ಕೋಲಾರ

ಲಗ್ನ ಪತ್ರಿಕೆ ನೀಡುವ ನೆಪದಲ್ಲಿ ಕೊಲೆ ಯತ್ನ

Published On :

ಕೋಲಾರ: ಲಗ್ನ ಪತ್ರಿಕೆ ನೀಡುವ ನೆಪದಲ್ಲಿ ಚಿನ್ನದ ಸರ ದೋಚಲು ಬಂದಿದ್ದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಪ್ರತಿರೋಧ ವ್ಯಕ್ತಪಡಿಸಿದ ಮಹಿಳೆಯ ಕುತ್ತಿಗೆಗೆ ಚಾಕುವಿನಿಂದ ಹಲ್ಲೆ ಮಾಡಿ ಚಿನ್ನದ ಸರದೊಂದಿಗೆ ಪರಾರಿಯಾಗಿರುವ ಘಟನೆ ಕೋಲಾರ ನಗರದ ಮಾಸ್ತಿ ಬಡಾವಣೆಯಲ್ಲಿ ನಡೆದಿದೆ.
ಬೆಸ್ಕಾಂನಲ್ಲಿ ಕೆಲಸ ಮಾಡುವ ವೆಂಕಟೇಶಪ್ಪ ಎಂಬುವರ ಪತ್ನಿ ಪದ್ಮಮ್ಮ ಎಂಬುವರು ಹಲ್ಲೆಗೆ ಒಳಗಾಗಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸಾಗಿಸಲಾಗಿದೆ. ಗಂಡ ವೆಂಕಟೇಶಪ್ಪ ಕೆಲಸಕ್ಕೆ ಹೋಗಿದ್ದಾಗ ಅಪರಿಚಿತರಿಬ್ಬರು ಬಂದು ಲಗ್ನ ಪತ್ರಿಕೆ ಕೊಡಬೇಕಾಗಿರುವುದಾಗಿ ಹೇಳಿದ್ದಾರೆ. ನಿಜವೆಂದು ತಿಳಿದು ಪದ್ಮಮ್ಮ ಬಾಗಿಲು ತೆಗೆದಾಗ ಒಳಗೆ ಬಂದ ದುಷ್ಕರ್ಮಿಗಳು ಕುಡಿಯಲು ನೀರು ಕೇಳಿದ್ದಾರೆ, ಅಡುಗೆ ಮನೆಗೆ ನೀರು ತರಲು ಹೋದಾಗ ಹಿಂಬದಿಯಲ್ಲಿ ಬಂದು ಕತ್ತಿನಲ್ಲಿದ್ದ ಸರ ಕಸಿಯಲು ಪ್ರಯತ್ನಿಸಿದ್ದು, ಪದ್ಮಮ್ಮ ಪ್ರತಿರೋಧ ವ್ಯಕ್ತಪಡಿಸಿದಾಗ ಚಾಕುವಿನಿಂದ ಕತ್ತಿಗೆ ಗಾಯ ಮಾಡಿ ಸರದೊಂದಿಗೆ ಪರಾರಿಯಾಗಿದ್ದಾರೆ.
ಅಕ್ಕಪಕ್ಕದ ಜನ ಪದ್ಮಮ್ಮರವರ ನರಳಾಟ ಹೇಳಿ ಸ್ಥಳಕ್ಕೆ ಬಂದು ನೋಡಿದಾಗ ರಕ್ತದ ಮಡುವಿನಲ್ಲಿ ಪದ್ಮಮ್ಮ ಬಿದ್ದಿರುವುದನ್ನು ಗಮನಿಸಿ ತಕ್ಷಣ ಪತಿ ವೆಂಕಟೇಶಪ್ಪಗೆ ತಿಳಿಸಿದ್ದಾರೆ. ಗಾಯಾಳುವನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದ್ದು, ಕತ್ತಿಗೆ ಗಂಭೀರ ಸ್ವರೂಪದ ಗಾಯವಾಗಿರುವುದರಿಂದ ತಕ್ಷಣ ಬೆಂಗಳೂರಿಗೆ ಸಾಗಿಸಬೇಕೆಂದು ವೈದ್ಯರು ಸೂಚಿಸಿ ಪ್ರಥಮ ಚಿಕಿತ್ಸೆ ನೀಡಿ ಕಳುಹಿಸಿದ್ದಾರೆ. ಪ್ರಕರಣ ದಾಖಲಾಗಿದ್ದು ಆರೋಪಿಗಳಿಗಾಗಿ ಪೊಲೀಸರು ಶೋಧನೆ ನಡೆಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.