ಅಪಘಾತ: ನಗರಸಭೆಯ ಜೆಡಿಎಸ್ ಸದಸ್ಯೆ ಸಾವು
ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ಲಾರಿಚಕ್ರಕ್ಕೆ ಸಿಲುಕಿ ಇಲ್ಲಿನ ನಗರಸಭೆಯ ಜೆಡಿಎಸ್ ಸದಸ್ಯೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮುಂಭಾಗ ಶನಿವಾರ ಮಧ್ಯಾಹ್ನ ನಡೆದಿದೆ. ಮೃತಪಟ್ಟಿರುವ ದುರ್ದೈವಿ ನಗರದ 26 ನೇ ವಾರ್ಡಿನ ಸದಸ್ಯೆ ಶೋಭಾ ಮಂಜುನಾಥ್ (32). ಮೃತರು ತಮ್ಮ ನಾದಿನಿ ಜಯಶ್ರೀಯವರೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದಾಗ ಬೈಕ್ ಸ್ಕಿಡ್ ಆಗಿದ್ದು, ಹಿಂಬದಿ ಕುಳಿತಿದ್ದ ಶೋಭಾ ಕೆಳಗೆ ಬಿದ್ದಿದ್ದಾರೆ. ಆಗ ಪಕ್ಕದಲ್ಲಿ ಹೋಗುತ್ತಿದ್ದ ಲಾರಿ ಅವರ ತಲೆಯ ಹತ್ತಿದೆ. ಇದರಿಂದ ಶೋಭಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆ ಮಾಹಿತಿ ತಿಳಿದು ಪತಿ ಅಲಸೂರು ಮಂಜುನಾಥ್ ಮತ್ತು ಕುಟುಂಬಸ್ಥರು ಆಸ್ಪತ್ರೆ ಮುಂದೆ ಜಮಾಯಿಸಿದರು. ಹೆತ್ತ ತಾಯಿಯನ್ನು ಕಳೆದುಕೊಂಡ ದುಃಖದಲ್ಲಿ ಕಿರುಚಾಡುತ್ತಿದ್ದ ಶೋಭಾರವರ ಮಕ್ಕಳನ್ನು ಸಮಾಧಾನಪಡಿಸಲು ಯಾರಿಗೂ ಸಾಧ್ಯವಾಗಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

