ಮೋದಿಯಿಂದ ನದಿ ಜೋಡಣೆ
ಗೌರಿಬಿದನೂರು: ನರೇಂದ್ರ ಮೋದಿ ದೇಶದ ಪ್ರಧಾನಿಯಾದರೆ ನದಿ ಜೋಡಣೆಯನ್ನು ಕೈಗೆತ್ತಿಕೊಳ್ಳುತ್ತಾರೆ ೆ ಎಂದು ಬಿಜೆಪಿ ಮುಖಂಡ ನಾರಾಯಣಗೌಡ ಹೇಳಿದರು.
ಬಿಸಲಹಳ್ಳಿ ಗ್ರಾಮದಲ್ಲಿ ಮನೆಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿ ಬಿ.ಎನ್. ಬಚ್ಚೇಗೌಡ ಪರ ಮತಯಾಚನೆ ಮಾಡಿ ಮಾತನಾಡಿದರು. ಆರ್. ವೆಂಕಟೇಶ್ ಮಾತನಾಡಿ, ಬಯಲು ಸೀಮೆ ಪ್ರದೇಶಗಳಿಗೆ ನೀರಾವರಿ ಯೋಜನೆಯ ಜಾರಿಗೆ ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ತಿಳಿಸಿದರು. ಮದ್ವೀರಪ್ಪ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಭ್ರಷ್ಟ ಆಡಳಿತದಿಂದ ರಾಷ್ಟ್ರದ ಜನತೆ ಬೇಸತ್ತಿದ್ದಾರೆ ಎಂದರು.
'ಬಿಜೆಪಿ ಆಡಳಿತದಲ್ಲಿ ಅಭಿವೃದ್ಧಿ'
ಬಂಗಾರಪೇಟೆ: ಬಿಜೆಪಿ ಅಧಿಕಾರ ಅವಧಿಯಲ್ಲಿ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿಯಲ್ಲಿ ಕೆಲಸಗಳು ನಡೆದಿವೆ. ಮತ್ತಷ್ಟು ಸುಧಾರಣೆಗಾಗಿ ಜನರು ಬಿಜೆಪಿಯನ್ನು ಬೆಂಬಲಿಸಬೇಕು ಎಂದು ತಾಲೂಕು ಘಟಕ ಅಧ್ಯಕ್ಷ ಮಾರ್ಕಂಡೇಗೌಡ ಮನವಿ ಮಾಡಿದರು. ಬಂಗಾರಪೇಟೆಯಲ್ಲಿ ಗುರುವಾರ ಸಂಜೆ ಬಿಜೆಪಿ ತಾಲೂಕು ಘಟಕ ಹಮ್ಮಿಕೊಂಡಿದ್ದ ಮನೆ ಮನೆ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪಟ್ಟಣದಲ್ಲಿ ಮೊದಲ ಬಾರಿಗೆ ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ಕರ ಪತ್ರಗಳನ್ನು ನೀಡಿ ಮತಯಾಚಿಸಿದರು. ಪಟ್ಟಣದ ಶಂತಿನಗರದ ವೆಂಕಟರಮಣ ಸ್ವಾಮಿ ದೇಗುಲದಲ್ಲಿ ಪೂಜೆ ಸಲ್ಲಿಸಿದ ನಂತರ ಪ್ರಚಾರ ನಡೆಯಿತು. ಪುರಸಭೆ ಸದಸ್ಯ ಬಿ.ಸಿ.ಮೂರ್ತಿ, ರಮೇಶ್, ಜಿ.ನಾರಾಯಣಸ್ವಾಮಿ, ಪ್ರಭಾಕರ್ ಸೇರಿ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

