ಕೋಲಾರ

ಮುನಿಯಪ್ಪಗೆ ಅತಿ ಸುಲಭ ಜಯ: ಶಾಸಕ

Published On :

ಬಂಗಾರಪೇಟೆ: ಅತಿ ಸುಲಭ ಹಾಗೂ ಅಧಿಕ ಮತಗಳಿಂದ ರಾಜ್ಯದಲ್ಲಿ ಏಳನೇ ಬಾರಿ ಸಂಸತ್ ಪ್ರವೇಶ ಮಾಡಲಿರುವ ಏಕೈಕ ಅಭ್ಯರ್ಥಿ ಎಂದರೆ ಕೆ.ಎಚ್.ಮುನಿಯಪ್ಪ ಅವರು ಮಾತ್ರ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಭವಿಷ್ಯ ನುಡಿದರು.
ಕಾಮಸಮುದ್ರ ಪಂಚಾಯ್ತಿಯಲ್ಲಿ ಭಾನುವಾರ ಬೈಕ್ ರ್ಯಾಲಿ ನಡೆಸಿದ ಬಳಿಕ ಮಾತನಾಡಿದ ಅವರು, 'ಮುನಿಯಪ್ಪ ಸೌಮ್ಯ ರಾಜಕಾರಣಿ. ಎಲ್ಲಾ ವರ್ಗಗಳ ಜತೆ ನಿಕಟ ಸಂಪರ್ಕ ಹೊಂದಿದ್ದಾರೆ. ಮತ್ತೆ ಅವರು ಗೆಲ್ಲುವುದರಲ್ಲಿ ಯಾವುದೇ ಅನುಮಾನಗಳಿಲ್ಲ. ವಿರೋಧ ಪಕ್ಷಗಳು ಎಷ್ಟೇ ಟೀಕೆ ಮಾಡಿದರೂ ಕೋಲಾರ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ' ಎಂದರು. ಶಾಸಕರ ಬೈಕ್ ರ್ಯಾಲಿ ಬಳಿಕ ಸ್ಥಳೀಯ ಅನೇಕ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರಿದರು. ಕೆ.ಚಂದ್ರಾರೆಡ್ಡಿ, ಮಂಜುನಾಥ್, ವೆಂಕಟರಾಮರೆಡ್ಡಿ, ಪಿಚ್ಚಹಳ್ಳಿ ಗೋವಿಂದರಾಜು, ವೆಂಕಟೇಶಗೌಡ, ಬಾಬು, ಜಯಣ್ಣ, ಅಮರೇಶ್, ರಂಗಾಚಾರಿ ಸೇರಿ ಅನೇಕರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.