ಕೋಲಾರ

ಚಿಕ್ಕಬಳ್ಳಾಪುರ ಕಾಂಗ್ರೆಸ್ನಲ್ಲಿ ಶೀತಲ ಸಮರ!

Published On :

ಚಿಕ್ಕಬಳ್ಳಾಪುರ: ಕಾಂಗ್ರೆಸ್ನಲ್ಲಿ ಸ್ಥಳೀಯ ಶಾಸಕರ ಬಣ ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬಣಗಳ ನಡುವೆ ಒಳಗೊಳಗೆ ಶೀತಲ ಸಮರ ನಡೆಯುತ್ತಿದ್ದು, ಅದು ಪಕ್ಷದ ಕಾರ್ಯಕ್ರಮಗಳಲ್ಲಿ ಬಹಿರಂಗವಾಗುತ್ತಿದೆ.
ಪಕ್ಷದ ಅಭ್ಯರ್ಥಿ ಪರ ಎರಡೂ ಬಣ ಪ್ರಚಾರ ನಡೆಸುತ್ತಿವೆ. ಹೀಗಿದ್ದಾಗ್ಯೂ ಪ್ರತ್ಯೇಕವಾಗಿ ಗುರುತಿಸಿಕೊಳ್ಳುತ್ತಿವೆ.
ಕ್ಷೇತ್ರಕ್ಕೆ ಪಕ್ಷದ ಹಿರಿಯ ಮುಖಂಡರು ಆಗಮಿಸಿದಾಗಲೆಲ್ಲಾ ಬಣಗಳು ಪ್ರತ್ಯೇಕವಾಗಿ ಭೇಟಿಯಾಗುವುದು, ಇದಕ್ಕೆ ಪುಷ್ಟಿ ನೀಡಿದೆ.
ಈ ಹಿಂದೆ ವೀರಪ್ಪ ಮೊಯ್ಲಿ ಕ್ಷೇತ್ರಕ್ಕೆ ಆಗಮಿಸಿದ ಸಂದರ್ಭದಲ್ಲಿ ಎರಡೂ ಬಣಗಳ ಮಧ್ಯೆ ಜಟಾಪಟಿಯೇ ನಡೆದಿತ್ತು. ಇನ್ನೂ ಪಕ್ಷದ ಪ್ರಚಾರ ಕಾರ್ಯಕ್ರಮಗಳಿಗಾಗಿ ಹಾಕಲಾಗುವ ಬ್ಯಾನರುಗಳಲ್ಲಿ ಶಾಸಕರ ಭಾವಚಿತ್ರವಿದ್ದರೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಭಾವಚಿತ್ರವಿರುವುದಿಲ್ಲ! ಅಧ್ಯಕ್ಷರಿದ್ದರೆ ಶಾಸಕರ ಭಾವಚಿತ್ರವಿರುವುದಿಲ್ಲ. ಇದನ್ನು ಅವರವರ ಬೆಂಬಲಿಗರೂ ಸಹ ಅನುಸರಿಸುತ್ತಿದ್ದಾರೆ. ಸದ್ಯಕ್ಕೆ ಭಿನ್ನಾಭಿಪ್ರಾಯ ಬೂದಿ ಮುಚ್ಚಿದ ಕೆಂಡದಂತಿದೆ. ಮೇಲ್ನೋಟಕ್ಕೆ ಭಿನ್ನಾಭಿಪ್ರಾಯಕ್ಕೆ ತೇಪೆ ಹಾಕಲಾಗುತ್ತಿದೆ ಅಷ್ಟೆ.

ಜೆಡಿಎಸ್ಗೆ ಛಲವಾದಿ ಸಮುದಾಯ ಬೆಂಬಲ
ಮಾಲೂರು: ಛವಲವಾದಿ ಸಮುದಾಯ ಬೆಂಬಲಿಸಿದೆ ಎಂದು ಛಲವಾದಿ ನಾರಾಯಣಸ್ವಾಮಿ ಅವರ ಹೇಳಿಕೆ ಸತ್ಯಕ್ಕೆ ದೂರವಾಗಿದೆ. ಸಮುದಾಯ ಈ ಬಾರಿ ಜೆಡಿಎಸ್ ಬೆಂಬಲಿಸಲಿದೆ ಎಂದು ಇಲ್ಲಿನ ತಾಪಂ ಮಾಜಿ ಅಧ್ಯಕ್ಷ ಮುನಿರಾಜು ತಿಳಿಸಿದ್ದಾರೆ.
ಪಟ್ಟಣದ ಪತ್ರಕರ್ತರ ಭವನದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುನಿಯಪ್ಪ ಸಂಸದರಾದ ಛಲವಾದಿಗಳನ್ನು ಹೇಗೆ ನಡೆಸಿಕೊಂಡಿದ್ದಾರೆಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಅವರಿಂದ ಹೆಚ್ಚಿನದ್ದೂ ನಿರೀಕ್ಷಿಸಲು ಸಾಧ್ಯವಿಲ್ಲ. ಛಲವಾದಿಯ ಒಬ್ಬ ವ್ಯಕ್ತಿಗೆ ಸಹಾಯ ಮಾಡಿದಾಕ್ಷಣ ಇಡೀ ಸಮುದಾಯ ಅವರನ್ನೇ ಬೆಂಬಲಿಸಲಿದೆ ಎಂದು ಹೇಳುವುದು ಹಾಸ್ಯಾಸ್ಪದ ಎಂದರು. ಜಾತ್ಯತೀತವಾಗಿ ಎಲ್ಲ ಸಮುದಾಯದವರನ್ನು ಬೆಳೆಸುವ ಜೆಡಿಎಸ್ಗೆ ಈ ಬಾರಿ ಛಲವಾದಿಗಳು ಮತ ನೀಡಬೇಕು ಎಂದು ಅವರು ಮನವಿ ಮಾಡಿದರು. ಕೆ.ಜಿ.ಹಳ್ಳಿ ಮುನಿಯಪ್ಪ ಮಾತನಾಡಿ, ಮಂಗಳವಾರ ಪಟ್ಟಣದಲ್ಲಿ ತಾಲೂಕು ಛಲವಾದಿ ಜನಾಂಗದ ಮುಖಂಡರ ಸಭೆ ಕರೆಯಲಾಗಿದೆ ಎಂದು ತಿಳಿಸಿದರು. ಅಲ್ಲಹಳ್ಳಿ ನಾಗೇಶ್, ಮುನಿರಾಜು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.