ಕೋಲಾರ

ಶೂ ಪಾಲೀಶ್ ಮಾಡಿ ಮತ ಬೇಡಿದ ಎಸ್ಪಿ ಅಭ್ಯರ್ಥಿ!

Published On :

ಕಾಂಗ್ರೆಸ್ ಅಭ್ಯರ್ಥಿ ಮುನಿಯಪ್ಪ 25ರಷ್ಟೂ ಅಭಿವೃದ್ಧಿ ಮಾಡಿಲ್ಲ: ವಿ.ಮುನಿಸ್ವಾಮಿ


ಕೆಜಿಎಫ್: ಕೆಜಿಎಫ್ ಚಿನ್ನದ ಗಣಿ ಮುಚ್ಚಿ 13 ವರ್ಷಗಳಾಗುತ್ತಾ ಬಂದರೂ ಕಾರ್ಮಿಕ ಕುಟುಂಬಗಳ ಬಗ್ಗೆ ಯಾವೊಬ್ಬ ರಾಜಕಾರಣಿಯೂ ಇದುವರೆಗೂ ಚಿಂತಿಸಿಲ್ಲ ಎಂದು ಸಮಾಜವಾದಿ ಪಕ್ಷದ ಅಭ್ಯರ್ಥಿ ವಿ.ಮುನಿಸ್ವಾಮಿ ಹೇಳಿದರು.
ಕೆಜಿಎಫ್ ನಗರದಲ್ಲಿ ಸಾರ್ವಜನಿಕರ ಶೂ ಪಾಲೀಶ್ ಮಾಡುವ ಮೂಲಕ ವಿನೂತನ ಮತಯಾಚನೆಗೆ ಚಾಲನೆ ನೀಡಿ ಮಾತನಾಡಿದ ಅವರು, '25 ವರ್ಷಗಳಿಂದ ಸಂಸದ ಹಾಗೂ ಕೇಂದ್ರ ಸಚಿವ ಸ್ಥಾನವನ್ನು ಪಡೆದಿರುವ ಮುನಿಯಪ್ಪ ಕೆಜಿಎಫ್ ಕ್ಷೇತ್ರದಲ್ಲಾಗಲೀ ಅಥವಾ ಕೋಲಾರ ಜಿಲ್ಲೆಯಲ್ಲಾಗಲೀ 25ರನಷ್ಟು ಅಭಿವೃದ್ಧಿ ಮಾಡಿಲ್ಲ. ಐಶಾರಾಮಿ ಜೀವನ ನಡೆಸುತ್ತಿದ್ದಾರಯೇ ಹೊರೆತು ಜನರ ಸಂಕಷ್ಟಗಳ ಯಾವುದೇ ಅಗತ್ಯ ಕ್ರಮಗಳನ್ನು ಕೈಗೊಂಡಿಲ್ಲ' ಎಂದು ಆರೋಪಿಸಿದರು. ತಮ್ಮ ನೂರಾರು ಬೆಂಬಲಿಗರೊಂದಿಗೆ ನಗರದ ಸೂರಜ್ಮುಲ್ ವೃತ್ತದಿಂದ ಮೆರವಣಿಗೆ ನಡೆಸಿದ ವಿ.ಮುನಿಸ್ವಾಮಿ, ಗಾಂಧಿ ವೃತ್ತದಲ್ಲಿರುವ ಮಹಾತ್ಮ ಗಾಂಧೀಜಿಗೆ ಮಾಲಾರ್ಪಣೆ ಮಾಡಿ ನಂತರ ಅಲ್ಲೇ ಕೂತು ಸಾರ್ವಜನಿಕರ ಶೂಗಳಿಗೆ ಪಾಲೀಶ್ ಮಾಡಿ, ಮತಯಾಚಿಸಿದರು.


ಪ್ರಜಾಪ್ರಭುತ್ವ ಪ್ರಗತಿಗೆ ಮತದಾನ ಮಾಡಿ
ಬಂಗಾರಪೇಟೆ: ಪ್ರಜಾಪ್ರಭುತ್ವದ ಪ್ರಗತಿಗೆ ಮತ್ತು ಸುಭದ್ರ ರಾಷ್ಟ್ರ ನಿರ್ಮಾಣಕ್ಕಾಗಿ 18 ವರ್ಷ ತುಂಬಿರುವ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವಿನೋತ್ ಪ್ರಿಯಾ ಹೇಳಿದರು.
ಪಟ್ಟಣದ ಕೆ.ಸಿ.ರೆಡ್ಡಿ ಪ್ರಥಮ ದರ್ಜೆ ಕಾಲೇಜಿನ ಗುರುವಾರ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಮತದಾರರ ಪಟ್ಟಿಯಲ್ಲಿ ಹೆಸರಿರುವ ಪ್ರತಿಯೊಬ್ಬರು ಮತ ಹಾಕಿ ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡಬೇಕು. ಇದರಿಂದ ದೇಶದ ಸಮಗ್ರ ರಕ್ಷಣೆಯ ಜತೆಗೆ ಆರ್ಥಿಕ, ಸಾಮಾಜಿಕ ಅಭಿವೃದ್ಧಿ ಸಾಧ್ಯ.  ವಿದ್ಯಾರ್ಥಿಗಳು ಸ್ವೀಪ್ ಚಟುವಟಿಕೆಗಳಲ್ಲಿ ಭಾಗವಹಿಸಿ, ಶೇ.100ರಷ್ಟು ಮತದಾನಕ್ಕೆ ಸಹಕರಿಸಬೇಕು ಎಂದು ಹೇಳಿದರು.  ಜಿಪಂ ಉಪ ಕಾರ್ಯದರ್ಶಿ ಬದನೂರು ಮಾತನಾಡಿದರು. ಬಳಿಕ ವಿದ್ಯುನ್ಮಾನ ಯಂತ್ರ ಬಳಸಿ ಮತ ಹಾಕುವ ಬಗ್ಗೆ ಪ್ರಾತ್ಯಕ್ಷಿಕೆ ನಡೆಸಿಕೊಡಲಾಯಿತು. ಕಾಲೇಜಿನ ಪ್ರಾಂಶುಪಾಲ ಪ್ರೊ.ವೆಂಕಟಪ್ಪ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ತಾಪಂ ಕಾರ್ಯ ನಿರ್ವಹಣಾಧಿಕಾರಿ ಕೆ.ಎಸ್.ಭಟ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.