ಕೋಲಾರ

ಎಲ್ಲರೂ ಮತ ಚಲಾಯಿಸಿ

Published On :

ಮಾಲೂರು: ಸದೃಢ ಪ್ರಜಾಪ್ರಭುತ್ವ ರಾಷ್ಟ್ರ ನಿರ್ಮಾಣ ಮಾಡಲು ಪ್ರತಿಯೊಬ್ಬರೂ ಕಡ್ಡಾಯವಾಗಿ ಮತ ಚಲಾಯಿಸಬೇಕಾಗಿದೆ ಎಂದು ತಹಸೀಲ್ದಾರ್ ಶಿವು ಕುಮಾರ್ ಹೇಳಿದರು.
ಮತದಾನ ಜಾಗೃತಿ ಮೂಡಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಶುಕ್ರವಾರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಬೀದಿನಾಟಕಕ್ಕೆ ಚಾಲನೆ ನೀಡಿ ಮಾತನಾಡಿ, ಕಡ್ಡಾಯವಾಗಿ ಮತ ಚಲಾಯಿಸಿದಾಗ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳ್ಳಲು ಸಾಧ್ಯವಾಗುತ್ತದೆ ಎಂದರು. ಪುರಸಭೆ ಮುಖ್ಯಾಧಿಕಾರಿ ರೇಣುಕಾ, ಕಾರ್ಯನಿರ್ವಹಣಾಧಿಕಾರಿ ಸಂಜೀವಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕ ಚಲಪತಿ ಇದ್ದರು. ಜನಪದ ಗಾಯಕ ದೊಡ್ಡ ಮಲ್ಲೆ ರವಿ ಹಾಗೂ ತಂಡವರಿಂದ ಬೀದಿ ನಾಟಕ ಪ್ರದರ್ಶನ ಪಟ್ಟಣದ ವಿವಿದಢೆ ನಡೆಯಿತು.

ಗೌರಿಬಿದನೂರಲ್ಲಿ ಮ್ಯಾರಾಥಾನ್
ಗೌರಿಬಿದನೂರು: ಭಾರತೀಯ ಚುನಾವಣಾ ಆಯೋಗ ಮತ್ತು ಜಿಲ್ಲಾಡಳಿತ  ಹಾಗೂ ಜಿಪಂ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಮೂಡಿಸಲು ಮ್ಯಾರಾಥಾನ್ ಹಮ್ಮಿಕೊಳ್ಳಲಾಗಿತ್ತು. ಜಿಪಂ ಸಿಇಒ ನೀಲಾ ಮಂಜುನಾಥ್ ಮ್ಯಾರಾಥಾನ್‌ನಲ್ಲಿ ಪಾಲ್ಗೊಂಡು, ಏ.17ರಂದು ಪ್ರತಿಯೊಬ್ಬರು ಮತದಾನ ಮಾಡಬೇಕು. ಆ ಮೂಲಕ ಸುಭದ್ರ ಸರ್ಕಾರ ರಚನೆಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿಕೊಂಡರು. ಮತದಾನ ದಿನ ಸಾರ್ವಜನಿಕ ರಜಾ ದಿನವಲ್ಲ. ಅಂದು ಎಲ್ಲಾ ಯುವ ಮತದಾರರು ಮತಗಟ್ಟೆಗೆ ಬಂದು ಮತಚಲಾಯಿಸಲು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿ ಎನ್.ಭಾಸ್ಕರ್, ತಾಪಂ ಇಒ ಕೆ.ವಿ.ರೆಡ್ಡಪ್ಪ, ಪುರಸಭೆ ಮುಖ್ಯಾಧಿಕಾರಿ ಹುನಮಂತೇಗೌಡ, ಬಿಇಒ ಭೈಯಪ್ಪರೆಡ್ಡಿ ಸೇರಿದಂತೆ ಮುಂತಾದ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು. ಪಟ್ಟಣದ ಬೀದಿಗಳಲ್ಲಿ ಮ್ಯಾರಾಥಾನ್ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.