೊದೆಗಳಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಕೊಲೆಯಾದ ನಾಗರಾಜಪ್ಪ ಇಸ್ಪೀಟ್ ಆಟದಲ್ಲಿ ಆಸಕ್ತಿಹೊಂದಿದ್ದ ಎನ್ನಲಾಗಿದ್ದು, ಸಣ್ಣಪುಟ್ಟ ಹಣಕಾಸು ವ್ಯವಹಾರ ನಡೆಸುತ್ತಿದ್ದ ಎನ್ನಲಾಗಿದೆ. ಕೊಲೆಯಾದ ಸ್ಥಳ ಮುಳ್ಳಿನ ಪೊದೆಯಿಂದ ಕೂಡಿದ್ದು, ಅನೈತಿಕ ಚಟುವಟಿಕೆಗಳಿಗೆ ಹೇಳಿ ಮಾಡಿಸಿದ ತಾಣದಂತಿದೆ. ಯುಗಾದಿ ಹಬ್ಬ ಕಳೆದು ಮೂರು ದಿನಗಳಾದರೂ ನಾಗರಾಜುವಿಗೆ ಜೂಜಾಟದ ಮೋಹವಿದ್ದ ಕಾರಣ ಆಟವಾಡಲು ಬಂದಾಗ ಈ ಕೊಲೆ ನಡೆದಿರುವ ಅನುಮಾನವನ್ನು ಮೃತರ ಸಂಬಂಧಿಕರು ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

