ಕೋಲಾರ

ಮೋದಿ ಪ್ರಧಾನಿಯಾದ್ರೆ ಅಭಿವೃದ್ಧಿ

Published On :

ಕೆಜಿಎಫ್: ಅಟಲ್ ಬಿಹಾರಿ ವಾಜಪೇಯಿ ಅವರು ಭಾರತವನ್ನ ಪ್ರಗತಿಯತ್ತ ಕೊಂಡೊಯ್ಯದಂತೆ ನರೇಂದ್ರ ಮೋದಿ ಅವರು ಪ್ರಧಾನಿಯಾದರೆ ದೇಶವನ್ನು ಅಭಿವೃದ್ಧಿ ಮಾಡುತ್ತಾರೆ ಎಂದು ಶಾಸಕಿ ವೈ.ರಾಮಕ್ಕ ಹೇಳಿದರು.
ಕೆಜಿಎಫ್ ಕ್ಷೇತ್ರದ ಬೇತಮಂಗಲ, ಸುಂದರಪಾಳ್ಯ, ಕ್ಯಾಸಂಬಳ್ಳಿ ಹೋಬಳಿ ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದಲ್ಲಿ ಬಿಜೆಪಿ ಅಭ್ಯರ್ಥಿ ಎಂ.ನಾರಾಯಣಸ್ವಾಮಿ ಪರ ಮತಯಾಚಿಸಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಕೋಲಾರ ಬಿಜೆಪಿ ಅಭ್ಯರ್ಥಿಯನ್ನು ಅತಿ ಹೆಚ್ಚು ಮತಗಳಿಂದ ಗೆಲ್ಲಿಸಬೇಕು ಎಂದು ಹೇಳಿದರು. ಗುಜರಾತ್‌ನಲ್ಲಿ ಮೋದಿ ಮಾಡಿದ ಸಾಧನೆಗಳು ನಮ್ಮ ಕರ್ನಾಟಕ ರಾಜ್ಯದಲ್ಲೂ  ಆಗಬೇಕು. ನದಿಗಳ ಜೋಡಣೆ ಮೂಲಕ ಕೃಷಿಗೆ ನೀರು, ಅಂತರ್ಜಲ ವೃದ್ಧಿಗಾಗಿ ಚೆಕ್ ಡ್ಯಾಂಗಳು ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ಧಿಯಾಗಲು ಮೋದಿ ಪ್ರಧಾನಿಯಾಗಲೇಬೇಕು ಎಂದರು. 30 ವರ್ಷಗಳಿಂದ ಕೋಲಾರ ಜಿಲ್ಲೆಯ ಜನತೆಯನ್ನು ವಂಚಿಸುತ್ತಾ ಬಂದಿರುವ ಕೆ.ಹೆಚ್.ಮುನಿಯಪ್ಪ ಜಿಲ್ಲೆಯಲ್ಲಿ ಕನಿಷ್ಠ ಕೆಜಿಎಫ್ ಕ್ಷೇತ್ರದ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಿಲ್ಲ ಎಂದರು. ಈ ವೇಳೆ ಮಾಜಿ ಶಾಸಕ ವೈ.ಸಂಪಂಗಿ ಮಾತನಾಡಿದರು. ಈ ವೇಳೆ ನಗರ ಘಟಕ ಅಧ್ಯಕ್ಷರಾದ ಸುರೇಶ್‌ನಾರಾಯಕುಟ್ಟಿ, ಗಾಮೀಣ ಪ್ರದೇಶದ ಮುಖಂಡರಾದ ವಿಜಯಶಂಕರ್, ಮುನಿಸ್ವಾಮಿರೆಡ್ಡಿ, ಅಮರನಾರಾಯಣರೆಡ್ಡಿ, ಡಾ.ಕೃಷ್ಣಮೂರ್ತಿ, ಗ್ರಾಪಂ ಮುಖಂಡರು ಸೇರಿದಂತೆ ನೂರಾರು ಕಾರ್ಯಕರ್ತರು ಹಾಜರಿದ್ದರು.

ಕಾಂಗ್ರೆಸ್‌ಗೆ ಮತ ನೀಡಿ: ಮುನಿಯಪ್ಪ
ಚಿಂತಾಮಣಿ: ಜಾತ್ಯತೀತ ಭಾರತ ದೇಶದ ಉಳಿವುಗಾಗಿ ಕಾಂಗ್ರೆಸ್‌ಗೆ ಮತ ನೀಡಿ, ನನ್ನನ್ನು ಗೆಲ್ಲಿಸಬೇಕೆಂದು ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಮನವಿ ಮಾಡಿಕೊಂಡರು. ನಗರದ ರಾಯಲ್ ವೃತ್ತದಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿದ ಅವರು, 'ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಹಾಗೂ ಪ್ರಧಾನಿ ಮನಮೋಹನ್ ಸಿಂಗ್ ನಾಯಕತ್ವದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಯುಪಿಎಸ್ ಸರ್ಕಾರ ಮಾಡಿದೆ. ಹಾಗಾಗಿ ಕಾಂಗ್ರೆಸ್ ಗೆಲ್ಲಿಸಬೇಕು' ಎಂದು ಅವರು ಕರೆ ನೀಡಿದರು. ಈ ಸಂದರ್ಭದಲ್ಲಿ ಜಿಪಂ ಸದಸ್ಯರಾದ ಶೇಕ್ ಮೌಲಾ, ಮಂಜುಳ ನರಸಿಂಹಮೂರ್ತಿ, ಮುಖಂಡರಾದ ವಾಣಿಕೃಷ್ಣಾ ರೆಡ್ಡಿ, ಎಸ್.ವಿ.ನರೇಶ್ ಕುಮಾರ್, ರಾಯಲ್ ರಾಮಕೃಷ್ಣರೆಡ್ಡಿ ಸೇರಿ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.