ಕೋಲಾರ

ಮುನಿಯಪ್ಪ ಗೆಲವಿಗೆ ಸಹಕರಿಸಿ: ನರೇಶ್ಕುಮಾರ್

Published On :

ಚಿಂತಾಮಣಿ: ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರಲು ಕೋಲಾರ ಕ್ಷೇತ್ರದ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಅವರನ್ನು ಗೆಲ್ಲಿಸಬೇಕೆಂದು ಕಾಂಗ್ರೆಸ್ ನಾಯಕ ಎಸ್.ವಿ.ನರೇಶ್ಕುಮಾರ್ ಹೇಳಿದರು. ತಾಲೂಕಿನ ಮುರುಗಮಲ್ಲ ಗ್ರಾಮದಲ್ಲಿನ ಶ್ರೀಸೀತಾರಾಮಾಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಮುನಿಯಪ್ಪ ಪರವಾಗಿ ಮನೆ ಮನೆಗೆ ತೆರಳಿ ಅವರು ಮತಯಾಚಿಸಿದರು. ನಂತರ ಮಾತನಾಡಿದ ಅವರು, 'ಮುನಿಯಪ್ಪ ಅವರು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ನಿರುದ್ಯೋಗ ನಿವಾರಿಸಲು ಶ್ರೀನಿವಾಸಪುರದಲ್ಲಿ ರೇಲ್ವೆ ಕೋಚ್ ಫ್ಯಾಕ್ಟರಿ ನಿರ್ಮಾಣ, ಎತ್ತಿನಹೊಳೆ ಯೋಜನೆ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ' ಎಂದರು. ನಂತರ ಮಾಜಿ ಸಚಿವ ದಿ. ಕೆ.ಎಂ.ಕೃಷ್ಣಾರೆಡ್ಡಿ ಅವರ ಪುತ್ರಿ ವಾಣಿಕೃಷ್ಣಾರೆಡ್ಡಿ, ಲಕ್ಷ್ಮಿ ವಿದ್ಯಾಸಂಸ್ಥೆಯ ಅಧ್ಯಕ್ಷ ಗಂಡ್ರಗಾನಹಳ್ಳಿ ನರಸಿಂಹರೆಡ್ಡಿ ಮಾತನಾಡಿದರು.
ಡಾ. ಪರಮೇಶ್ವರ್ ಹೇಳಿಕೆಗೆ ಬೇಸರ
ಕೋಲಾರ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ನೀಡಿರುವ ಹೇಳಿಕೆ ಸರಿಯಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ಎಂ.ವಿ. ರಾಜಶೇಖರ್ ಅಸಮಾಧಾನ ವ್ಯಕ್ತಪಡಿಸಿದರು. ನಗರದ ಅರಳೇಪೇಟೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸಿ. ಗಂಗಾಧರ್ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದೇವೇಗೌಡರು ಜೆಡಿಎಸ್ ಅಧಿಕಾರಕ್ಕೆ ಬರದಿದ್ದರೆ ವಿಷ ಸೇವಿಸುವುದಾಗಿ ಹೇಳಿದ್ದು ತಪ್ಪೇ. ಆದರೆ, ಜವಾಬ್ದಾರಿಯುತ ಸ್ಥಾನದಲ್ಲಿರುವ ಪರಮೇಶ್ವರ್ ದೇವೇಗೌಡರು ವಿಷ ಸೇವಿಸುವುದನ್ನು ಕಾದು ನೋಡುತ್ತಿರುವೆ ಎಂದಿರುವುದು ಸರಿಯಲ್ಲ, ಯಾರ ಬಗ್ಗೆಯೂ ವೈಯಕ್ತಿಕ ನಿಂದನೆ, ಟೀಕೆ ಮಾಡುವುದು ಶೋಭೆಯಲ್ಲ, ಬಹಿರಂಗ ಸಭೆಗಳಲ್ಲಿ ಮಾತನಾಡುವಾಗ ನಾಲಿಗೆಯ ಮೇಲೆ ಹಿಡಿತವಿದ್ದರೆ ಒಳ್ಳೆಯದೆಂದು ಹೇಳಿದರು.
ತೋಟಗಾರಿಕೆ ವಿವಿ ವಾರ್ಷಿಕೋತ್ಸವ
ಕೋಲಾರ: ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಾರ್ಷಿಕೋತ್ಸವ ಸಮಾರಂಭ ಏ.5 ರಂದು ಶನಿವಾರ ಮಧ್ಯಾಹ್ನ 2 ಗಂಟೆಗೆ ತೋಟಗಾರಿಕೆ ಮಹಾವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಬಾಗಲಕೋಟ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ಬಿ. ದಂಡಿನ್ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿವೃತ್ತ ಅಧ್ಯಕ್ಷ ಡಾ. ಮನು ಬಳಿಗಾರ್,  ಜಿಲ್ಲಾಧಿಕಾರಿ ಡಿ.ಕೆ. ರವಿ ಇನ್ನಿತರರು ಭಾಗವಹಿಸುವರು. ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ.ವಿ. ನಾಚೇಗೌಡ ಅಧ್ಯಕ್ಷತೆ ವಹಿಸುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.