ವರ್ತೂರ್, ಶೆಟ್ಟಿಯನ್ನು ದೂರವಿಡಿ: ಕಾರ್ತಿಕ್
ಕೆಜಿಎಫ್: 50 ವರ್ಷದಿಂದ ಈ ದೇಶದ ಜನರಿಗೆ ಸಮೃದ್ಧವಾದ ಕೆಲಸಗಳನ್ನು ಕಾಂಗ್ರೆಸ್ ಮಾಡಿದೆ. ಕಾಂಗ್ರೆಸ್ನ ಈ ಸಾಧನೆಗಳನ್ನು ಗುರುತಿಸಿ ಕರ್ನಾಟಕ ಸೇರಿದಂತೆ ದೇಶದ ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಜಯಗಳಿಸುವುದು ಖಚಿತ. ವರ್ತೂರ್ ಪ್ರಕಾಶ್ ಹಾಗೂ ಕೃಷ್ಣಯ್ಯ ಶೆಟ್ಟಿ ಅವರನ್ನು ಪಕ್ಷದಿಂದ ದೂರವಿಡಬೇಕು ಎಂದು ರಾಜ್ಯ ಯುವ ಕಾಂಗ್ರೆಸ್ನ ಮಾಜಿ ಕಾರ್ಯದರ್ಶಿ ಜಿ.ಎಸ್.ಕಾರ್ತಿಕ್ ಹೇಳಿದರು.
ನಗರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಕೋಲಾರ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಜಾರಿಮಾಡಿದೆ. ಇದನ್ನು ಗುರುತಿಸಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು' ಎಂದು ಹೇಳಿದರು. ವರ್ತೂರ್ ಪ್ರಕಾಶ್ ಮತ್ತು ಕೃಷ್ಣಯ್ಯ ಶೆಟ್ಟಿ ಅವರು ತಮ್ಮಿಂದಲೇ ಕಾಂಗ್ರೆಸ್ ಜಯಗಳಿಸಲಿದೆ ಎಂದು ಹೇಳುತ್ತಿದ್ದಾರೆ. ಪಕ್ಷ ಇದನ್ನು ತೀವ್ರವಾಗಿ ಖಂಡಿಸುತ್ತದೆ. ಬಿಜೆಪಿ ಸರ್ಕಾರ ಇದ್ದಾಗ, ಕಾಂಗ್ರೆಸ್ ಹಾಗೂ ನಾಯಕರ ಬ ಗ್ಗೆ ಸುಳ್ಳು ಆರೋಪ ಮಾಡಿದ್ದ ವರ್ತೂರ್ ಅವರು ಜಿಲ್ಲೆಗೆ ಕೊಟ್ಟ ಕಾಣಿಕೆ ಶೂನ್ಯ. ಅದೇ ರೀತಿ, ಮಾಜಿ ಶಾಸಕ ಕೃಷ್ಣಯ್ಯ ಶೆಟ್ಟಿ ಕೂಡಾ ಈಗ ನಾಟಕವಾಡುತ್ತಿದ್ದಾರೆ. ಇಂಥವರನ್ನು ದೂರ ಇಡಬೇಕು ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

