ಇಂದಿನ ನಾಯಕರಲ್ಲಿ ಕಾಳಜಿ ಕೊರತೆ
ಮಾಲೂರು: ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಮ್ ಅವರು ಶೋಷಿತ ವರ್ಗಗಳ ಬಗ್ಗೆ ತೋರುತ್ತಿದ್ದ ಕಾಳಜಿ-ಕಳಕಳಿ ಇಂದಿನ ನಾಯಕರಲ್ಲಿ ಇಲ್ಲ ಎಂದು ಹಿರಿಯ ಪತ್ರಕರ್ತ ಎಸ್.ವಿ.ಲೋಕೇಶ್ ಹೇಳಿದರು. ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಶನಿವಾರ ಆಯೋಜಿಸಲಾಗಿದ್ದ 107ನೇ ವರ್ಷದ ಜನ್ಮದಿನಾಚರಣೆಯಲ್ಲಿ ಮಾತನಾಡಿದ ಅವರು, 'ದಲಿತರ-ಶೋಷಿತರ ದನಿಯಾಗಿ ತಮ್ಮ ಜೀವನವನ್ನು ಸವೆಸಿದ ಬಾಬು ಜಗಜೀವನ್ ರಾಮ್ರವರ ಆದರ್ಶಗಳು ನಮ್ಮೆಲ್ಲರ ಜೀವನದ ಶೈಲಿಯಾಗಬೇಕು' ಎಂದರು. ತಹಸೀಲ್ದಾರ್ ಶಿವು ಕುಮಾರ್ ಮಾತನಾಡಿ, 'ಚುನಾವಣೆ ಹಿನ್ನೆಲೆಯಲ್ಲಿ ಜನ್ಮದಿನಾಚರಣೆಯನ್ನು ಸಂಕೇತಿಕವಾಗಿ ಆಚರಿಸಲಾಗುತ್ತಿದೆ' ಎಂದರು. ಅಧಿಕಾರಿಗಳಾದ ಮುನೇಶ್, ಸುಬ್ರಮಣಿ, ರಾಮಸ್ವಾಮಿ, ಅಶ್ವತ್ಥ, ವೆಂಕಟೇಶ್ ಇದ್ದರು.
ಅಕ್ರಮ ಮರಳು ದಂಧೆ ಸ್ಥಳಕ್ಕೆ ತಹಸೀಲ್ದಾರ್ ಭೇಟಿ
ಟೇಕಲ್: ತಿಮ್ಮನಾಯಕನಹಳ್ಳಿ ಅಮಾನಿಅರಸಿಕೆರೆಯಲ್ಲಿ ಅವ್ಯಾಹತವಾಗಿ ನಡೆಸುತ್ತಿರುವ ಮರಳು ದಂಧೆಗೆ ಮಧ್ಯ ರಾತ್ರಿ ತಹಸೀಲ್ದಾರ್ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಘಟನೆ ವರದಿಯಾಗಿದೆ.
ಶುಕ್ರವಾರ ರಾತ್ರಿ ಮರಳು ದಂಧೆ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ಕೋಲಾರದ ಉಪ ವಿಭಾಗಾಧಿಕಾರಿ ಮಂಜುನಾಥ್ ಅವರಿಗೆ ತಿಳಿಸಿದ್ದು, ಅವರು ತಹಸೀಲ್ದಾರ್ಗೆ ಪೋನಾಯಿಸಿ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ನೀಡುವಂತೆ ತಿಳಿಸಿದರು.
ಈ ನಿಟ್ಟಿನಲ್ಲಿ ತಹಸೀಲ್ದಾರ್ ಶಿವಕುಮಾರ್ ಅವರು ಶುಕ್ರವಾರ ರಾತ್ರಿ ಟೇಕಲ್ ಹೊರ ಠಾಣೆ ಪೊಲೀಸ್ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೆರೆಯಲ್ಲಿ ಮರಳು ತೆಗೆದಿರುವುದು ಬೆಳಕಿಗೆ ಬಂದಿದ್ದು, ರಾತ್ರಿ ಕೆಲಸವನ್ನು ಸ್ಥಗಿತ ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

