ತೃತೀಯರಂಗದ್ದೇ ಸರ್ಕಾರ: ಎಂ.ಪಿ.ನಾಡಗೌಡ ವಿಶ್ವಾಸ
ಗೌರಿಬಿದನೂರು: ಕೇಂದ್ರದಲ್ಲಿ ಯುಪಿಎ, ಎನ್‌ಡಿಎರೇತರ ಸರ್ಕಾರ ಅಧಿಕಾರಕ್ಕೆ ಬರಲಿದೆ. ಪ್ರಾದೇಶಿಕ ಪಕ್ಷಗಳ ಒಕ್ಕೂಟಕ್ಕೆ ಪ್ರಧಾನಿ ಹುದ್ದೆ ಸಿಗಲಿದೆ ಎಂದು ಸಂಯುಕ್ತ ಜನತಾ ದಳದ ರಾಜ್ಯಾಧ್ಯಕ್ಷ ಡಾ.ಎಂ.ಪಿ.ನಾಡಗೌಡ ಹೇಳಿದರು.
ಗೌರಿಬಿದನೂರು ಪಟ್ಟಣದಲ್ಲಿ ಸಂಯುಕ್ತ ಜನತಾದಳದ ಚಿಕ್ಕಬಳ್ಳಾಪುರ ಕ್ಷೇತ್ರದ ಅಭ್ಯರ್ಥಿ ಜಿ.ಕೆ.ಸಿ.ರೆಡ್ಡಿ ಪರ ಮತಯಾಚನೆ ಮಾಡಿದ ಅವರು, ಮೋದಿ ಪ್ರಧಾನಿಯಾಗುವುದು ಕೇವಲ ಮಾಧ್ಯಮಗಳ ಸೃಷ್ಟಿ. ಗುಜರಾತ್‌ನಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ. ಬದಲಿಗೆ ಬಿಹಾರದಲ್ಲಿ ನಿತೀಶ್‌ಕುಮಾರ್ ಅವರು ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಅಭಿವೃದ್ಧಿಯಲ್ಲಿ ಬಿಹಾರ ನಂಬರ್ 1 ಸ್ಥಾನದಲ್ಲಿದ್ದರೆ, ನಂತರದ ಸ್ಥಾನದಲ್ಲಿ ಮಧ್ಯಪ್ರದೇಶ, ಗೋವಾ ಇದ್ದು, ನಂತರದಲ್ಲಿ ಗುಜರಾತ್ ಇದೆ ಎಂದರು. ಈ ಹಿಂದೆ ದೇವೇಗೌಡರು ರಾಜ್ಯದಲ್ಲಿ ಜೆಡಿಎಸ್ ಮತ್ತು ಜೆಡಿಯು ಒಗ್ಗೂಡಲಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವು, ಅಂಥ ಯಾವುದೇ ತೀರ್ಮಾನವಾಗಿಲ್ಲ ಎಂದರು. ಪಕ್ಷದ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಹಾಗೂ ಕರ್ನಾಟಕದ ಉಸ್ತುವಾರಿ ವಹಿಸಿರುವ ಅರುಣಶ್ರೀ ವಾಸ್ತವ್ ಮಾತನಾಡಿದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸಂಚಾಲಕರಾದ ಸದಾಶಿವ ಸೇರಿ ಅನೇಕರಿದ್ದರು.
ಸ್ಥಳೀಯ ಬಿಜೆಪಿಯಲ್ಲಿ ಭಿನ್ನಮತವಿಲ್ಲ
ಚಿಂತಾಮಣಿ: ಸ್ಥಳೀಯ ಬಿಜೆಪಿ ಘಟಕದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಅಭ್ಯರ್ಥಿ ನಾರಾಯಣಸ್ವಾಮಿ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಬೇಕು ಎಂದು ಕೋಲಾರ ಡಿಸಿಸಿ ಬ್ಯಾಂಕ್ ನಿರ್ದೇಶಕ ಸತ್ಯನಾರಾಯಣ ಮಹೇಶ್ ಹೇಳಿದರು. ನಗರದ ವಿವಿಧ ಪ್ರದೇಶಗಳಲ್ಲಿ ಬಿಜೆಪಿ ಅಭ್ಯರ್ಥಿ ಎಂ.ನಾರಾಯಣಸ್ವಾಮಿ ಪರವಾಗಿ ಪಾದಯಾತ್ರೆ ಮೂಲಕ ಮನೆ ಮನೆಗೆ ತೆರಳಿ ಮತಯಾಚಿಸಿದರು.ದೇಶವು ಎಂದಿಗಿಂತಲೂ ವಿಷಮ ಪರಿಸ್ಥಿತಿಯಲ್ಲಿದೆ. ಮೇರೆ ಮೀರಿದ ಭ್ರಷ್ಟಾಚಾರ. ಕುಸಿದಿರುವ ಕಾನೂನು ಸುವ್ಯವಸ್ಥೆ. ದಿವಾಳಿಯಾದ ಆರ್ಥಿಕ ಪರಿಸ್ಥಿತಿ, ಆಂತರಿಕ ಮತ್ತು ಬಾಹ್ಯ ಸುರಕ್ಷತೆಯ ಬಗ್ಗೆ ನಿರ್ಲಕ್ಷ್ಯ ಸೇರಿದಂತೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

