ಜೆಡಿಎಸ್ ಅಭ್ಯರ್ಥಿ ಕೇಶವ ಪರ ಮುಸ್ಲಿಂ ಮುಖಂಡರ ಪ್ರಚಾರ
ಬಂಗಾರಪೇಟೆ: ಪಟ್ಟಣದ ವಿವೇಕಾನಂದ ನಗರ, ವಿಜಯನಗರ, ಶಾಂತಿನಗರ, ರಹೀಮ್ಗಾರ್ಡೆನ್, ಸೇಟ್ ಕಾಂಪೌಂಡ್, ಟಿಪ್ಪುನಗರಗಳಲ್ಲಿ ಪುರಸಭೆ ಸದಸ್ಯ ಸುಹೇಲ್ ನೇತ್ವದಲ್ಲಿ ಅಲ್ಪಸಂಖ್ಯಾತ ಮುಖಂಡರು ಜೆಡಿಎಸ್
ಅಭ್ಯರ್ಥಿ ಕೇಶವ ಪರ ಮನೆ ಮನೆಗೆ ತೆರಳಿ ಮತಯಾಚಿಸಿದರು.
ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದ ಜೆಡಿಎಸ್ ಯುವ ಮುಸ್ಲಿಂ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಪಟ್ಟಣದ ಕೆಎಸ್ಆರ್ಟಿಸಿ ಬಸ್ಸುನಿಲ್ದಾಣ, ಬಜಾರ್ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಘೋಷಣೆ ಕೂಗಿ ಜೆಡಿಎಸ್ ಅಭ್ಯರ್ಥಿ ಕೇಶವಗೆ ಮತ ಹಾಕುವಂತೆ ಮನವಿ ಮಾಡಿದರು. ಪುರಸಭೆ ಸದಸ್ಯ ಸುಹೇಲ್ ಮಾತನಾಡಿ, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಅಲ್ಪಸಂಖ್ಯಾತರು ಜೆಡಿಎಸ್ ಪರ ಮತ ಹಾಕಲಿದ್ದಾರೆ ಎಂದು ಅಭಿಪ್ರಾಯಪಟ್ಟರು. ಸಮಾಜಿಕ ನ್ಯಾಯಕ್ಕಾಗಿ ಹಾಗೂ ಕುಮಾರಣ್ಣ ಕೈ ಬಲಪಡಿಸಲು ಜೆಡಿಎಸ್ ಅಭ್ಯರ್ಥಿ ಗೆಲವು ಅನಿವಾರ್ಯ ಎಂದು ವಿಶ್ವಾಸ ವ್ಯೆಕ್ತಪಡಿಸಿದರು. ಪುರಸಭೆ ಸದಸ್ಯ ಖೇತಾನ್ ರವಿ, ಷಿರಾಜ್ ಅಹಮದ್,ರಮೇಶ್, ಶಂಕರ್, ರಮಣ್ಕುಮಾರ್, ತನ್ವೀರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

