ಚಿಕ್ಕಬಳ್ಳಾಪುರದಲ್ಲಿ ಮತದಾನ ಜಾಗೃತಿ
ಚಿಕ್ಕಬಳ್ಳಾಪುರ: ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಸ್ವೀಪ್ ಕಾರ್ಯಕ್ರಮದಡಿ ಆಯೋಜಿಸಿರುವ ಮತದಾನದ ಅರಿವಿನ ಛಾಯಾಚಿತ್ರ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಡಾ.ಆರ್. ವಿಶಾಲ್ ಗುರುವಾರ ಚಾಲನೆ ನೀಡಿದರು.
ಕೇಂದ್ರ ಸರ್ಕಾರದ ಜಾಹೀರಾತು ಮತ್ತು ದೃಶ್ಯ ಪ್ರಚಾರ ನಿರ್ದೇಶನಾಲಯ ವತಿಯಿಂದ ನಗರದ ಡಾ. ಅಬ್ದುಲ್ ಕಲಾಂ ಸಭಾಂಗಣದಲ್ಲಿ ಏ.3 ರಿಂದ 5 ರ ವರೆಗೆ 3 ದಿನಗಳ ಕಾಲ ಮತದಾನ ಜಾಗೃತಿಯ ಛಾಯಾಚಿತ್ರ ಪ್ರದರ್ಶನ ಹಮ್ಮಿಕೊಂಡಿದ್ದು ಚುನಾವಣಾ ಆಯೋಗ ನೀಡಿರುವ ಸಂದೇಶಗಳು, ಮತದಾನದ ಕುರಿತು ಜಾಗೃತಿ ಮೂಡಿಸುವ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದೆ.
ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಆರ್.ವಿಶಾಲ್, ಮತದಾನದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹೆಚ್ಚಿಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿರುವುದನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು. ಕಡ್ಡಾಯವಾಗಿ ಮತದಾನ ಮಾಡುವುದಲ್ಲದೇ ಇತರರಲ್ಲೂ ಅರಿವು ಮೂಡಿಸಬೇಕೆಂದು ಸಲಹೆ ನೀಡಿದರು.
ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ನೀಲಾ ಮಂಜುನಾಥ್ ಮಾತನಾಡಿ, ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಸ್ವೀಪ್ ಅಡಿಯಲ್ಲಿ ಬೀದಿನಾಟಕಗಳು, ಧ್ವನಿವರ್ಧಕಗಳ ಮೂಲಕ ಸ್ವೀಪ್ ಸಂದೇಶ ಪ್ರಚಾರ, ಮೇಣದ ದೀಪದ ನಡಿಗೆ, ಮ್ಯಾರಾಥಾನ್ ಓಟ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಕ್ಷೇತ್ರಾದಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ. ಇಲ್ಲಿ ಸಾರುವುದು ಒಂದೇ ಸಂದೇಶ, ಎಲ್ಲರೂ ಮತದಾನ ಮಾಡಿ ಎಂಬುದೇ ಆಗಿದೆ ಎಂದರು.
ಪ್ರದರ್ಶನಲ್ಲಿ ಮತಯಂತ್ರ ಬಳಕೆಯ ಬಗ್ಗೆ ಪ್ರಾತ್ಯಕ್ಷಿಕತೆ ಕೈಗೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಕ್ಷೇತ್ರ ಪ್ರಚಾರ ಅಧಿಕಾರಿ ಪಿ.ಜಿ. ಪಾಟೀಲ್, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕಿ ಡಾ.ಕೆ.ಎನ್. ಕವನ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

