ಮತದಾನ ಮಾಡಿ: ಜಿಪಂ ಸಿಇಒ
ಕೆಜಿಎಫ್: ಮತದಾರ ಜಾಗೃತಿಗಾಗಿ ವಿದ್ಯುನ್ಮಾನ ಮತಯಂತ್ರಗಳ ಪ್ರಾತ್ಯಕ್ಷಿತೆ ಕಲ್ಪಿಸಿದ್ದು, ಮತದಾರರು ಮತ ಯಂತ್ರಗಳ ಬಗ್ಗೆ ಅರಿವು ಪಡೆದು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಜಿಪಂ ಸಿಇಒ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ವಿನೋತ್ ಪ್ರಿಯಾ ಹೇಳಿದರು.
ಮಂಗಳವಾರ ನಗರದ ಸ್ಕೂಲ್ ಆಫ್ ಮೈನ್ಸ್ ತಾಂತ್ರಿಕ ವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಮತದಾನ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಅದೇ ರೀತಿ ದೇಶದ ಅಭಿವೃದ್ಧಿಗೆ ಮತ್ತು ರಕ್ಷಣೆಗೆ ದೇಶದ ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡುವ ಜವಾಬ್ದಾರಿ ತಮ್ಮದು ಎಂದರು. ತಾಪಂ ಅಧಿಕಾರಿ ಆರೋಗ್ಯಸ್ವಾಮಿ ಹಾಗೂ ಕೆ.ಎ.ಭಟ್ ಮಾತನಾಡಿ, ಜಿಲ್ಲೆಯ ಪ್ರತಿ ತಾಲೂಕುಗಳಲ್ಲಿ ಮತ್ತು ಗ್ರಾಮೀಣ ಪ್ರದೇಶದಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದೆ ಎಂದರು. ಯಾವುದೇ ಮತಗಟ್ಟೆಗಳಲ್ಲಾಗಲೀ ಭಯ ಮತ್ತು ಗೊಂದಲದ ವಾತಾವರಣ ಕಂಡು ಬಂದಲ್ಲಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲು ಸೂಚಿಸಿದರು.
ಈ ವೇಳೆ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಡೇರಿಕ್ ಅಲೆಕ್ಸಾಂಡರ್, ಸ್ಕೂಲ್ ಆಫ್ ಮೈನ್ಸ್ನ ಪ್ರಾಂಶುಪಾಲರಾದ ಗಣೇಶ್ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

