9 ರಂದು ಸಮಾವೇಶ
ಗೌರಿಬಿದನೂರು: ಗೌರಿಬಿದನೂರಿನಲ್ಲಿ 9ರಂದು ಜೆಡಿಎಸ್ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಅಂದು ಕುಮಾರಸ್ವಾಮಿ ಹಾಗೂ ರಾಜ್ಯಮಟ್ಟದ ಮುಖಂಡರು ಆಗಮಿಸಲಿದ್ದಾರೆ. ತಾಲೂಕಿನ ವಿವಿಧ ಪಕ್ಷದ ಮುಖಂಡರು ಅಂದು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ತಾಲೂಕು ಅಧ್ಯಕ್ಷ ಶಿವರಾಮರೆಡ್ಡಿ ತಿಳಿಸಿದ್ದಾರೆ
ದೇಶದ ಪ್ರಗತಿ, ಭದ್ರ ಬುನಾದಿಗೆ ಮತ ಹಾಕಿ
ಕೋಲಾರ: ದೇಶದ ಭದ್ರ ಬುನಾದಿಗೆ ಹಾಗೂ ಗಟ್ಟಿ ದೇಶವಾಗಿ ನಿರ್ಮಿಸಲು ಪ್ರತಿಯೊಬ್ಬರು ತಮ್ಮ ಮತದ ಹಕ್ಕನ್ನು ಚಲಾಯಿಸಿ ಉತ್ತಮ ಪ್ರಜೆಯನ್ನು ಆಯ್ಕೆ ಮಾಡಬೇಕೆಂದು ಜಿಲ್ಲಾಧಿಕಾರಿ ಡಿ.ಕೆ. ರವಿ ತಿಳಿಸಿದರು.ಅವರು ಬೀಡಿ ಕಾರ್ಮಿಕರ ಸಂಘದ ವತಿಯಿಂದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಮತದಾನ ಅರಿವು ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.
ಜಿಲ್ಲಾ ರಕ್ಷಣಾಧಿಕಾರಿ ಅಜಯ್ಹಿಲೋರಿ ಮಾತನಾಡಿ, ನೀಡಿ ಸಂಹಿತೆ ಉಲ್ಲಂಘನೆಯಾದರೆ ಕೂಡಲೇ ಠಾಣೆಗೆ ತಿಳಿಸಬೇಕೆಂದರು. ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಅಧ್ಯಕ್ಷ ಆರ್. ವಿನೋತ್ ಪ್ರಿಯ ಮಾತನಾಡಿ, 18 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮತ ಚಲಾಯಿಸಬೇಕೆಂದರು. ಸಭೆಯಲ್ಲಿ ಆಟೋ ಅಸೋಸಿಯೇಷನ್ ಅಧ್ಯಕ್ಷ ಸುರೇಶ್ ಕುಮಾರ್, ಶಿಕ್ಷಕಿ ನಜಿಬುನ್ನೀಸ, ಶಮೀಮ್ ಉನ್ನಿಸಾ, ನಾರಾಯಣಸ್ವಾಮಿ ಇದ್ದರು.
ಮತದಾರರಿಗೆ ಅರಿವು ಅಭಿಯಾನ
ಕೋಲಾರ: ಮುಳಬಾಗಿಲು, ಶ್ರೀನಿವಾಪುರ, ವೇಮಗಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅಪರ ಜಿಲ್ಲಾಧಿಕಾರಿ ನವೀನ್ ಕುಮಾರ್ ರಾಜು ರವರು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಮತದಾನದ ಪ್ರಾಮುಖ್ಯ ಹಾಗೂ ಅವರ ಪಾತ್ರದ ಬಗ್ಗೆ ವಿವರಿಸಿದರು. ವಿದ್ಯಾರ್ಥಿಗಳು ಸ್ವಯಂ ಸೇವಕರಾಗಿ ಚುನಾವಣೆ ಕಾರ್ಯದಲ್ಲಿ ತೊಡಗಿ ಜಿಲ್ಲೆಯಲ್ಲಿ ಶೇಕಡಾವಾರು ಮತದಾನ ಹೆಚ್ಚಿಸಲು ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕೆಂದು ತಿಳಿಸಿದರು. ಜಿಲ್ಲೆಯಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ರಚಿಸಿರುವ ಸಮಿತಿ ಹಾಗೂ ಅವುಗಳ ಕರ್ತವ್ಯಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿ, ಯಾವುದೇ ನೀತಿ ಸಂಹಿತೆ ಉಲ್ಲಂಘನೆ ಕಂಡುಬಂದಲ್ಲಿ ಕಂಟ್ರೋಲ್ ರೂಂಗಳಿಗೆ ಮಾಹಿತಿ ರವಾನಿಸಬೇಕೆಂದು ವಿದ್ಯಾರ್ಥಿಗಳಿಗೆ ಆಗ್ರಹಿಸಿದರು. ಚುನಾವಣೆಗೆ ಸಂಬಂಧಿಸಿದ ಮಾಹಿತಿಗಳನ್ನು ಅಂತರ್ಜಾಲದ ಮೂಲಕ ಪಡೆಯಬಹುದೆಂದು ಕರಪತ್ರಗಳನ್ನು ವಿತರಿಸಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಜಿಲ್ಲಾ ಕಾನೂನು ಕೋಶದ ನೋಡಲ್ ಅಧಿಕಾರಿ ಸುಮಂತ್, ತಹಸೀಲ್ದಾರ್ ಸೋಮಶೇಖರ್ ಹಾಗೂ ಕಾಲೇಜಿನ ಮುಖ್ಯಸ್ಥರು ಇದ್ದರು.
ಸ್ವೀಪ್ ಕಾರ್ಯಕ್ರಮ
ಕೋಲಾರ: ಪ್ರತಿಯೊಬ್ಬರು ಕಡ್ಡಾಯವಾಗಿ ತಮ್ಮ ಹಕ್ಕನ್ನು ಚಲಾಯಿಸಲು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಏ.4 ರಂದು ಬೆಳಿಗ್ಗೆ 11 ಗಂಟೆಗೆ ಕೆಜಿಎಫ್ ಜೈನ್ ಕಾಲೇಜಿನಲ್ಲಿ, 12ಗಂಟೆಗೆ ಉರಿಗಾಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 3.30 ಗಂಟೆಗೆ ಕಾನೂನು ಕಾಲೇಜಿನಲ್ಲಿ ಮತದಾನದ ಕುರಿತು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಜಿಪಂ ಸಿಇಒ ಆರ್. ವಿನೋತ್ ಪ್ರಿಯ ಹಾಗೂ ಬಂಗಾರಪೇಟೆ ತಾಪಂ ಕಾರ್ಯನಿರ್ವಹಣಾಧಿಕಾರಿ ಕೆ.ಎಸ್. ಭಟ್ ಮತದಾನದ ಹಕ್ಕಿನ ಬಗ್ಗೆ ತಿಳಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

