ಕೋಲಾರ

ಮತದಾನ ಜಾಗೃತಿಗೆ ಪಂಜಿನ ಮೆರವಣಿಗೆ

Published On :

ಕೋಲಾರ: ಮುಕ್ತ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿದ್ದು, ಪ್ರತಿಯೊಬ್ಬರೂ ಮತ ಹಾಕುವ ಮೂಲಕ ತಮ್ಮ ಕರ್ತವ್ಯ ನಿರ್ವಹಿಸುವಂತೆ ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಆರ್. ವಿನೋತ್ ಪ್ರಿಯಾ ಕರೆ ನೀಡಿದರು.
  ತಾಲೂಕಿನ ವೇಮಗಲ್‌ನಲ್ಲಿ ಮಂಗಳವಾರ ಸಂಜೆ ಜಿಪಂ, ತಾಲೂಕು ಸ್ವೀಪ್ ಸಮಿತಿ ಏರ್ಪಡಿಸಿದ್ದ ಮತದಾನ ಜಾಗೃತಿ ಪಂಜಿನ ಮೆರವಣಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ನಾಡನ್ನು ಕಟ್ಟುವ ನಾಯಕನಿಗೆ ಮತಹಾಕಬೇಕು. ಪ್ರತಿಯೊಬ್ಬರೂ ಮುಕ್ತಮತದಾನದಲ್ಲಿ ಭಾಗವಹಿಸಬೇಕು ಎಂದರು. ಇದೇ ಸಂದರ್ಭದಲ್ಲಿ ಏರ್ಪಡಿಸಿದ್ದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಿಪಂ ಉಪಕಾರ್ಯದರ್ಶಿ ಜಿ.ಎಫ್. ಬದನೂರು ಮಾತನಾಡಿ, ತಾವು ಮತದಾನ ಮಾಡುವ ಜೊತೆಗೆ ತಮ್ಮ ನೆರೆಹೊರೆಯವರಿಗೂ ಮತದಾನದ ಜಾಗೃತಿ ಮೂಡಿಸುವುಂತೆ ತಿಳಿಸಿದರು.
  ಜಿಲ್ಲಾ ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಸಿ.ಎಂ. ರಂಗಾರೆಡ್ಡಿ, ಮತದಾನದ ಪಾವಿತ್ರ್ಯತೆಯ ಬಗ್ಗೆ ತಿಳಿಸಿದರು.  ಗ್ರಾಮಾದ್ಯಂತ ಸಂಚಾರ ಮಾಡಿದ ಪಂಜಿನ ಮೆರೆವಣಿಗೆಯಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಡಿ. ಜಾನಕಿರಾಮ್, ಸಹಾಯಕ ಕಾರ್ಯಪಾಲಕ ಅಭಿಯಂತರ ಮಂಜುನಾಥ್, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಕೆ.ಸಿ. ಶಾಲಿನಿ ಸೇರಿ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.