ಎಚ್ಡಿಕೆಯಿಂದ ಅಭಿವೃದ್ಧಿ: ನಿಖಿಲ್
ಬಾಗೇಪಲ್ಲಿ ತಾಲೂಕಿನಲ್ಲಿ ರೋಡ್ ಶೋ ನಡೆಸಿದ ಕುಮಾರಸ್ವಾಮಿ ಪುತ್ರ
ಬಾಗೇಪಲ್ಲಿ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿರವರಿಂದ ಮಾತ್ರ ಸಾಧ್ಯ ಎಂದು ಕುಮಾರಸ್ವಾಮಿ ಪುತ್ರ ನಿಖಿಲ್ ಗೌಡ ಅಭಿಪ್ರಾಯ ಪಟ್ಟರು.
ಪಟ್ಟಣದಲ್ಲಿ ಕುಮಾರ ಸ್ವಾಮಿ ಪರ ರೋಡ್ ಶೋ ನಡೆಸಿ ಮತಯಾಚಿಸಿದ ನಿಖಿಲ್ಗೌಡ, ರಾಜ್ಯದ ಮುಖ್ಯಮಂತ್ರಿಗಳಾಗಿ 20 ತಿಂಗಳ ಅಧಿಕಾರಾವಧಿಯಲ್ಲಿ ಮಾಡಿರುವ ಜನಪರ ಯೋಜನೆಗಳು ಹಾಗೂ ಚಿಕ್ಕಬಳ್ಳಾಪುರವನ್ನು ಜಿಲ್ಲಾ ಕೇಂದ್ರವನ್ನಾಗಿಸಿರುವುದೇ ಶ್ರೀರಕ್ಷೆ. ಕ್ಷೇತ್ರದಲ್ಲಿ ನಮ್ಮ ತಂದೆ ಕುಮಾರಸ್ವಾಮಿರವರು ಇಡೀ ರಾಜ್ಯದಲ್ಲಿಯೇ ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂಬ ವಿಶ್ವಾಸ ಇದೆ ಎಂದರು.
ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸುವುದಾಗಿ, ನಿರುದ್ಯೋಗಿಗಳಿಗೆ ಉದ್ಯೋಗ ಸಮಸ್ಯೆ ಬಗೆಹರಿಸುವುದಾಗಿ ಹಾಗೂ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವುದು ಸೇರಿದಂತೆ ಅನೇಕ ಭರವಸೆ ನೀಡಿದ್ದ ಎಂ. ವೀರಪ್ಪ ಮೊಯ್ಲಿರವರು ಈ ಕ್ಷೇತ್ರದ ಜನತೆಗೆ ನೀಡಿರುವ ಭರವಸೆಗಳನ್ನು ಈಡೇರಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದು, ಕ್ಷೇತ್ರವನ್ನು ಇನ್ನಷ್ಟು ಹಿಂದುಳಿಯುವಂತೆ ಮಾಡಿದ್ದಾರೆಂದು ಆರೋಪಿಸಿದರು.
ಜೆಡಿಎಸ್ ಕಾರ್ಯಾಧ್ಯಕ್ಷ ಸಿ.ಆರ್. ಮನೋಹರ್ ಮಾತನಾಡಿದರು. ಇದಕ್ಕೂ ಮುನ್ನ ತಾಲೂಕಿನ ಚೇಳೂರು, ಸೋಮನಾಥಪುರ, ಪಾತಪಾಳ್ಯ ಹೋಬಳಿಗಳಲ್ಲಿ ರೋಡ್ ಶೋ ನಡೆಸಿದರು. ಮುಖಂಡರಾದ ಹರಿನಾಥರೆಡ್ಡಿ, ಮಂಜುನಾಥರೆಡ್ಡಿ, ರಾಮಕೃಷ್ಣಾರೆಡ್ಡಿ, ಜಯರಾಮರೆಡ್ಡಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

