ಕೋಲಾರ

ಮನೆ ಮನೆಗೆ ತೆರಳಿ ಬಿಜೆಪಿ ಪ್ರಚಾರ

Published On :

ಬಂಗಾರಪೇಟೆ: ನರೇಂದ್ರ ಮೋದಿಯವರನ್ನು ಪ್ರಧಾನಿಯಾಗಿ ಮಾಡಲು ಪ್ರತಿಯೊಬ್ಬ ನಾಗರಿಕರು ಈ ಬಾರಿ ಬಿಜೆಪಿಯನ್ನು ಬೆಂಬಲಿಸಬೇಕೆಂದು ಪುರಸಭೆ ಸದಸ್ಯೆ ವೇದಾವತಿ ಪ್ರಭಾಕರ್ ಮನವಿ ಮಾಡಿದರು.
ಪಟ್ಟಣದ ವಿವೇಕಾನಂದನರಗದಿಂದ ಮನೆ ಮನೆಗೂ ತೆರಳಿ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆಗೆ ಚಾಲನೆ ನೀಡಿ ಮಾತನಾಡಿದ ಅವರು ದೇಶದಾದ್ಯಂತ ಮೋದಿ ಶಕೆ ಆರಂಭವಾಗಿದ್ದು ಈ ಶೆಕೆಗೆ ಕಾಂಗ್ರೆಸ್ ಕೊಚ್ಚಿ ಹೋಗಲಿದೆ, ಆಡಳಿತ ವಿರೋಧಿತನದಿಂದ ಬಳಲುತ್ತಿರುವ ಕಾಂಗ್ರೆಸ್‌ನ್ನು ದೇಶದಿಂದ ತೊಲಗಿಸಲು ಮತದಾರರು ತುದಿಗಾಲಲ್ಲಿ ನಿಂತಿದ್ದಾರೆ. ದೇಶವನ್ನು ಮುನ್ನಡೆಸುವ ಶಕ್ತಿ ಇರುವುದು ಬಿಜೆಪಿಗೆ ಈಗಾಗಲೇ ಇದು ಸಾಬೀತಾಗಿದೆ. ಹತ್ತು ವರ್ಷಗಳಿಂದ ಯುಪಿಎ ಮಾಡಿರುವ ಸಾಧನೆ ಎಂದರೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಮಧ್ಯಮ ವರ್ಗದ ಜನರ ಬದುಕನ್ನು ಮೂರಾಬಟ್ಟೆಯಾಗಿಸಿದೆ ಎಂದು ಟೀಕಿಸಿದರು.
ಕೋಲಾರ ಜಿಲ್ಲೆ ಜನರು ಶಾಶ್ವತ ನೀರಾವರಿಗೆ ಹೋರಾಟ ಮಾಡುತ್ತಿದ್ದರೂ ಅದಕ್ಕೆ ಕಿವಿ ಕೊಡದ ಕಾಂಗ್ರೆಸ್ ಸರ್ಕಾರದ ಯುಗಾಂತ್ಯ ಆರಂಭವಾಗಿದೆ. ರಾಜ್ಯದಲ್ಲಿಯೂ ಹತ್ತು ತಿಂಗಳಿಂದ ಕಾಂಗ್ರೆಸ್ ಸರ್ಕಾರ ಬಿಜೆಪಿ ಸರ್ಕಾರ ಯೋಜನೆಗಳಿಗೆ ಹೊಸ ನಾಮಫಲಕವನ್ನು ಹಾಕಿಜನರನ್ನು ಮರಳು ಮಾಡುತ್ತಿದೆ ಇದನ್ನು ಜನರು ನಂಬದೆ  ಬಿಜೆಪಿ ಅಭ್ಯರ್ಥಿ ಎಂ. ನಾರಾಯಣಸ್ವಾಮಿ ಶಾಸಕರಾಗಿದ್ದಾಗ ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳನ್ನು ಗುರುತಿಸಿ ಬಿಜೆಪಿಗೆ ಮತ ನೀಡಿ ಪಾಳೆಗಾರಿಕೆ  ಆಡಳಿತಕ್ಕೆ ಅಂತ್ಯ ಹಾಡಿದೆ ಎಂದರು. ಬಿ.ಸಿ. ಮೂರ್ತಿ, ನಾಗಪ್ರಕಾಶ್, ನಾರಾಯಣಸ್ವಾಮಿ ಮತ್ತು ಶಶಿಕುಮಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.