ಕೋಲಾರ

ಕೋಲಾರದಲ್ಲಿ 14,92,987 ಮತದಾರರು

Published On :

ಕೋಲಾರ: ಹೊಸ ಮತದಾರರು ಸೇರಿದಂತೆ ಕೋಲಾರ ಲೋಕಸಭಾ ಕ್ಷೇತ್ರದ ಒಟ್ಟು ಮತದಾರರು 14,92,987 ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಿ.ಕೆ. ರವಿ ತಿಳಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಹೊಸದಾಗಿ 19,435 ಮಂದಿ ಮತದಾರರು ಸೇರ್ಪಡೆಯಾಗಿದ್ದಾರೆ. ಮತದಾರರು ಮುಕ್ತವಾಗಿ, ನಿಭೀತವಾಗಿ ತಮ್ಮ ಹಕ್ಕು ಚಲಾಯಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿರುವುದಾಗಿ ತಿಳಿಸಿದರು.
ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಢ್ಲಘಟ್ಟ, ಚಿಂತಾಮಣಿ ಮತ್ತು ಕೋಲಾರ ಜಿಲ್ಲೆಯ 6 ವಿಧಾನ ಸಭಾ ಕ್ಷೇತ್ರಗಳು ಒಳಗೊಂಡಂತೆ 8 ವಿಧಾನ ಸಭಾ ಕ್ಷೇತ್ರಗಳು ಬರಲಿದ್ದು, 7,53,783 ಪುರುಷರು ಮತ್ತು 7,36,923 ಮಹಿಳೆಯರು ಸೇರಿದಂತೆ 14,92,987 ಮತದಾರರಿಗಾಗಿ 2,041 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು. ಕೋಲಾರ ಜಿಲ್ಲೆಯಲ್ಲಿ 6 ವಿಧಾನಸಭಾ ಕ್ಷೇತ್ರಗಳಲ್ಲಿರುವ 1,563ಮತಗಟ್ಟೆಗಳ ಪೈಕಿ 333 ಅತಿ ಸೂಕ್ಷ್ಮ, 338ಸೂಕ್ಷ್ಮ ಮತ್ತು 889ಸಾಮಾನ್ಯ ಮತಗಟ್ಟೆಗಳಿರುತ್ತವೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಮತ್ತು ಚಿಂತಾಮಣಿಯ ವಿಧಾನಸಭಾ ಕ್ಷೇತ್ರಗಳ ಮತಗಟ್ಟೆಗಳ ಪೈಕಿ 108 ಅತಿ ಸೂಕ್ಷ್ಮ, 181 ಸೂಕ್ಷ್ಮ ಮತ್ತು 189 ಸಾಮಾನ್ಯ ಮತಗಟ್ಟೆಗಳಿವೆ ಎಂದರು. ಮತಗಟ್ಟೆಗಳಿಗೆ ಅಗತ್ಯಕ್ಕೆ ತಕ್ಕಂತೆ ಮೈಕ್ರೋ ವೀಕ್ಷಕರು ಮತ್ತು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗುವುದು ಎಂದ ಅವರು, ಮತದಾನ ಕೇಂದ್ರಗಳಲ್ಲಿ ವೆಬ್ಕ್ಯಾಸ್ಟಿಂಗ್ ನಡೆಸಲು ಎಲ್ಲಾ ವ್ಯವಸ್ಥೆಗಳ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಚುನಾವಣೆ ವೀಕ್ಷಕರಿಗೆ ಸಹಕರಿಸಲು, ಮತದಾನ ಕೇಂದ್ರದಲ್ಲಿ ಮತದಾನದ ಪ್ರಕ್ರಿಯೆಯನ್ನು ವೀಕ್ಷಿಸಲು ಹಾಗೂ ವರದಿ ನೀಡಲು ಜಿಲ್ಲೆಯ ಕೇಂದ್ರ ಸರ್ಕಾರದ ಮತ್ತು  ಸಂಸ್ಥೆಗಳಿಗೆ ಒಳಪಡುವ ಅಧಿಕಾರಿ, ನೌಕರರನ್ನು ಸೇರಿದಂತೆ 1,200 ಮೈಕ್ರೋ ವೀಕ್ಷಕರನ್ನು ನೇಮಕಾತಿ ಮಾಡಲಾಗಿದೆ ಎಂದು ತಿಳಿಸಿದರು.
ನೋಡಲ್ ಅಧಿಕಾರಿ ನೇಮಕ
ಕೆಜಿಎಫ್: ಚುನಾವಣೆ ಹಿನ್ನಲೆಯಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಪೊಲೀಸ್ ಇಲಾಖೆಯ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಹಿಲೋರಿ ಅವರು ಆದೇಶ ಹೊರಡಿಸಿದ್ದಾರೆ. ಚುನಾವಣೆಯ ವಿದ್ಯಮಾನಗಳಿಗೆ ಅನುಗುಣವಾಗಿ ಆಗ್ಗಿಂದಾಗೆ ಕ್ರಮ ಕೈಗೊಳ್ಳುವ ಸಂಬಂಧ ಬಂಗಾರಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಡಿಸಿಆರ್ಬಿ ಪೊಲೀಸ್ ಇನ್ಸ್ಪೆಕ್ಟರ್ ಜಿ.ಟಿ.ಸ್ವಾ ಹಾಗೂ ಕೆಜಿಎಫ್ ವಿಧಾನಸಭಾ ಕ್ಷೇತ್ರಕ್ಕೆ ಡಿಸಿಐಬಿ ಪೊಲೀಸ್ ಇನ್ಸ್ಪೆಕ್ಟರ್ ಎಸ್.ಆರ್.ಜಗದೀಶ್ ಅವರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.