ಕೋಲಾರ

ಅಂಬೇಡ್ಕರ್ ತತ್ವ ಮೈಗೂಡಿಸಿಕೊಳ್ಳಲು ಕರೆ

Published On :

ಚಿಂತಾಮಣಿ: ಅಂಬೇಡ್ಕರ್ ಅವರ ತತ್ವ, ಸಿದ್ಧಾಂತಗಳು ಇಂದಿನ ಪೀಳಿಗೆ ಮೈಗೂಡಿಸಿಕೊಳ್ಳಬೇಕು. ಸಮಾಜದಲ್ಲಿನ ಅಸಮಾನತೆ, ಬಡತನ ಹೋಗಲಾಡಿಸಲು ಮುಂದಾಗಬೇಕು ತಹಸೀಲ್ದಾರ್ ಜಿ.ವಿ.ಹನುಮಂತರೆಡ್ಡಿ ಹೇಳಿದರು.
ನಗರದ ತಾಲೂಕು ಕಚೇರಿಯಲ್ಲಿ ಆಯೋಜಿಸಲಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯಲ್ಲಿ ಪಾಲ್ಗೊಂಡು ಮಾತನಾಡಿ ಅವರು, ಸ್ವಾತಂತ್ರ್ಯಪೂರ್ವ ಕಾಲದಲ್ಲಿ ದೇಶದಲ್ಲಿ ತಾಂಡವಾಡುತ್ತಿದ್ದ ಬಡತನ,ಅಶ್ಪೃಷ್ಯತೆ ಹೋಗಲಾಡಿಸಲು ಸಂವಿಧಾನ ಅಂಬೇಡ್ಕರ್ ಅವರ ಕೊಡುಗೆ ಅತಿ ಮುಖ್ಯವಾದದ್ದು ಎಂದರು.
ಅಲ್ಲಲ್ಲಿ ಆಚರಣೆ: ತಾಲೂಕಿನ ಬಟ್ಲಹಳ್ಳಿ ಪೋಲೀಸ್ ಠಾಣೆಯಲ್ಲಿ ಸಬ್‌ಇನ್ಸ್‌ಪೆಕ್ಟರ್ ಪ್ರವೀಣ್‌ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜಯಂತಿ ಆಚರಿಸಲಾಯಿತು.
ನಗರದ ಕೆಎಸ್‌ಆರ್‌ಟಿಸಿ ಘಟಕ ಹಾಗೂ ನಿಲ್ದಾಣದಲ್ಲಿ ನೂರಾರು ಕಾರ್ಮಿಕರು ಅಂಬೇಡ್ಕರ್ ಜಯಂತಿ ಆಚರಿಸಿದರು. ನಗರದ ಗ್ರಾಮಾಂತರ ಹಾಗೂ ನಗರ ಪೋಲೀಸ್ ಠಾಣೆಯಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಹೂಮಾಲೆ ಹಾಕಿ, ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳಾದ ವಸಂತ್ ಕುಮಾರ್, ನಾಗರಾಜ್, ಅಮೀರ್ ಪಾಷ, ಸಿದ್ದಯ್ಯ, ಮಂಜುಳ, ಮಧುಸೂದನರೆಡ್ಡಿ, ವಿಠ್ಠಲ್, ಪದ್ಮನಾಭ್, ಕೃಷ್ಣಪ್ಪ ಸೇರಿದಂತೆ ಅನೇಕರು ಹಾಜರಿದ್ದರು.

ಸಂವಿಧಾನ ಶಿಲ್ಪಿ ಅಂಬೇಡ್ಕರ್ ಆದರ್ಶ ಪಾಲಿಸಿ
ಗುಡಿಬಂಡೆ: ಶ್ರೇಷ್ಠ ವ್ಯಕ್ತಿಗಳ ಆದರ್ಶ ಬದುಕಿನಲ್ಲಿ ಅಳವಡಿಸಿಕೊಂಡಾಗ ಅವರಿಗೆ ನಿಜವಾದ ಗೌರವ ನೀಡಿದಂತಾಗುತ್ತದೆ ಎಂದು ಜೀವಿಕ ಸಂಘಟನೆಯ ಸಂಚಾಲಕ ರಾಮಂಜನೇಯ ಅಭಿಪ್ರಾಯಪಟ್ಟರು. ತಾಲೂಕಿನ ಹಂಪಸಂದ್ರ ಗ್ರಾಮದಲ್ಲಿ ಅಂಬೇಡ್ಕರ್ 123 ನೇ ಜನ್ಮದಿನಾಚರಣೆ ಅಂಗವಾಗಿ ಏರ್ಪಸಿದ್ದ ಘನತೆಯ ದಿನಕಾರ್ಯಕ್ರಮದಲ್ಲಿ ಮಾತನಾಡಿ, ಮಹಾತ್ಮರು ನಮ್ಮಿಂದ ದೂರವಾಗಿದ್ದರೂ ಅವರ ಆದರ್ಶಗಳಿಂದ ನಮ್ಮ ಹತ್ತಿರದಲ್ಲಿರುತ್ತಾರೆ ಎಂದರು. ಜೀವಕ ಮುಖಂಡ ಎಚ್.ವಿ. ಲಕ್ಷ್ಮೀನಾರಾಯಣಪ್ಪ ಮಾತನಾಡಿದರು. ಜೀವಿಕ ಸಂಘಟನೆಯ ಬಿ.ಸಿ. ಕೃಷ್ಣಪ್ಪ, ಶ್ರೀನಿವಾಸ್, ಸಂತೋಷ್ ಕುಮಾರ್, ಕಲಾವಿಧರಾದ ಪೃಥ್ವಿರಾಜ್, ಶಿವಕುಮಾರ್, ನಜೀರ್ ಸಾಭ್ ಇದ್ದರು.

ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ
ಬಂಗಾರಪೇಟೆ: ಅಂಬೇಡ್ಕರ್ ಅವರ 123ನೇ ಜನ್ಮದಿನಾಚರಣೆಯು ಸ್ವಾಭಿಮಾನ ಬದುಕಿನೊಂದಿಗೆ ಜನರಲ್ಲಿ ಬದಲಾವಣೆ ಕಾಣುವಂತಾಗಬೇಕು ಎಂದು ಕನ್ನಡ ಸಂಘದ ಅಧ್ಯಕ್ಷ ಪಲ್ಲವಿಮಣಿ ಅಭಿಪ್ರಾಯಪಟ್ಟರು. ಇಲ್ಲಿನ ಸರ್ಕಾರಿ ಆಸ್ಪತ್ರೆ ಒಳ ರೋಗಿಗಳಿಗೆ ಅಂಬೇಡ್ಕರ್ ಜಯಂತಿ ಪ್ರಯುಕ್ತ ದಲಿತ ಸಮಾಜ ಸೇನೆ ವತಿಯಿಂದ ಹಣ್ಣು ಹಂಪಲಗಳನ್ನು ವಿತರಣೆ ಮಾತನಾಡಿದರು. ಪ್ರಸ್ತುತ ಪರಿಸ್ಥಿತಿಯಲ್ಲಿ ಸಮಾಜದ ಎಲ್ಲಾ ವರ್ಗದವರು ಅವರ ಆದರ್ಶಗಳನ್ನು ಪಾಲಿಸಬೇಕೆಂದರೆ ಅವರ ಪುಸ್ತಕಗಳನ್ನು ಓದಬೇಕು ಎಂದರು.  ವೃತ್ತ ನಿರೀಕ್ಷಕ ವೆಂಕಟಾಚಲಪತಿ ಮಾತನಾಡಿದರು. ಪಿಎಸ್‌ಐ ಯೋಗಾನಂದ್ ಸೋನಾರ್, ಸೂಲಿಕುಂಟೆ ಆನಂದ್, ರಮೇಶ್, ಅಯ್ಯಪ್ಪ, ಯತೀಶ್, ಹುಣಸನಹಳ್ಳಿ ವೆಂಕಟೇಶ್ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.