ಮೋದಿ ಪ್ರಧಾನಿಯಾಗುವುದು ಖಚಿತ
ಶಿಡ್ಲಘಟ್ಟ: ರಾಜ್ಯದಲ್ಲಿ ಮಾತ್ರವಲ್ಲದೆ, ಆಂಧ್ರ, ತಮಿಳುನಾಡಿನಲ್ಲಿಯೂ ಮೋದಿ ಅಲೆ ಬಿಸುತ್ತಿದೆ ಎಂದು ಮಾಜಿ ಗೃಹ ಸಚಿವ ಆಶೋಕ್ ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಅಭ್ಯರ್ಥಿ ಎಂ. ನಾರಾಯಣಸ್ವಾಮಿ ಪರ ಪ್ರಚಾರಕ್ಕೆ ಆಗಮಿಸಿದ್ದ ಅಶೋಕ್ ಸುದ್ದಿಗಾರರೊಂದಿಗೆ ಮಾತನಾಡಿ, ಮಾಧ್ಯಮಗಳು ಈವರೆಗೂ 15 ಸಮೀಕ್ಷೆಗಳನ್ನು ಮಾಡಿದ್ದು, ದೇಶದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ದೇಶದ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಕೋಲಾರ ಮೀಸಲು ಕ್ಷೇತ್ರದಿಂದ 6 ಬಾರಿ ಗೆದ್ದ ಸಚಿವರು ಯಾವುದೇ ಅಬಿವೃದ್ಧಿಕಾರ್ಯಗಳನ್ನು ಮಾಡಿಲ್ಲ. ದೇಶದ ಭದ್ರತಾ ವಿಷಯದಲ್ಲಿ ಕೇಂದ್ರದ ಯುಪಿಎ ಸರ್ಕಾರ ಕ್ರಮ ತೆಗೆದುಕೊಂಡಿಲ್ಲ, ಕಾಂಗ್ರೆಸ್ ಕೋಮುವಾದಿ ಪಕ್ಷವಾಗಿದ್ದು, ಜೆಡಿಎಸ್ ವರಿಷ್ಠ ದೇವೇಗೌಡರ ಜೊತೆ ಕೆ.ಎಚ್. ಮುನಿಯಪ್ಪ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.
ಜ್ಞಾನ ಪೀಠ ಪ್ರಶಸ್ತಿ ವಿಜೇತರಾದ ಅನಂತ ಮೂರ್ತಿಯವರು ಕಾಂಗ್ರೆಸ್ ಪರ ಹೊಗಳು ಭಟ್ಟ ಕೆಲಸ ಮಾಡುತ್ತಿದ್ದು, ಇದು ಸಾಹಿತ್ಯ ಲೋಕಕ್ಕೆ ಅಪಮಾನ ಎಂದರು. ಬಾಬ್ರಿ ಮಸೀದಿ ಧ್ವಂಸ ಕುರಿತು ವರದಿ ಮಾಡುತ್ತಿರುವ ಕೋಬ್ರಾಸ್ಟ್ರಿಂಗ್‌ನ ವರದಿ ಅಪ್ಪಟ ಸುಳ್ಳು. ಈ ವರದಿಗೆ ಯಾವುದೇ ಅಧಾರ ಇಲ್ಲ ಎಂದು ಸಿಬಿಐ ವರದಿ ಮಾಡಿದ್ದು, ರಾಜ್ಯದಲ್ಲಿ ನಂದನ್ ನಿಲೇಕಣಿ ಬ್ರಷ್ಟಾಚಾರದಲ್ಲಿ ಹೆಸರು ಮಾಡಿದ್ದಾರೆ ಎಂದು ಆರೋಪಿಸಿದರು. ಬೈಕ್ ರ್ಯಾಲಿಯಲ್ಲಿ 1000 ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

