ಕೋಲಾರ

ಚುನಾವಣಾ ಸಿಬ್ಬಂದಿಗೆ ಬಸ್ ಸೌಲಭ್ಯ

Published On :

ಕೋಲಾರ: ಲೋಕಸಭಾ ಚುನಾವಣೆಗಾಗಿ ಏ.10 ರಂದು ಆರು ವಿಧಾನ ಸಭಾ ಕ್ಷೇತ್ರಗಳ ಕೇಂದ್ರ ಸ್ಥಳಗಳಲ್ಲಿ ಚುನಾವಣಾ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತರಬೇತಿ ದಿನ ನಿಯೋಜಿಸಿರುವ ವಿವಿಧ ತಾಲೂಕುಗಳ ಚುನಾವಣಾ ಸಿಬ್ಬಂದಿಗೆ ತರಬೇತಿ ನಡೆಯುವ ಕೇಂದ್ರ ಸ್ಥಳಗಳಿಗೆ ಹೋಗಲು ಬಸ್ ವ್ಯವಸ್ಥೆ ಮಾಡಲಾಗಿದೆ. ಏ.10 ರಂದು ಶ್ರೀನಿವಾಸಪುರದಿಂದ 17, ಮುಳಬಾಗಿಲು 18, ಕೆ.ಜಿ.ಎಫ್. 8 , ಬಂಗಾರಪೇಟೆ 11, ಕೋಲಾರ 15 ಹಾಗೂ ಮಾಲೂರಿನಿಂದ 12 ಬಸ್ಗಳನ್ನು ವ್ಯವಸ್ಥೆ ಮಾಡಲಾಗಿದೆ.  ಮುಳಬಾಗಿಲು ಸರ್ಕಾರಿ ಪದವಿ ಕಾಲೇಜು, ಶ್ರೀನಿವಾಸಪುರ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು, ಬಂಗಾರಪೇಟೆ ಸರ್ಕಾರಿ ಬಾಲಕರ ಕಾಲೇಜು, ಕೋಲಾರ ಸರ್ಕಾರಿ ಬಾಲಕರ ಕಾಲೇಜು ಈ ಸ್ಥಳಗಳಿಗೆ ಚುನಾವಣಾ ಸಿಬ್ಬಂದಿಯನ್ನು ಬಸ್ಗಳಲ್ಲಿ ಕರೆದುಕೊಂಡು ಬರಲಾಗುವುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.