ಜಿಲ್ಲೆಯಾದ್ಯಂತ ತೀವ್ರ ಕಟ್ಟೆಚ್ಚರ
ಕೆಜಿಎಫ್: ಗುರುವಾರ ನಡೆಯಲಿರುವ ಮತದಾನ ನಿಮಿತ್ತ ಜಿಲ್ಲೆಯಾದ್ಯಂತ ಪೊಲೀಸ್ ಕಟ್ಟೇಚ್ಚರ ವಹಿಸುತ್ತಿದೆ ಎಂದು ಕೋಲಾರ ಹಾಗೂ ಕೆಜಿಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಹಿಲೋರಿ ಹೇಳಿರು.
ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಏರ್ಪಡಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮತನಾಡಿದ ಅವರು, 'ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಆಯಾ ಠಾಣಾ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿ ಯಾವುದೇ ಪೊಲೀಸ್ ಅಧಿಕಾರಿಗಳಾಗಲಿ, ಸಿಬ್ಬಂದಿಯಾಗಲಿ ಯಾವುದೇ ರಾಜಕೀಯ ಪಕ್ಷ ಮತ್ತು ಅಬ್ಯರ್ಥಿಗಳ ಜತೆ ಗುರುತಿಸಿಕೊಳ್ಳಬಾರದು. ಆ ತರಹ ಎಲ್ಲಾದರೂ ದೂರು ಕಂಡು ಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು' ಎಂದು ತಿಳಿಸಿದರು.
ಅಕ್ರಮಗಳು ನಡೆಯದಂತೆ ಕಟ್ಟಿನಿಟ್ಟಿನ ಕ್ರಮ ಕೈಗೊಳ್ಳಬೇಕು. ಸೂಕ್ತ ಚೆಕ್ಪೋಸ್ಟ್ಗಳನ್ನು ನಿರ್ಮಿಸಿ. ಅಕ್ರಮವಾಗಿ ಯಾವುದೇ ಬೆಲೆಬಾಳುವ ವಸ್ತುಗಳು ಉಡುಗೊರೆಗಳು ಹಣವನ್ನು ಕಂಡಲ್ಲಿ ಮುಟ್ಟುಗೊಲು ಹಾಕಿಕೊಂಡು ಕೂಡಲೇ ಪ್ರಕರಣ ದಾಖಲಿಸಿ. ಬಂದೂಕು, ಆಯುಧಗಳನ್ನು ಯಾರೂ ಸಾರ್ವಜನಿಕವಾಗಿ ಕೊಂಡೊಯ್ಯದಂತೆ ತಡೆಯರಿ. ಸಮಾಜಘಾತುಕ ಶಕ್ತಿಗಳು, ರೌಡಿ ಗೂಂಡಾ ಪಟ್ಟಿಯಲ್ಲಿರುವವರ ಮೇಲೆ ತೀವ್ರ ನಿಗಾ ಇಡಿ ಎಂದು ಸೂಚಿಸಿದರು. ಚುನಾವಣೆ ಪ್ರಯುಕ್ತ ಕೆಜಿಎಫ್ ಪೊಲೀಸ್ ಜಿಲ್ಲೆಯ ಸರಹದ್ದಿನಲ್ಲಿರುವ ಮತಗಟ್ಟೆಗಳ ಪೈಕಿ ಸೂಕ್ಷ್ಮ ಹಾಗೂ ಅತಿಸೂಕ್ಷ್ಮವೆಂದು ಗುರ್ತಿಸಿರುವ ಕಡೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು. ಸಭೆಯಲ್ಲಿ ಪೊಲೀಸ್ ಉಪರಕ್ಷಣಾಧಿಕಾರಿ ಎ.ಕೆ.ವಿವೇಕಾನಂದ, ಕೆಜಿಎಫ್ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಜಗದೀಶ್, ವಿಶೇಷ ತಹಸೀಲ್ದಾರ್ ವೆಂಕಟರಾಮಯ್ಯ, ಪೊಲೀಸ್ ವೃತ್ತ ನಿರೀಕ್ಷಕರಾದ ಜಿ.ಎನ್. ವಂಕಟಾಚಲಪತಿ, ಎಂ.ಡಿ.ಲಕ್ಷ್ಮೀನಾರಾಯಣ, ಎಂ.ಎಸ್.ಪವನ್ಕುಮಾರ್, ನಾರಾಯಣಸ್ವಾಮಿ, ಜಿಲ್ಲಾ ಪೊಲೀಸ್ ಕಚೇರಿಯ ಪೊಲೀಸ್ ನಿರೀಕ್ಷಕ ಜಿ.ಟಿ.ಸ್ವಾಮಿ,ಜಗದೀಶ್, ಎನ್.ಎನ್.ರಾಮರೆಡ್ಡಿ, ಆರ್ಪಿಐ ಕೆ.ಆರ್.ರಘು ಹಾಗೂ ಎಲ್ಲಾ ಪಿಎಸ್ಐಗಳು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

