ಕೋಲಾರ

ನರೇಂದ್ರ ಮೋದಿ ಗುಂಪು ಪಾಂಡವರಿದ್ದಂತೆ: ಬಿಜೆಪಿ

Published On :

ಸೋನಿಯಾ ಗುಂಪು ಕೌರವರು: ನಾರಾಯಣಸ್ವಾಮಿ


ಬಂಗಾರಪೇಟೆ, ಏ.6
ಏ.17ರಂದು ನಡೆಯಲಿರುವ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ 'ಮಹಾಯುದ್ಧ'ದಲ್ಲಿ ಬಿಜೆಪಿ ಪ್ರಚಂಡ ಬಹುಮತದಿಂದ ಆಯ್ಕೆಯಾಗಿ ಕೇಂದ್ರದಲ್ಲಿ ಅಧಿಕಾರಿ ಹಿಡಿಯುವುದು ಖಚಿತ ಎಂದು ಕೋಲಾರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ನಾರಾಯಣಸ್ವಾಮಿ ಹೇಳಿದರು.
ತಾಲೂಕಿನ ಕಾರಹಳ್ಳಿ ಪಂಚಾಯ್ತಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, 'ಮೋದಿ ಗುಂಪು ಪಾಂಡವರಿದ್ದಂತೆ. ಸೋನಿಯಾ ಗುಂಪು ಕೌರವರು. ಕೌರವರನ್ನು ಸಂಹಾರ ಮಾಡುವ ಕಾಲ ಸನ್ನಿಹಿತವಾಗಿದೆ. ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಯುಪಿಎ ಸರ್ಕಾರ ಜನರ ಹಿತವನ್ನು ಮರೆತು ಬರಿ ಹಗರಣಗಳಲ್ಲೇ ಕಾಲಹರಣ ಮಾಡಿತು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಹೇಳ ಹೆಸರಿಲ್ಲದಂತೆಯಾಗಲಿದೆ' ಎಂದು ಹೇಳಿದರು.
'ಸೋಲಿಲ್ಲದ ಸರದಾರ' ಎಂದು ಕೆರೆಸಿಕೊಳ್ಳುವ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಜಿಲ್ಲೆಗೆ ನೀಡಿರುವ ಕೊಡುಗೆ ಶೂನ್ಯ ಎಂದು ಅವರು ಆರೋಪಿಸಿದರು.
ಇದೇ ವೇಳೆ ತಾಪಂ ಸದಸ್ಯ ಹನುಮಪ್ಪ, ಕಾರಹಳ್ಳಿ ಪಂಚಾಯ್ತಿ ಅಧ್ಯಕ್ಷ ಶಾರದಮ್ಮ, ಪತಿ ಶ್ರೀನಿವಾಸ್ ಸೇರಿದಂತೆ ಹಲವು ಮಂದಿ ಬಿಜೆಪಿ ಸೇರಿದರು. ತಾಪಂ ಅಧ್ಯಕ್ಷ ರೇಣುಕಾಬಾಲಚಂದ್ರ, ಮಾಜಿ ಶಾಸಕ ವೆಂಕಟಮುನಿಯಪ್ಪ, ಮಹೇಶ್, ಮೇಸ್ತ್ರಿ ಶೀನಪ್ಪ, ಜಿಪಂ ಸದಸ್ಯ ಆನಂದ್, ಬಿಜೆಪಿ ತಾಲೂಕು ಅಧ್ಯಕ್ಷ ಮಾರ್ಕಂಡೇಗೌಡ, ಪ್ರಭಾಕರ್ ಮತ್ತಿತರರು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.