ಕೋಲಾರ

ಮುನಿಯಪ್ಪ ಪರ ಚನ್ನಕೇಶವ ಪ್ರಚಾರ

Published On :

ಮಾಲೂರು: ಬಡವರ ಶೋಷಿತರ ಅಭಿವೃದ್ಧಿ ಕಾಂಗ್ರೆಸ್ನಿಂದ ಮಾತ್ರ ಸಾಧ್ಯ. ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿ ಎಂದು ಹಿರಿಯ ಮುಖಂಡ ಚೆನ್ನಕೇಶವ ಹೇಳಿದರು. ತಾಲೂಕಿನ ಮುತ್ತಕದಹಳ್ಳಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಅವರ ಪರ ಪ್ರಚಾರ ಸಭೆಯಲ್ಲಿ ಮಾತನಾಡಿ, 'ತಾಲೂಕಿನಲ್ಲಿ ಕಾರ್ಖಾನೆ ಸ್ಥಾಪಿಸಲು ಸಹಕರಿಸಿರುವ ಕೇಂದ್ರ ಮಂತ್ರಿ ಮುನಿಯಪ್ಪ ಅವರು ಸದಾ ಕ್ಷೇತ್ರದ ಅಭಿವೃದ್ಧಿ ಕಡೆ ಚಿಂತನೆ ನಡೆಸುವವರು. ಅವರ ತಮ್ಮ ಜನಪರ ಕಾರ್ಯದಿಂದಾಗಿ ಕಳೆದ 6 ಬಾರಿ ಗೆದ್ದಿದ್ದಾರೆ. ಈಗ ಮತ್ತೆ ಅದು ಮರಕಳಿಸಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡ್ಹಳ್ಳಿ ಮುನಿರಾಜು, ಚೆನ್ನರಾಯಪ್ಪ, ರಘುನಾಥ್ ಮಾತನಾಡಿದರು. ತಂಬಹಳ್ಳಿ ಶ್ರೀನಿವಾಸ್, ಜಯಂತಿ, ಸುಬ್ರಮಣಿ, ಶೈಲೂ, ಪ್ರವೀಣ್ಕುಮಾರ್, ವೆಂಕಟೇಶ್ ಇದ್ದರು.


ವಿವಿಧ ಪಕ್ಷಗಳಿಂದ ಬಿಜೆಪಿಗೆ ಕಾರ್ಯಕರ್ತರ ಸೇರ್ಪಡೆ


ಚಿಂತಾಮಣಿ: ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಬಿಜೆಪಿಯನ್ನು ಬೆಂಬಲಿಸಿ ಎಂದು ಬಿಜೆಪಿ ಮುಖಂಡ ಡಿ.ಆರ್.ಶಿವಕುಮಾರಗೌಡ ಮತದಾರರಲ್ಲಿ ಮನವಿ ಮಾಡಿದರು.
ತಾಲೂಕಿನ ಗಡಿಭಾಗದ ಆನೆಮಡಗು ಗ್ರಾಮದಲ್ಲಿ ವಿವಿಧ ಪಕ್ಷಗಳಿಂದ ಬಿಜೆಪಿಗೆ ಸೇರ್ಪಡೆಯಾದ ಕಾರ್ಯಕರ್ತರಿಗೆ ಪಕ್ಷದ ಶಾಲು ಹೊದಿಸುವ ಮುಖಾಂತರ ಬರಮಾಡಿಕೊಂಡ ಬಳಿಕ ಮಾತನಾಡಿದ ಅವರು, 'ದೇಶದಲ್ಲಿ ನರೇಂದ್ರ ಮೋದಿ ಅವರ ಅಲೆ ಇದೆ. ಬಯಲು ಸೀಮೆ ಭಾಗಗಳಿಗೆ ಅತ್ಯವಶ್ಯಕವಾಗಿ ಬೇಕಾಗಿರುವ ನೀರಾವರಿ ಯೋಜನೆಗಳ ಸಾಕಾರಕ್ಕಾಗಿ ಈ ಬಾರಿ ಬಿಜೆಪಿ ಅಭ್ಯರ್ಥಿಗೆ ಮತ ನೀಡಿ' ಎಂದು ಮನವಿ ಮಾಡಿದರು. ತಾಲೂಕು ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರಗೌಡ, ಪ್ರಧಾನ ಕಾರ್ಯದರ್ಶಿಗಳಾದ ರಾಘವೇಂದ್ರ,ಶ್ರೀಧರ್, ಕೆಂಪರೆಡ್ಡಿ, ಪ್ರಕಾಶ್, ಮುನಿಕೃಷ್ಣಪ್ಪ, ಬೈಯಪ್ಪನಳ್ಳಿ ವಿಜಯಕುಮಾರ್ ಮುಂತಾದವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.