ಕೋಲಾರ

ನೀರಿಗೆ ಆಗ್ರಹಿಸಿ ಖಾಲಿ ಬಿಂದಿಗೆ ಪ್ರದರ್ಶನ

Published On :

ಚಿಂತಾಮಣಿ: ಕುಡಿಯುವ ನೀರು ಪೂರೈಸಲು ವಿಫಲಗೊಂಡಿರುವ ನಗರಸಭೆ ಅಧ್ಯಕ್ಷ ಹಾಗೂ ವ್ಯವಸ್ಥಾಪಕರಿಗೆ ಮುತ್ತಿಗೆ ಹಾಕಿದ ಇಲ್ಲಿನ ನಿವಾಸಿಗಳು, ಪೊರಕೆ, ಚಪ್ಪಲಿ, ಖಾಲಿ ನೀರಿನ ಬಿಂದಿಗೆಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.
ನಗರದ ವಾರ್ಡ್ ನಂ. 8,9,10ರ ಮಾಳಪ್ಪಲ್ಲಿ ಸುತ್ತಮುತ್ತಲಿನ ನೂರಾರು ನಿವಾಸಿಗಳಿಗೆ ಕಳೆದ 15 ದಿನಗಳಿಂದ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ.
ಈ ಹಿನ್ನೆಲೆಯಲ್ಲಿ ನಿವಾಸಿಗಳು ಶುಕ್ರವಾರ ನಗರಸಭೆ ಮುಂಭಾಗ ಸುಮಾರು ಹೊತ್ತು ಪ್ರತಿಭಟನೆ ನಡೆಸಿದರೂ ಆಯುಕ್ತರು ಸ್ಥಳಕ್ಕೆ ಬರಲಿಲ್ಲ. ಇದರಿಂದ ರೋಷಗೊಂಡ ಪ್ರತಿಭಟನಾಕಾರರು ಪೊರಕೆ, ಚಪ್ಪಲಿ, ಖಾಲಿ ಬಿಂದಿಗೆ ಹಿಡಿದುಕೊಂಡು ನಗರಸಭೆ ಕಾರ್ಯಾಲಯಕ್ಕೆ ನುಗ್ಗಲು ಯತ್ನಿಸಿದರು. ಆಗ ಸ್ಥಳಕ್ಕೆ ಆಗಮಿಸಿದ ನಗರಸಭೆ ಅಧ್ಯಕ್ಷ ಜಿಯಾವುಲ್ಲಾ ರೆಹಮಾನ್, ವ್ಯವಸ್ಥಾಪಕ ಶ್ರೀಧರ್ ಅವರು ಪ್ರತಿಭಟನಾಕಾರರನ್ನು ಸಮಾಧನಪಡಿಸಲೆತ್ನಿಸಿದರು. ಆದೂರು, ಅವರಿಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದುರ. ಸ್ಥಳಕ್ಕೆ ಆಗಮಿಸಿದ ನಗರ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಮುರಳಿ ಅವರು ಜನರನ್ನು ಸಮಾಧಾಗೊಳಿಸಿದರು.
ಅಧಿಕಾರಿಗಳು ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಪೂರೈಸುವ ಬಗ್ಗೆ ಭರವಸೆ ನೀಡಿದ ನಂತರ ನಿವಾಸಿಗಳು ಪ್ರತಿಭಟನೆ ಹಿಂದಕ್ಕೆ ಪಡೆದರು. ಈ ಸಂದರ್ಭದಲ್ಲಿ ಜಿ.ನಾರಾಯಣಸ್ವಾಮಿ, ಮಾಳಪ್ಪಲ್ಲಿ ಮಂಜು, ರಾಜಣ್ಣ, ರಾಮಯ್ಯ, ಅಶ್ವತ್ಥ್ ರೆಡ್ಡಿ, ನಾಗಮ್ಮ, ಸುನಂದಮ್ಮ, ಸೀತಮ್ಮ, ರೇಣುಕಮ್ಮ ಸೇರಿದಂತೆ ನೂರಾರು ಜನರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.