ಮೋದಿ ಪ್ರಧಾನಿಯಾಗಲು ಬಿಜೆಪಿ ಗೆಲ್ಲಿಸಿ: ಸಿದ್ದರಾಜು
ಚಿಂತಾಮಣಿ: ನರೇಂದ್ರ ಮೋದಿ ದೇಶದ ಪ್ರಧಾನಿಯಾಗಲು ಕೋಲಾರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ನಾರಾಯಣಸ್ವಾಮಿ ಅವರು ಗೆಲ್ಲಬೇಕು ಎಂದು ರಾಜ್ಯ ಬಿಜೆಪಿ ಮುಖಂಡ ಸಿದ್ದರಾಜು ಹೇಳಿದರು. ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಬೂರಗಮಾಕಲಹಳ್ಳಿಯಲ್ಲಿರುವ ಶ್ರೀ ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ವಿಶೆಷ ಪೂಜೆ ಸಲ್ಲಿಸಿ, ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರತಿಯೊಬ್ಬ ಮತದಾರನೂ ಬಲಿಷ್ಠ ಭಾರತ ನಿರ್ಮಾಣಕ್ಕೆ ಮುಂದಾಗಬೇಕು. ಬಲಿಷ್ಠ ಭಾರತ ನಿರ್ಮಾಣಕ್ಕೆ, ದೇಶದಲ್ಲಿ ತಾಂಡವಾಡುತ್ತಿರುವ ಭ್ರಷ್ಟಾಚಾರ, ಬಡತನ ನಿರ್ಮೂಲನೆ ಮಾಡಲು ಬಿಜೆಪಿಗೆ ಮತ ನೀಡಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಮುಖಂಡ ಹನುಮಪ್ಪ, ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸಪ್ಪ, ಕುರುಟಹಳ್ಳಿ ಮಂಜುನಾಥ್, ಮಾಡಿಕೆರೆ ಅರುಣ್ಕುಮಾರ್, ತಿಪ್ಪಣ್ಣ, ಕೋನಪ್ಪರೆಡ್ಡಿ, ದೇವರಾಜ್, ಅಶ್ವತ್ಥ್, ಮಂಜುನಾಥ್,ಶ್ರೀರಾಮರೆಡ್ಡಿ, ಕಾಗತಿ ನಾಗರಾಜಪ್ಪ, ಹಾದಿಗೆರೆ ತಿಮ್ಮಪ್ಪ, ದೇವರಾಜ್, ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾಂಗ್ರೆಸಿಗೆ ಇಬ್ಬರು ಹಿರಿಯ ಸಹಕಾರಿಗಳ ಸೇರ್ಪಡೆ
ಕೋಲಾರ: ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಪಿ.ಎನ್.ಕೃಷ್ಣಾರೆಡ್ಡಿ ಮತ್ತು ಮಾಜಿ ಅಧ್ಯಕ್ಷ ಉರಿಗಿಲಿ ರುದ್ರಸ್ವಾಮಿ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದರು. ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಅನಿಲ್ಕುಮಾರ್ ಹಾಗೂ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಎಂ.ಗೋವಿಂದಗೌಡರ ಸಮ್ಮುಖದಲ್ಲಿ ಇವರಿಬ್ಬರು ಕಾಂಗ್ರೆಸ್ಗೆ ಸೇರಿದರು. ಅಲ್ಲದೆ, ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಡುವುದಿಲ್ಲ ಎಂದು ಪ್ರಕಟಿಸಿದರು. ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಸ್ಥಳೀಯ ಅಭ್ಯರ್ಥಿಗಳಿಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಜೆಡಿಎಸ್ ವರಿಷ್ಠರಿಗೆ ಕಾರ್ಯಕರ್ತರು ತಿಳಿಸಿದರೂ ಕೇಳಲಿಲ್ಲ. ಕ್ಷೇತ್ರಕ್ಕೆ ಪರಿಚಯವಿಲ್ಲ ಕೆ.ಕೇಶವ್ ಅವರನ್ನು ಅಭ್ಯರ್ಥಿಯನ್ನಾಗಿಸಿದರು. ಅನೇಕ ಆರೋಪಗಳು ಹೊತ್ತಿರುವ ವ್ಯಕ್ತಿಯನ್ನು ಬೆಂಬಲಿಸಿ, ತಮ್ಮ ಘನತೆಗೆ ಧಕ್ಕೆ ತಂದುಕೊಳ್ಳುವುದಕ್ಕಿಂತ ಕಳೆದ 23 ವರ್ಷಗಳಿಂದ ಕ್ಷೇತ್ರದ ಮತದಾರರ ಜೊತೆ ಉತ್ತಮ ಬಾಂಧವ್ಯವನ್ನು ಹೊಂದಿರುವ ಮುನಿಯಪ್ಪ ಅವರನ್ನು ಬೆಂಬಲಿಸಲು ಕಾಂಗ್ರೆಸ್ ಸೇರಿರುವುದಾಗಿ ಇಬ್ಬರು ನಾಯಕರು ಹೇಳಿದರು. ಹಣವಂತರಿಗೆ ಮಣೆ ಹಾಕಿದ್ದಾರೆ ಎಂದು ದೂರಿದರು. ಈ ಸಂದರ್ಭದಲ್ಲಿ ಮುಖಂಡರಾದ ಜನ್ನಘಟ್ಟ ವೆಂಕಟಮುನಿಯಪ್ಪ, ಹೊಳಲಿ ಪ್ರಕಾಶ್, ವಕೀಲ ಮಂಜುನಾಥ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

