ಸಾಲ ಬಾಧೆ: ಕೋಲಾರದ ಮತ್ತೊಬ್ಬ ರೈತ ಆತ್ಮಹತ್ಯೆ
ಕೋಲಾರ: ಕಿತ್ತಂಡೂರು ಗ್ರಾಮದಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಸುವ ಮೊದಲೇ ಸಾಲದ ಭಾದೆ ತಾಳಲಾರದೇ ಮತ್ತೊಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಯಡಹಳ್ಳಿ ಗ್ರಾಮದಲ್ಲಿ ಜರುಗಿದೆ.
ಶ್ರೀನಿವಾಸ್ (45) ಮೃತಪಟ್ಟ ರೈತನಾಗಿದ್ದು, ಇವರಿಗೆ 6 ಎಕರೆ ಜಮೀನಿದ್ದು, 8 ಬೋರ್ವೆಲ್ ಕೊರೆಸಿದ್ದಾರೆ. ಈ ಪೈಕಿ ಎರಡರಲ್ಲಿ ಸ್ವಲ್ಪ ಪ್ರಮಾಣದಲ್ಲಿ ನೀರು ಬರುತ್ತಿದೆ. 6 ಎಕರೆ ಭೂಮಿಯಲ್ಲಿ ರೇಷ್ಮೆ, ಆಲೂಗಡ್ಡೆ ಬೆಳೆದಿದ್ದು, ಬೋರ್ವೆಲ್ಗಳಲ್ಲಿ ನೀರು ನಿಂತು ಹೋಗಿದ್ದರಿಂದ ಬೆಳೆಗಳು ನಾಶವಾಗಿದೆ. ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್ ಕಾಮಧೇನುಹಳ್ಳಿ ಶಾಖೆಯಲ್ಲಿ ರು. 10 ಲಕ್ಷ ಮತ್ತು ಖಾಸಗಿ ವ್ಯಕ್ತಿಗಳಿಂದ ರು. 5 ಲಕ್ಷ ಸಾಲ ಮಾಡಿದ್ದರು ಎನ್ನಲಾಗಿದೆ. ಬ್ಯಾಂಕಿನ ಸಿಬ್ಬಂದಿ ಕಳೆದ ಒಂದು ತಿಂಗಳಿನಿಂದ ಸಾಲ ಮರು ಪಾವತಿ ಮಾಡುವಂತೆ ಪೀಡಿಗಿಸುತ್ತಿದ್ದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತನ ಕುಟುಂಬದವರು ದೂರಿದ್ದಾರೆ.
ಕೆಪಿಆರ್ಎಸ್ ನಿಯೋಗ ಭೇಟಿ: ಕರ್ನಾಟಕ ಪ್ರಾಂತ ರೈತ ಸಂಘದ ನಿಯೋಗ ಯಡಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ರೈತ ಶ್ರೀನಿವಾಸ್ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮೃತ ರೈತನ ಕುಟುಂಬದ ಸಾಲ ಮನ್ನಾ ಮಾಡಬೇಕು, ಪರಿಹಾರ ನೀಡಬೇಕು ಮತ್ತು ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದೆ. ನಿಯೋಗದಲ್ಲಿ ಜಿಲ್ಲಾ ಕಾರ್ಯದರ್ಶಿ ಟಿ.ಎಂ. ವೆಂಕಟೇಶ್, ತಾಲೂಕು ಅಧ್ಯಕ್ಷ ಕುರ್ಕಿ ದೇವರಾಜ್, ಎನ್.ಎನ್. ಶ್ರೀರಾಮ್, ಎಸ್. ರಮೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

