ಮುನಿಯಪ್ಪ ಪರ ಪುತ್ರಿ ರೂಪಾಶಶಿಧರ್ ಪ್ರಚಾರಕೆಜಿಎಫ್: ಕೆಜಿಎಫ್ ಕ್ಷೇತ್ರದ ಬೇತಮಂಗಲ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಮೆರವಣಿಗೆಯಲ್ಲಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಪುತ್ರಿ ರೂಪಾಶಶಿಧರ್ ಪಾದಯಾ
ಕೆಜಿಎಫ್: ಕೆಜಿಎಫ್ ಕ್ಷೇತ್ರದ ಬೇತಮಂಗಲ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಮೆರವಣಿಗೆಯಲ್ಲಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಪುತ್ರಿ ರೂಪಾಶಶಿಧರ್ ಪಾದಯಾತ್ರೆ ಮೂಲಕ ಪಟ್ಟಣದ ಪ್ರಮುಖ ರಸ್ತೆ ಹಾಗೂ ಬೀದಿಗಳಲ್ಲಿ ಮತಯಾಚನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಕೇಂದ್ರ ಯುಪಿಎ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಹಿನ್ನಲೆಯಲ್ಲಿ ತಮ್ಮ ತಂದೆ ಕೆ.ಎಚ್.ಮುನಿಯಪ್ಪ ಅವರು ಜಿಲ್ಲೆಗೆ ರೇಲ್ವೆ ಕೋಚ್ ಕೈಗಾರಿಕೆ, ನಾಲ್ಕು ಪಥ ರಸ್ತೆ, ಬಿಜಿಎಂಎಲ್ ಪುನರುತ್ಥಾನ, ಎಂಎಸ್ಎಂಇ ತರಬೇತಿ ಘಟಕ ಸೇರಿದಂತೆಬಿಜಿಎಂಎಲ್ ಚಿನ್ನದ ಗಣಿ ಪುನಶ್ಚೇತನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದು, ಶಾಶ್ವತ ನೀರಾವರಿಗೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ ಜಿಲ್ಲೆಗೆ ಹಲವಾರು ಅಭಿವೃದ್ಧಿ ಕೆಲಸ ಮಾಡಿರುವ ಅವರನ್ನು ಮತ್ತೊಮ್ಮೆ ಗೆಲ್ಲಿಸಿ ಎಂದರು.
ಜಿಪಂ ಸದಸ್ಯ ಅ.ಮು.ಲಕ್ಷ್ಮೀನಾರಾಯಣ ಮಾತನಾಡಿ, ಜೆಡಿಎಸ್ ಅಭ್ಯರ್ಥಿ ಕೇಶವ ಯಾರಿಗೂ ಪರಿಚಯವಿಲ್ಲ. ಇಂತಹ ಅಭ್ಯರ್ಥಿ ಜಿಲ್ಲೆಯ ಅಬಿವೃದ್ಧಿಗೆ ಮತ್ತು ಜನರ ಸಂಕಷ್ಟಕ್ಕೆ ಏನು ಮಾಡಲು ಸಾಧ್ಯವಿಲ್ಲ ಎಂಬುದು ಜಿಲ್ಲೆಯ ಜನತೆಗೆ ತಿಳಿದಿದ್ದು, ಈ ನಿಟ್ಟಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಈ ಬಾರಿಯೂ ಹೆಚ್ಚು ಮತಗಳಿಂದ ಜಯಗಳಿಸುವುದು ಖಚಿತ ಎಂದರು.ಸ್ಥಳೀಯ ಮುಖಂಡರಾದ ದುರ್ಗಾಪ್ರಸಾದ್, ವೆಂಕಟರಾಮೇಗೌಡ, ಅಮಾನುಲ್ಲಾ, ಬಾಷಾ, ಅನ್ಸರ್, ನಾರಾಯಣಮ್ಮ, ಲಕ್ಷ್ಮೀದೇವಮ್ಮ ಹಾಗೂ ಇತರೆ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

