ಜೆಡಿಎಸ್ ಅಭ್ಯರ್ಥಿ ವಿರುದ್ಧ ಅಸಮಧಾನ
ಕೆಜಿಎಫ್: ಜೆಡಿಎಸ್ ಅಭ್ಯರ್ಥಿ ಕೆ.ಕೇಶವ್ ಅವರು ಪ್ರಚಾರಕ್ಕೆ ಕ್ಷೇತ್ರಕ್ಕೆ ಬಂದರೂ ಇಲ್ಲಿನ ನಿಷ್ಠಾವಂತ ಕಾರ್ಯಕರ್ತರನ್ನು ಭೇಟಿ ಮಾಡುತ್ತಿಲ್ಲ. ಅಲ್ಲದೆ, ಮಾಜಿ ಶಾಸಕ ಎಂ. ಭಕ್ತವತ್ಸಲಂ ಸೇರಿ ಇತರರೊಂದಿಗೆ ಮತಯಾಚನೆಯಲ್ಲಿ ತೊಡಗಿದ್ದು ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಜೆಡಿಎಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಕೆ.ರಾಜೇಂದ್ರನ್ ಆರೋಪಿಸಿದ್ದಾರೆ. ನಗರದಲ್ಲಿ ಜೆಡಿಎಸ್ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ನಿಷ್ಠಾವಂತ ಕಾರ್ಯಕರ್ತರನ್ನು ಕೇಶವ್ ಅವರು ಕಡೆಗಣಿಸಿದ್ದಾರೆ. ಅವರು ಉದ್ದೇಶಪೂರ್ವಕವಾಗಿ ಕಾರ್ಯಕರ್ತರ ಸಂಪರ್ಕಕ್ಕೆ ದೊರೆಯುತ್ತಿಲ್ಲ. ಈ ಹಿಂದೆಯೂ ಎರಡು ಬಾರಿ ಕೆಜಿಎಫ್ಗೆ ಆಗಮಿಸುವುದಾಗಿ ತಿಳಿಸಿದ್ದರು. ನಾವು ತಮ್ಮ ಕಾರ್ಯಕರ್ತರೊಂದಿಗೆ ಮತ್ತು ಬೆಂಬಲಿಗರೊಂದಿಗೆ ಅದ್ದೂರಿ ಸ್ವಾಗತಕ್ಕೆ ಎಲ್ಲಾ ರೀತಿಯ ವ್ಯವಸ್ಥೆಯನ್ನು ಮಾಡಿಕೊಂಡಿದ್ದೆ. ಆದರೆ ಅವರು ಬಾರದೆ ನಿರಾಶೆ ಮಾಡಿದರು ಎಂದು ದೂರಿದರು.
ಈ ಬಗ್ಗೆ ಪಕ್ಷದ ವರಿಷ್ಠಾರಾದ ಮಾಜಿ ಪ್ರಧಾನಿ ದೇವೇಗೌಡರಿಗೆ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಈಗಾಗಲೇ ದೂರನ್ನು ಸಲ್ಲಿಸಲಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

