ಮತ್ತೆ ಕಾಣಿಸಿದ ಕಾಡಾನೆ: ಮತದಾನಕ್ಕೆ ಭೀತಿ
ಬಂಗಾರಪೇಟೆ: ಕಳೆದ ನಾಲ್ಕು ತಿಂಗಳಿಂದ ಕಾಡಾನೆಗಳ ಹಾವಳಿಯಿಲ್ಲದೆ ನೆಮ್ಮದಿಯಾಗಿದ್ದ ಗ್ರಾಮಸ್ಥರಿಗೆ ಮತ್ತೆ ಏಳು ಕಾಡಾನೆಗಳು ಪ್ರತ್ಯಕ್ಷವಾಗಿ ಬೆಳೆ ನಾಶ ಮಾಡುವ ಮೂಲಕ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿವೆ.
ಕಳೆದ ವರ್ಷ ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ತಮಿಳುನಾಡಿನಿಂದ ಆಹಾರ ಹುಡುಕಿ ರಾಜ್ಯದ ಗಡಿ ಭಾಗದ ತಮಟಮಾಕನಹಳ್ಳಿ, ಯರಗೋಳ್ ಅರಣ್ಯ ಮೂಲಕ ಕಾಮಸಮುದ್ರ ಹೋಬಳಿಯ ವಿವಿಧ ಗ್ರಾಮಗಳಿಗೆ ಲಗ್ಗೆ ಹಾಕಿ ಬರದಲ್ಲಿಯೂ ಬೆಳೆ ಹಾನಿ ಮಾಡಿದ್ದ ಆನೆಗಳನ್ನು ಮತ್ತೆ ತಮಿಳುನಾಡಿನತ್ತ ಕಳುಹಿಸಲು ಅರಣ್ಯ ಇಲಾಖೆ ಸಿಬ್ಬಂದಿ ಎರಡು ತಿಂಗಳುಗಳೇ ಬೇಕಾಯಿತು.
ಮಂಗಳವಾರ ರಾತ್ರಿ ಮತ್ತೆ ಮೂತನೂರು ಕಾಡಿನಿಂದ 7 ಆನೆಗಳು ಪ್ರವೇಶ ಮಾಡಿ ದೋಣಿಮಗಡು ಪಂಚಾಯ್ತಿಯ ಬತ್ತಲಹಳ್ಳಿ, ಕಾಳಮ್ಮನಗುಡಿ, ಬಂದಾರ್ಲಹಳ್ಳಿ ಕಾಡಿನಲ್ಲಿ ವಾಸ್ತವ್ಯ ಹೂಡಿ ಬತ್ತಲಹಳ್ಳಿ ಗ್ರಾಮದ ವೆಂಕಟೇಶಪ್ಪ ಎಂಬುವರ ರಾಗಿ ಬೆಳೆ ನಾಶಪಡಿಸಿವೆ.
17ರಂದು ಲೋಕಸಭೆ ಚುನಾವಣೆ ಇದ್ದು ಕಾಡಂಚಿನಲ್ಲಿರುವ ಗ್ರಾಮಸ್ಥರು ಮನೆಗಳಿಂದ ಹೊರ ಬಂದು ಮತ ಚಲಾಯಿಸಲು ಆನೆಗಳಿಗೆ ಹೆದರುವಂತಾಗಿದೆ.
ವಿಷಯ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿ ಮಂಗಳವಾರ ರಾತ್ರಿಯೇ ಆನೆಗಳನ್ನು ಓಡಿಸಲು ಕಾರ್ಯಚರಣೆ ಕೈಗೊಂಡಿದ್ದಾರೆ.ಅನಾಹುತ ಸಂಭವಿಸುವ ಮುನ್ನ ಇಲಾಖೆ ಸೂಕ್ತ ಕ್ರಮ ಕೈಗೊಂಡು ಆನೆಗಳಿಂದ ಗ್ರಾಮಸ್ಥರಿಗೆ ಮುಕ್ತಿ ಕಾಣಿಸಬೇಕೆಂದು ಗ್ರಾಮಸ್ಥರು ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

