ಕೋಲಾರ

ಸಿಎಂ ವಿರುದ್ಧ ರೈತ ಸಂಘದ ಮುಖಂಡರ ಪ್ರತಿಭಟನೆ

Published On :

ಕೋಲಾರ: ಬೆಳಗಾವಿ ಅಧಿವೇಶನ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತ ವಿಠಲ್ ಅರಬಾವಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಹೇಳಿಯನ್ನು ಖಂಡಿಸಿ ನಗರದಲ್ಲಿ ರೈತ ಸಂಘದ ಮುಖಂಡರು ಪ್ರತಿಭಟನೆ ನಡೆಸಿದರು. ನಗರದ ಬಸ್ ನಿಲ್ದಾಣ ಬಳಿ ಮುಖ್ಯಮಂತ್ರಿಗಳ ಹೇಳಿಕೆಯನ್ನು ಖಂಡಿಸಿದ ಮುಖಂಡರು ಬೇಜಾವಬ್ದಾರಿ ಹೇಳಿಕೆ ನೀಡಿರುವ ಮುಖ್ಯಮಂತ್ರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರನ್ನು ಒತ್ತಾಯಿಸಿದರು. ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯ ಕಾರ್ಯದರ್ಶಿ ಅಬ್ಬಣಿ ಶಿವಪ್ಪ, ಹಸಿರುಸೇನೆ ಜಿಲ್ಲಾಧ್ಯಕ್ಷ ಕೊತ್ತಮಿರಿ ಜಿ.ಮಂಜುನಾಥ, ಗೌರವಾಧ್ಯಕ್ಷ ತೆರೇನಹಳ್ಳಿ ವೆಂಕಟೇಶಗೌಡ, ಕಾರ್ಯಾಧ್ಯಕ್ಷ ಬಿಸನಹಳ್ಳಿ ಬೈಚೇಗೌಡ, ಸಂಘಟನಾ ಕಾರ್ಯದರ್ಶಿ ಜಿ.ನಾರಾಯಣಸ್ವಾಮಿ, ವಿವಿಧ ತಾಲೂಕುಗಳ ಅಧ್ಯಕ್ಷರಾದ ಟಿ.ಎನ್.ರಾಮೇಗೌಡ, ವೀರಭದ್ರಸ್ವಾಮಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.