ಕೆಜಿಎಫ್ ಗ್ರಾಮೀಣ ಪ್ರದೇಶದಲ್ಲಿ ಜೆಡಿಎಸ್ ಭರ್ಜರಿ ರೋಡ್ ಶೋ
ಕೆಜಿಎಫ್: ಜೆಡಿಎಸ್ ಅಭ್ಯರ್ಥಿ ಕೆ.ಕೇಶವ್ ಅವರು ಬೇತಮಂಗಲ ಹೋಬಳಿ, ಸುಂದರಪಾಳ್ಯ ಹೋಬಳಿ ಹಾಗೂ ಕ್ಯಾಸಂಬಳ್ಳಿ ಹೋಬಳಿಯ ವಿವಿಧ ಹಳ್ಳಿಗಳಲ್ಲಿ ಸೋಮವಾರ ಬಿರುಸಿನ ಪ್ರಚಾರ ಮಾಡಿದರು.
ಈ ವೇಳೆ ಮಾತನಾಡಿದ ಅವರು, 'ಚಿನ್ನದ ಗಣಿ ಪುನರಾರಂಭ ಮತ್ತು ಕಾರ್ಮಿಕರ ಮನೆಗಳನ್ನು ಅವರಿಗೆ ಸ್ವಂತಃ ಮಾಡುವ ಕೊಡುವ ಬಗ್ಗೆ ಸುಳ್ಳು ಭರವಸೆ ನೀಡುತ್ತಿರುವ ಮುನಿಯಪ್ಪ ಅವರು ಜನರನ್ನು ವಂಚಿಸುತ್ತಿದ್ದಾರೆ. 30 ವರ್ಷ ಕಾಲ ಸಂಸದರಾಗಿ, ಕೇಂದ್ರ ಸಚಿವರಾಗಿ ಈ ಜಿಲ್ಲೆಗೆ ಯಾವುದೇ ಅಭಿವೃದ್ಧಿ ಮಾಡಲಿಲ್ಲ. ಹೀಗಿದ್ದಾಗ್ಯೂ ಸುಳ್ಳು ಸಾಧನೆಯ ಕೈಪಿಡಿ ನೀಡುತ್ತಿರುವುದು ಹಾಸ್ಯಾಸ್ಪದ' ಎಂದು ಗೇಲಿ ಮಾಡಿದರು. ಬಳಿಕ ಮಾತನಾಡಿದ ಚಿಂತಾಮಣಿ ಶಾಸಕ ಸುಧಾಕರ್ರೆಡ್ಡಿ, ಮುನಿಯಪ್ಪ ಅವರು ಜಿಲ್ಲೆಯ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ತುಳಿದ, ಒಡೆದು ಆಳುವ ಕುತಂತ್ರವನ್ನು ಮಾಡಿಕೊಂಡು ಬಂದಿದ್ದೇ ಅವರ ಮಹ ಸಾಧನೆ! ಅವರ ರಾಜಕೀಯ ಆಟ ಇನ್ನು ನಡೆಯಲ್ಲ ಎಂದರು. ಮಾಜಿ ಸಚಿವ ಶ್ರೀನಿವಾಸಗೌಡ ಮಾತನಾಡಿ, 'ಜಿಲ್ಲೆಯ ಜನರು ಮುನಿಯಪ್ಪ ಹಟಾವೋ, ಕೋಲಾರ್ ಬಚಾವೋ ಎಂಬ ತೀರ್ಮಾನಕ್ಕೆ ಬಂದಿದ್ದಾರೆ' ಎಂದರು. ಈ ವೇಳೆ ಮಾಜಿ ಶಾಸಕರಾದ ಎಂ.ಭಕ್ತವತ್ಸಲಂ, ವೆಂಕಟಶಿವಾರೆಡ್ಡಿ, ಮುಖಂಡರಾದ ಜಯಸಿಂಹ ಕೃಷ್ಣಪ್ಪ, ಚಾನ್ ಬಾಯ್ ಸೇರಿದಂತೆ ಇತರೆ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.
ವಾಹನ ಕಾಯ್ದೆ ಉಲ್ಲಂಘಿಸಿದರೆ ದಂಡ ಖಚಿತ
ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯನ್ನು ನ್ಯಾಯಸಮ್ಮತವಾಗಿ ಹಾಗೂ ಪಾರದರ್ಶಿಕತೆಯಿಂದ ನಡೆಸುತ್ತಿರುವ ಸಂದರ್ಭದಲ್ಲಿ ಮೋಟಾರ್ ವಾಹನ ಕಾಯ್ದೆ ಉಲ್ಲಂಘನೆಯಾದಲ್ಲಿ ಸರಕು ಸಾಗಣೆ ವಾಹನ ಮಾಲೀಕರಿಂದ ದಂಡವನ್ನು ವಸೂಲಿ ಮಾಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಆರ್.ವಿಶಾಲ್ ಎಚ್ಚರಿಕೆ ನೀಡಿದ್ದಾರೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವೀಕ್ಷಕರು, ರಾಜಕೀಯ ಪಕ್ಷಗಳು ಪ್ರಚಾರದ ವೇಳೆಯಲ್ಲಿ ಸರಕು ಸಾಗಾಣಿಕೆ ವಾಹನಗಳಲ್ಲಿ ಸಾರ್ವಜನಿಕರನ್ನು ಪಕ್ಷದ ಹಿಂಬಾಲಕರನ್ನು, ಮತದಾರರನ್ನು ಸರಕು ಸಾಗಾಣಿಕೆ ವಾಹನಗಳಲ್ಲಿ ಬಳಸಿಕೊಳ್ಳುತ್ತಿರುವುದು ಗಮನಕ್ಕೆ ಬಂದಿದೆ. ಮಾಲೀಕರು ರಹದಾರಿ ಪಡೆದಿರುವ ಪ್ರಯಾಣಿಕರಿಗಿಂತ ಹೆಚ್ಚುವರಿಯಾಗಿ ಪ್ರಯಾಣಿಕರನ್ನು ಸಾಗಿಸುತ್ತಿರುವ ಪಕ್ಷದಲ್ಲಿ ದಂಡ ವಿಧಿಸಲಾಗತ್ತದೆ. ಸರಕು ಸಾಗಾಣಿಕೆ ವಾಹನದ ರಹದಾರಿಯನ್ನು ಅಮಾನತು ಪಡಿಸಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

