ಸಿದ್ದು ಇಳಿಸಲು ಗೌಡರ ಷಡ್ಯಂತ್ರ
ಕೋಲಾರ: ಜನಪರ ಆಡಳಿತ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಜೆಡಿಎಸ್ ನೇತಾರ ಎಚ್.ಡಿ.ದೇವೇಗೌಡರು ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಚಿಂತಕ ಪ್ರೊ. ಜಿ.ಕೆ.ಗೋವಿಂದರಾವ್ ಆರೋಪಿಸಿದ್ದಾರೆ.
ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಸಮಾನ ಮನಸ್ಕ ಸಾಹಿತಿ-ಕಲಾವಿದರ ವೇದಿಕೆ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಲೋಕಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯಗೆ ಮುಖಭಂಗವನ್ನುಂಟು ಮಾಡುವ ಉದ್ದೇಶದಿಂದ ದೇವೇಗೌಡರು ಜೆಡಿಎಸ್ ಸೋಲುವ ಕ್ಷೇತ್ರಗಳಲ್ಲಿ ಬಿಜೆಪಿಯ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ ಎಂದು ತಿಳಿಸಿದರು.
ತಮ್ಮದು ಜಾತ್ಯಾತೀತ ಪಕ್ಷವೆಂದು ಹೇಳಿಕೊಳ್ಳುವ ದೇವೇಗೌಡರು ಬಿಜೆಪಿಗೆ ಬೆಂಬಲ ನೀಡಬೇಕೆಂದು ಕಾರ್ಯಕರ್ತರಿಗೆ ಹೇಳುವ ಮೂಲಕ ಕೋಮುವಾದಿ ಹಾಗೂ ಹಿಟ್ಲರ್ ಸಂಸ್ಕೃತಿಯ ನರೇಂದ್ರ ಮೋದಿಯನ್ನು ಪ್ರಧಾನಿ ಮಾಡುವುದಕ್ಕೆ ಪರೋಕ್ಷವಾಗಿ ಸಹಕಾರ ನೀಡುತ್ತಿದ್ದಾರೆ ಎಂದು ದೂರಿದರು.ಮೋದಿ ವಿರುದ್ಧ ನಿರಂತರ: ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆ ಉಳಿಯಬೇಕಾದರೆ ಬಿಜೆಪಿ ಅಧಿಕಾರಕ್ಕೆ ಬರದಂತೆ ತಡೆಯುವ ಜವಾಬ್ದಾರಿ ಎಲ್ಲರ ಮೇಲಿದೆ. ಒಂದು ವೇಳೆ ಬಿಜೆಪಿ ಬಹುಮತ ಗಳಿಸಿ ಆ ಪಕ್ಷದ ಸಂಸದರು ಮೋದಿಯನ್ನು ಪ್ರಧಾನಿಯನ್ನಾಗಿ ಮಾಡಿದಲ್ಲಿ ಸ್ವಾಗತಿಸುತ್ತೇವೆ. ಆದರೆ, ನಾವು ಜೀವಂತವಾಗಿರುವವರೆಗೂ ಮೋದಿ ವಿರುದ್ಧ ಹೋರಾಟ ಮುಂದುವರೆಸುತ್ತೇವೆಂದು ಗೋವಿಂದರಾವ್ ಹೇಳಿದರು.
ನಾನು ಕಾಂಗ್ರೆಸ್ಸಿಗನಲ್ಲ: ಸಾಹಿತಿ ಡಾ.ಮರಳಸಿದ್ದಪ್ಪ ಮಾತನಾಡಿ, ನಾನು ಕಾಂಗ್ರೆಸ್ಸಿಗನಲ್ಲ. ಆದರೂ, ಮೋದಿ ಪ್ರಧಾನಿ ಆಗಬಾರದೆಂಬ ಉದ್ದೇಶದಿಂದ ಕಾಂಗ್ರೆಸ್ಗೆ ಬೆಂಬಲ ನೀಡುತ್ತಿರುವುದಾಗಿ ಹೇಳಿದರು.
ಈ ಬಾರಿಯ ಚುನಾವಣೆಯಲ್ಲಿ ರಾಜಕಾರಣಿಗಳು ಬೆಂಕಿ ಉಗುಳುವ ರೀತಿಯಲ್ಲಿ ಮಾತನಾಡುತ್ತಿದ್ದಾರೆ, ಮೋದಿ ಇಲ್ಲವೇ ಬೇರೆ ಯಾವುದೇ ಪಕ್ಷದವರಾಗಲಿ ಪರಸ್ವರ ನಿಂದನೆ ಮಾಡಬಾರದು. ಆದರೆ ಈ ಬಾರಿ ಹದ್ದು ಮೀರಿ ಮಾತನಾಡುವುದಕ್ಕೆ ಅವಕಾಶ ಮಾಡಿಕೊಟ್ಟಿದ್ದು ಮೋದಿಯೇ ಎಂದು ಆರೋಪಿಸಿದರು.
ಕ್ರಿಮಿನಲ್ಗಳಿಗೆ ಬೆಂಬಲವಿಲ್ಲ: ಬಿಜೆಪಿಯವರು ಕೋಮುವಾದಿಗಳು ಎನ್ನುವ ತಾವುಗಳು ಕಾಂಗ್ರೆಸ್ಸಿನಿಂದ ಸ್ಪರ್ಧಿಸಿರುವ ಕ್ರಿಮಿನಲ್ ಹಿನ್ನೆಲೆಯುಳ್ಳವರ ಬಗ್ಗೆ ಏನು ಹೇಳಿತ್ತೀರಾ ಎಂದು ಪತ್ರಕರ್ತರು ಕೇಳಿದಾಗ, ಕ್ರಿಮಿನಲ್ಗಳಿಗೆ ನಮ್ಮ ಬೆಂಬಲವಿಲ್ಲ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರನ್ನು ಬೆಂಬಲಿಸುತ್ತಿಲ್ಲ ಎಂದರು ತಮ್ಮ ಜೊತೆಯಲ್ಲಿದವರ ಹೇಳಿಕೆಗಳಿಗೆ ತದ್ವಿರುದ್ಧವಾಗಿ ಪ್ರತಿಕ್ರಿಯೆ ನೀಡಿದರು.
ಕನ್ನಡ ಪುಸಕ್ತ ಪ್ರಾಧಿಕಾರ ಮಾಜಿ ಅಧ್ಯಕ್ಷ ಪ್ರೊ.ಸಿದ್ದರಾಮಯ್ಯ ಮಾತನಾಡಿ, ರಾಜ್ಯದಲ್ಲಿ ಸಿದ್ದರಾಮಯ್ಯ ಆಡಳಿತ ಮುಂದುವರೆಯಬೇಕಾದ ಅನಿವಾರ್ಯತೆ ಇರುವುದರಿಂದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸುತ್ತಿದ್ದೇವೆ. ಡಿ.ಕೆ.ಸುರೇಶ್ ಬಗ್ಗೆ ಆರೋಪಗಳು ಇರುಬಹುದು. ಆದರೆ, ಕಾಂಗ್ರೆಸ್ ಬಹುಮತ ಬೇಕಾಗಿರುವುದರಿಂದ ಎಲ್ಲಾ 28 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪರವಾಗಿ ಮತ ಹೇಳುತ್ತೇವೆ ಎಂದು ಡಾ.ಮರಳಸಿದ್ದಪ್ಪ ಅಭಿಪ್ರಾಯಕ್ಕೆ ಸಾಮ್ಯತೆ ಇಲ್ಲದ ರೀತಿಯಲ್ಲಿ ಉತ್ತರಿಸಿದರು.
ದಲಿತ ಮುಖಂಡ ರುದ್ರಪ್ಪ, ಸಾಹಿತಿ ಜಿ.ಶರಣಪ್ಪ, ಸುಭಾಷ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

