ಬೇಸಿಗೆ ಬೇಗೆ; ಕೊಡುವರೇ ನೀರು ಬೇಗ?
ಕೆಜಿಎಫ್: ಬೇಸಿಗೆಯ ಬೇಗೆ ತಾಲೂಕಿನ ನಗರ ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ತಟ್ಟಲಾರಂಭಿಸಿದೆ. ಬಹುತೇಕ ಕೊಳವೆ ಬಾವಿಗಳು ದುರಸ್ತಿಗೆ ಬಂದಿವೆ. ಆದರೆ, ಚುನಾವಣೆಯ ನೀತಿ ಸಂಹಿತೆಯ ನೆಪದಲ್ಲಿ ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.
ಕುಡಿಯುವ ನೀರಿನ ಸಮಸ್ಯೆ ಎಷ್ಟು ಉದ್ಭವಿಸಿದೆ ಎಂದರೆ, 2 ಬಿಂದಿಗೆ ನೀರಿಗಾಗಿ ಜನರು ನಾಲ್ಕಾರು ಮೈಲಿ ದೂರ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಖಾಸಗಿ ನೀರಿನ ಟ್ಯಾಂಕರ್‌ಗಳಿಗೆ ಬೆಳಗ್ಗೆಯಿಂದ ರಾತ್ರಿವರೆಗೂ ಕಾಯಬೇಕಾಗಿದೆ. ಖಾಸಗಿಯವರು ಒಂದು ಬಿಂದಿಗೆಗೆ ನಾಲ್ಕರಿಂದ ಐದು ರುಪಾಯಿವರೆಗೂ ಶುಲ್ಕ ಕೇಳುತ್ತಿದ್ದಾರೆ. ಜನರು ಇಷ್ಟೊಂದು ಸಂಕಟ ಎದುರಿಸುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ. ಪ್ರಚಾರಕ್ಕೆ ಆಗಮಿಸುವ ರಾಜಕೀಯ ನಾಯಕರು ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆ ಭಾಷಣದಲ್ಲಿ ಮಾತ್ರ ಭರವಸೆ ನೀಡುತ್ತಿದ್ದಾರೆ. ಕಾರ್ಯರೂಪಕ್ಕೆ ಬರುತ್ತಿಲ್ಲ.
ದುರಸ್ತಿ ಮಾಡುತ್ತಿಲ್ಲ: ಕೆಜಿಎಫ್ ನಗರಸಭೆಯ 35 ವಾರ್ಡ್‌ಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ 2 ತಿಂಗಳಿಂದ ಕೊಳವೆ ಬಾವಿಗಳು ದುರಸ್ಥಿಗೊಂಡಿದ್ದು. ಕುಡಿಯುವ ನೀರಿಗಾಗಿ ಪರದಾಡುತ್ತಿರುವ ಜನರ ಸಂಕಷ್ಟದ ಬಗ್ಗೆ ಯಾಮೊಬ್ಬ ಅಭ್ಯರ್ಥಿಯೂ ತಲೆಕೆಡಿಸಿಕೊಳ್ಳುತ್ತಿಲ್ಲ.
ನಗರಸಭೆ ವತಿಯಿಂದ ನೀರುಸರಬರಾಜು ಮಂಡಳಿಯಿಂದ ಮತ್ತು ಗ್ರಾಮ ಪಂಚಾಯಿತಿ ವತಿಯಿಂದ ನೀರಿನ ಟ್ಯಾಂಕರ್‌ಗಳನ್ನು ಬಾಡಿಗೆಗೆ ಪಡೆದು ಬೇಸಿಗೆ ಕಾಲ ಮುಗಿಯುವವರೆಗೆ ಕ್ಷೇತ್ರದ ಯಾವ ಬಡಾವಣೆಯಲ್ಲಿ ನೀರಿನ ಸಮಸ್ಯೆ ತೀವ್ರವಾಗಿ ಇದೆಯೋ ಅಂತಹ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಬೇಡಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

