7ನೇ ಬಾರಿಗೆ ಗೆಲ್ಲಿಸಿ: ಮುನಿಯಪ್ಪ ಮನವಿ
ಕೆಜಿಎಫ್: ಯುಪಿಎ ಸರ್ಕಾರದಿಂದ ಕೆಜಿಎಫ್ ಸೇರಿದಂತೆ ಕೋಲಾರ ಜಿಲ್ಲೆಗೆ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ನಾನು ಮಾಡಿದ ಕೆಲಸ ನಿಮ್ಮ ಮುಂದಿದೆ. ಅದನ್ನು ಗುರುತಿಸಿ ನನ್ನನ್ನು 7ನೇ ಬಾರಿಗೆ ಗೆಲ್ಲಿಸಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಹೇಳಿದರು.
ನಗರದ ಮುನಿಸಿಪಲ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಜಿಲ್ಲೆಯಗೆ ಪರಿಚಯವಿಲ್ಲದ ಜೆಡಿಎಸ್ ಅಭ್ಯರ್ಥಿ ಕೆ.ಕೇಶವ ಅವರು ಯಾವ ಆಧಾರದ ಮೇಲೆ ಜನರ ಮುಂದೆ ಮತಯಾಚಿಸುತ್ತಾರೆ. ಚಿನ್ನದ ಗಣಿ ಪುನರಾರಂಭಕ್ಕೆ ಎಲ್ಲಾ ರೀತಿಯ ಹೋರಾಟಗಳನ್ನು ಮಾಡಿದ ಫಲವಾಗಿ ಇಂದು ಬಿಜಿಎಂಎಲ್ ಚಿನ್ನದ ಗಣಿ ಪುನಶ್ಚೇತಗೊಳಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದರು. ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದು ಈಗ ಪಕ್ಷಕ್ಕೆ ದ್ರೋಹ ಬಗೆದು ಬಿಜೆಪಿ ಸೇರಿರುವ ಎಂ.ನಾರಾಯಣಸ್ವಾಮಿ ಅವರಿಗೆ ಈ ಬಾರಿ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದರು. ಮುನಿಯಪ್ಪ ಅವರು ನಗರದ ಸೂರಜ್‌ಮುಲ್, ಗಾಂಧಿ ವೃತ್ತ, ಪ್ರೀಚರ್ಡ್, ಗೀತಾ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ರೋಡ್ ಶೋ ನಡೆಸಿದರು.
ಈ ವೇಳೆ ವಿಧಾನ ಪರಿಷತ್ ಸದಸ್ಯ ನಜೀರ್ ಅಹಮದ್, ಮುನಿಯಪ್ಪ ಪುತ್ರಿ ರೂಪಾ ಶಶಿಧರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಾಹೀದ್ ಶಾಜ್ಜಾದ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ್‌ರಾಜ್, ರಾಧಾಕೃಷ್ಣ ರೆಡ್ಡಿ, ಜಿಪಂ ಸದಸ್ಯರಾದ ಅ.ಮು.ಲಕ್ಷ್ಮಿನಾರಾಯಣ, ನಾರಾಯಣರೆಡ್ಡಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್, ಡಿ.ಜಯಪಾಲ್, ಗುಡಿರೆಡ್ಡಿ, ಬಿಸ್ಸೇಗೌಡ ಸೇರಿ ಅನೇಕ ಮುಖಂಡರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

