ಕೋಲಾರ ಕ್ಷೇತ್ರದಲ್ಲಿ ಮೋದಿ ಅಲೆ
ಮುಳಬಾಗಲು: ಕೋಲಾರ ಕ್ಷೇತ್ರದಲ್ಲಿ ನರೇಂದ್ರ ಮೋದಿ ಅಲೆ ಇದ್ದು, ಬಿಜೆಪಿ ಗೆಲುವು ಖಚಿತವೆಂದು ಅಭ್ಯರ್ಥಿ ಎಂ.ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.
ಪಟ್ಟಣದ ಸೂರ್ಯನಾರಾಯಣಸ್ವಾಮಿ ದೇವಾಲಯದಲ್ಲಿ ಗುರುವಾರ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು. ಕ್ಷೇತ್ರದ ಹೋಬಿಳಿ ಹಾಗೂ ಗ್ರಾಪಂ ಕೇಂದ್ರಗಳ ಪ್ರವಾಸದ ಸಂದರ್ಭದಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿಗೆ ಬೆಂಬಲ ಸೂಚಿಸಿದರು. ಚಿಂತಾಮಣೆ ತಾಲ್ಲೂಕಿನಲ್ಲಿ ಬಿಜೆಪಿ ಎರಡು ಗುಂಪುಗಳ ಮಧ್ಯೆ ಇದ್ದ ಭಿನ್ನಾಭಿಪ್ರಾಯ ಬಗೆಹರಿಸಲಾಗಿದೆ ಎಂದರು.
ಕ್ಷೇತ್ರದ ಉಸ್ತುವಾರಿ ಪರಿವಾರದ ಮಂಜುನಾಥ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಎಂ.ವೆಂಕಟೇಶ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಅತ್ತಿಪಲ್ಲಿ ವೆಂಕಟರವಣ, ಉಪಾಧ್ಯಕ್ಷ ಎಂ.ವಿ.ಗೋಪಾಲ್, ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಹರೀಶ್, ತಾಲ್ಲೂಕು ಎಸ್ಸಿ ಯುವ ಮೋರ್ಚ ಅಧ್ಯಕ್ಷ ವಿ.ಜಯಪ್ಪ, ಜಿಲ್ಲಾ ಯುವ ಮೋರ್ಚ ಅಧ್ಯಕ್ಷ ಶಕ್ತಿಪ್ರಸಾದ್, ಶ್ರೀನಿವಾಸ್, ಮುಖಂಡರಾದ ಎಂ.ಶಂಕರಪ್ಪ, ಕೋಳಿ ನಾಗರಾಜ್, ತಾಲ್ಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ಮು.ಕೃ.ಪದ್ಮನಾಭರಾವ್, ಎಂ.ಪಿ.ನಾಗಭೂಷಣಚಾರ್, ಶುಕ್ಲಯಜುರ್ವೇದ ಮಹಾ ಸಭೆಯ ಕಾರ್ಯದರ್ಶಿ ಮಂಡಿಕಲ್ ಗೋಪಾಲ್ ಭಾಗವಹಿಸಿದ್ದರು.
ಬಿಜೆಪಿಯಿಂದ ಭರ್ಜರಿ ರೋಡ್ ಶೋ
ಕೋಲಾರ: ಬಿಜೆಪಿ ಅಭ್ಯರ್ಥಿ ಎಂ. ನಾರಾಯಣಸ್ವಾಮಿ ಪರ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಗರದಲ್ಲಿ ಶುಕ್ರವಾರ ರೋಡ್ ಶೋ ಮಾಲಕ ಮತಯಾಚನೆ ಮಾಡಿದರು.
ನಗರದ ಪ್ರಮುಖ ಬೀದಿಗಳಲ್ಲಿ ರೋಡ್ ಶೋ ನಡೆಸಿದ ಅವರು, ದೇಶದ ಐಕ್ಯತೆ ಮತ್ತು ಸಮಗ್ರತೆಗಾಗಿ ಮೋದಿಯವರು ಪ್ರಧಾನಿ ಆಗಬೇಕಾಗಿರುವುದರಿಂದ ಕೋಲಾರದಲ್ಲಿ ಬಿಜೆಪಿಯ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು. ಇದಕ್ಕೂ ಮುನ್ನ ನಗರದ ಸರ್ಕಾರಿ ಬಸ್ ನಿಲ್ದಾಣ ವೃತ್ತದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಓಂಶಕ್ತಿ ಚಲಪತಿ, ಶಾಸಕ ವರ್ತೂರ್ ಪ್ರಕಾಶ್ ಐದು ವರ್ಷಗಳ ಕಾಲ ಬಿಜೆಪಿಯ ಸರ್ಕಾರದಿಂದ ಸಾಕಷ್ಟು ಅನುಕೂಲ ಮಾಡಿಕೊಂಡು ಈಗ ಬಿಜೆಪಿ ಕೋಮುವಾದಿ ಪಕ್ಷವೆಂದು ಹೇಳುತ್ತಿದ್ದಾರೆ, ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವುದು ಅವರಿಗೆ ಬಿಟ್ಟ ವಿಚಾರ, ಆದರೆ, ಬಿಜೆಪಿಯನ್ನು ತಮ್ಮ ಸ್ವಾರ್ಥಕ್ಕಾಗಿ ಕೋಮುವಾದಿ ಎಂದು ಹೇಳಿರುವುದನ್ನು ಕ್ಷೇತ್ರದ ಜನತೆ ವಿರೋಧಿಸಬೇಕೆಂದರು. ಜೆಡಿಎಸ್ನವರಿಗೆ ಕೋಲಾರ ಕ್ಷೇತ್ರದಲ್ಲಿ ಸಾಕಷ್ಟು ನಿಷ್ಟಾವಂತ ಕಾರ್ಯಕರ್ತರಿದ್ದರೂ ಹಣವಿದೆ ಎಂಬ ಕಾರಣಕ್ಕೆ ಭೂ ವ್ಯಾಪಾರಿ ಕೇಶವರನ್ನು ಕರೆತಂದು ಬಲವಂತವಾಗಿ ಕಣಕ್ಕೆ ಇಳಿಸಿದ್ದಾರೆ. ಈ ಚುನಾವಣೆಯಲ್ಲಿ ಜೆಡಿಎಸ್ಗೆ ಜನತೆ ತಕ್ಕಪಾಠ ಕಲಿಸಲಿದ್ದಾರೆಂದರು. ಶಾಸಕ ವರ್ತೂರ್ ಪ್ರಕಾಶ್ ಸಮಯಸಾಧಕ ರಾಜಕಾರಣಿ ಎಂಬುದು ಪ್ರತಿಯೊಬ್ಬರಿಗೂ ಗೊತ್ತಿದೆ, ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲವೆಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಟೀಕಿಸಿದರು.
ರೋಡ್ ಶೋನಲ್ಲಿ ಅಭ್ಯರ್ಥಿ ನಾರಾಯಣಸ್ವಾಮಿ, ಮಾಜಿ ಶಾಸಕ ಬಿ.ಪಿ. ವೆಂಕಟಮುನಿಯಪ್ಪ, ವೈ. ಸಂಪಂಗಿ, ವಿಧಾನಪರಿಷತ್ ಸದಸ್ಯರಾದ ವೈ.ಎ. ನಾರಾಯಣಸ್ವಾಮಿ, ಜಿಲ್ಲಾ ಬಿಜೆಪಿ ಪದಾಧಿಕಾರಿಗಳು, ಕೋಲಾರ ವಿಧಾನಸಭಾ ಕ್ಷೇತ್ರದಿಂದ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

